BWF ರ‍್ಯಾಂಕಿಂಗ್: ಅಗ್ರ 20ಯೊಳಗೆ ಸಾತ್ವಿಕ್, ಅಶ್ವಿನ್ ಪೊನ್ನಪ್ಪಗೆ ಸ್ಥಾನ
ಭಾರತದ ತಾರಾ ಬ್ಯಾಡ್ಮಿಂಟನ್ ಪಟುಗಳಾದ ಸಾತ್ವಿಕ್ ಸಾಯಿರಾಜ್ ಹಾಗೂ ಅಶ್ವಿನಿ ಪೊನ್ನಪ್ಪ ನೂತನವಾಗಿ ಬಿಡುಗಡೆಯಾದ ವಿಶ್ವ ಬ್ಯಾಡ್ಮಿಂಟನ್ ರ‍್ಯಾಂಕಿಂಗ್‌ನಲ್ಲಿ ಅಗ್ರ 20ರಲ್ಲಿ ಸ್ಥಾನ ಪಡೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ನವದೆಹಲಿ(ಫೆ.03): ಭಾರತದ ಮಿಶ್ರ ಡಬಲ್ಸ್ ಶಟ್ಲರ್‌ಗಳಾದ ಸಾತ್ವಿಕ್ ಸಾಯಿರಾಜ್ ಹಾಗೂ ಅಶ್ವಿನಿ ಪೊನ್ನಪ್ಪ, ಮಂಗಳವಾರ ನೂತನವಾಗಿ ಬಿಡುಗಡೆಯಾದ ವಿಶ್ವ ಬ್ಯಾಡ್ಮಿಂಟನ್ ರ‍್ಯಾಂಕಿಂಗ್‌ನಲ್ಲಿ ಅಗ್ರ 20ರಲ್ಲಿ ಸ್ಥಾನ ಪಡೆದಿದ್ದಾರೆ.
ಥಾಯ್ಲೆಂಡ್ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್‌ಗೇರಿದ್ದ ಸಾತ್ವಿಕ್-ಅಶ್ವಿನಿ ಜೋಡಿ ವಿಶ್ವ ರ‍್ಯಾಂಕಿಂಗ್‌ನಲ್ಲಿ 16 ಸ್ಥಾನ ಜಿಗಿತ ಕಂಡು 19ನೇ ಸ್ಥಾನಕ್ಕೇರಿದೆ. ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್, ಚಿರಾಗ್ ಶೆಟ್ಟಿ ಜೋಡಿ 10ನೇ ಸ್ಥಾನ ಪಡೆದಿದೆ. ಮಹಿಳಾ ಸಿಂಗಲ್ಸ್‌ನಲ್ಲಿ ಪಿ.ವಿ. ಸಿಂಧು 7, ಸೈನಾ 19ನೇ ಸ್ಥಾನದಲ್ಲಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ಕೆ. ಶ್ರೀಕಾಂತ್ 13, ಸಮೀರ್ ವರ್ಮಾ 27ನೇ ಸ್ಥಾನ ಪಡೆದಿದ್ದಾರೆ.
ವಿಶ್ವ ಟೂರ್ ಫೈನಲ್ಸ್: ಸಿಂಧುಗೆ ಗೆಲುವು, ಶ್ರೀಕಾಂತ್‌ಗೆ ಸೋಲು
ಒಟ್ಟಾರೆ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಜಪಾನಿನ ಕೆಂಟೋ ಮೊಮಟ ಮೊದಲ ಸ್ಥಾನ ಪಡೆದಿದ್ದರೆ, ಡೆನ್ಮಾರ್ಕ್‌ನ ವಿಕ್ಟರ್ ಅಕ್ಸೆಲೆನ್ ಎರಡನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಇನ್ನು ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಚೈನೀಸ್ ತೈಪೆಯ ತೈ ತ್ಸು ಯಿಂಗ್ ಮೊದಲ ಸ್ಥಾನ ಉಳಿಸಿಕೊಂಡಿದ್ದರೆ, ಚೀನಾದ ಚೆನ್ ಯು ಫೀ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನುಳಿದಂತೆ ಸ್ಪೇನ್‌ನ ಕರೋಲಿನಾ ಮರೀನ್, ಜಪಾನಿನ ನಜೋಮಿ ಒಕೋಹರ, ಅಕಾನೆ ಯಮಗುಚಿ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ.