ಪ್ಯಾರಿಸ್(ಜೂ.10)‌: ಫ್ರೆಂಚ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಂನ ಮಹಿಳಾ ಸಿಂಗಲ್ಸ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಹಾಲಿ ಚಾಂಪಿಯನ್‌ ಪೋಲೆಂಡ್‌ನ ಇಗಾ ಸ್ವಿಯಾಟೆಕ್‌ ಸೋಲುಂಡು ಹೊರಬಿದ್ದಿದ್ದಾರೆ. 

ಗ್ರೀಸ್‌ನ ಮಾರಿಯಾ ಸಕ್ಕಾರಿ ವಿರುದ್ಧ ನಡೆದ ಅಂತಿಮ 8ರ ಸುತ್ತಿನ ಪಂದ್ಯದಲ್ಲಿ ಸ್ವಿಯಾಟೆಕ್‌, 4-6, 4-6 ನೇರ ಸೆಟ್‌ಗಳಲ್ಲಿ ಸೋಲುಂಡರು. ಸಕಾರಿ, ಚೆಕ್‌ ಗಣರಾಜ್ಯದ ಬಾರ್ಬೊರಾ ಕ್ರೆಜಿಕೋವಾ, ಸ್ಲೋವೇನಿಯಾದ ತಮಾರ ಜಿಡಾನ್ಸೆಕ್‌, ರಷ್ಯಾದ ಅನಸ್ತಾಸಿಯಾ ಪಾವ್ಲು್ಯಚೆಂಕೋವಾ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಈ ನಾಲ್ವರೂ ಮೊದಲ ಬಾರಿಗೆ ಗ್ರ್ಯಾನ್‌ ಸ್ಲಾಂ ಟೂರ್ನಿಯ ಸೆಮೀಸ್‌ಗೇರಿರುವುದು ವಿಶೇಷ. 

ಫ್ರೆಂಚ್‌ ಓಪನ್‌: ಜೋಕೋವಿಚ್ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆ

ಸತತ 5ನೇ ವರ್ಷ ಫ್ರೆಂಚ್‌ ಓಪನ್‌ ಮಹಿಳಾ ಸಿಂಗಲ್ಸ್‌ ಹೊಸ ಚಾಂಪಿಯನ್‌ಗೆ ಸಾಕ್ಷಿಯಾಗಲಿದೆ. ಇದೇ ವೇಳೆ ಪುರುಷರ ಸಿಂಗಲ್ಸ್‌ ಸೆಮಿಫೈನಲ್‌ಗೆ ಗ್ರೀಸ್‌ನ ಸ್ಟೆಫಾನೋಸ್‌ ಸಿಸ್ಟಿಪಾಸ್‌ ಹಾಗೂ ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೆವ್‌ ಪ್ರವೇಶ ಪಡೆದಿದ್ದಾರೆ.