Asianet Suvarna News Asianet Suvarna News

ಬೆಂಗ್ಳೂರಲ್ಲಿ ಖೇಲೋ ಇಂಡಿಯಾ ಉತ್ಕೃಷ್ಟತಾ ಕೇಂದ್ರ

ವಿದ್ಯಾನಗರದ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು ಖೇಲೋ ಇಂಡಿಯಾ ‘ರಾಜ್ಯ ಉತ್ಕೃಷ್ಟತಾ ಕೇಂದ್ರ’ವೆಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಘೋಷಿಸಿದ್ದಾರೆ. ಏನಿದರ ವಿಶೇಷತೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

Garden City Bengaluru gets Khelo India Centre of Excellence kvn
Author
Bengaluru, First Published Dec 23, 2020, 12:25 PM IST

ಬೆಂಗಳೂರು(ಡಿ.23): ನಗರದ ಹೊರವಲಯದಲ್ಲಿರುವ ವಿದ್ಯಾನಗರದ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು ಖೇಲೋ ಇಂಡಿಯಾ ‘ರಾಜ್ಯ ಉತ್ಕೃಷ್ಟತಾ ಕೇಂದ್ರ’ವೆಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಘೋಷಿಸಿದರು. 

ಮಂಗಳವಾರ ವರ್ಚುವಲ್ ಮಾಧ್ಯಮದ ಮೂಲಕ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರ ಸೇರಿದಂತೆ ಭಾರತದ 8 ರಾಜ್ಯಗಳ ಕ್ರೀಡಾ ಕೇಂದ್ರಗಳಿಗೆ ಈ ಮಾನ್ಯತೆ ನೀಡಿರುವುದನ್ನು ಘೋಷಿಸಲಾಯಿತು. ಜಯ ಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳ ತರಬೇತಿ ನೀಡಲಾಗುವುದು. 

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಅತ್ಯುತ್ತಮ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ವಿದ್ಯಾನಗರದ ಯುವ ಕೇಂದ್ರಕ್ಕೆ ಉತ್ಕೃಷ್ಟತಾ ಕೇಂದ್ರದ ಮಾನ್ಯತೆ ದೊರೆತಿರುವುದರಿಂದ ಕ್ರೀಡೆಗೆ ಇನ್ನಷ್ಟು ಮೂಲ ಸೌಲಭ್ಯ ಒದಗಿಸಲು ಅನುಕೂಲವಾಗಲಿದೆ. ರಾಜ್ಯದಲ್ಲಿ ಕ್ರೀಡಾ ಹಾಸ್ಟೆಲ್‌ಗಳು ಮತ್ತು ಇತರ ಸಂಘ ಸಂಸ್ಥೆಗಳಿಂದ ಒಲಂಪಿಕ್ ಪದಕ ಗೆಲ್ಲಬಲ್ಲ ಸಾಮರ್ಥ್ಯವುಳ್ಳ 32 ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. 

ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ (ಸ್ವತಂತ್ರ ಪ್ರಭಾರ) ಕಿರಣ್ ರಿಜಿಜು ಅವರು ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರಗಳಲ್ಲಿ ಅತ್ಯುತ್ತಮ ಮೂಲಸೌಕರ್ಯ ಹಾಗೂ ಮಾನವ ಸಂಪನ್ಮೂಲ ಒದಗಿಸುವ ಮೂಲಕ ದೇಶವನ್ನು ಕ್ರೀಡಾ ಕ್ಷೇತ್ರದಲ್ಲಿ ಮುಂಚೂಣಿಯ ದೇಶವಾಗಿ ರೂಪಿಸಲು ಉದ್ದೇಶಿಸಲಾಗಿದೆ. 2028ರ ಲಾಸ್ ಏಂಜೆಲಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟ ದಲ್ಲಿ ಅತಿಹೆಚ್ಚು ಪದಕಗಳನ್ನು ಗೆಲ್ಲುವ ಗುರಿಯಿಂದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಅತ್ಯುತ್ತಮ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

2021ರ ವಿಶ್ವ ಬ್ಯಾಡ್ಮಿಂಟನ್: 6 ತಿಂಗಳ ವೇಳಾಪಟ್ಟಿ ಪ್ರಕಟ

ಕಾರ್ಯಕ್ರಮದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ವಿವಿಧ ರಾಜ್ಯಗಳ ಕ್ರೀಡಾ ಇಲಾಖೆ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು. 

8 ರಾಜ್ಯಗಳಲ್ಲಿ ಕೇಂದ್ರ ಅನಾವರಣ: ದೇಶದ 8 ರಾಜ್ಯಗಳಲ್ಲಿ ಮಂಗಳವಾರ ಖೇಲೋ ಇಂಡಿಯಾ ಉತ್ಕೃಷ್ಟತಾ ಕೇಂದ್ರವನ್ನು ಕೇಂದ್ರವನ್ನು ಆನ್‌ಲೈನ್ ಮೂಲಕ ಉದ್ಘಾಟಿಸಿದ್ದಾರೆ. ಕರ್ನಾಟಕ, ಅರುಣಾಚಲ ಪ್ರದೇಶ, ಕೇರಳ, ಮಣಿಪುರ, ಮಿಜೋರಾಂ, ಒಡಿಶಾ ಮತ್ತು ತೆಲಂಗಾಣ ರಾಜ್ಯಗಳಲ್ಲಿನ ಕೇಂದ್ರ ಮಂಗಳವಾರ ಅನಾವರಣಗೊಂಡಿದೆ. ಆಯಾ ರಾಜ್ಯ ಸರ್ಕಾರಗಳ ಕ್ರೀಡಾ ಇಲಾಖೆ ಹಾಗೂ ಕೇಂದ್ರ ಕ್ರೀಡಾ ಸಚಿವಾಲಯ ಜಂಟಿಯಾಗಿ ಈ ಯೋಜನೆಯಲ್ಲಿ ಕಾರ್ಯನಿರ್ವಹಿಸಲಿದೆ. ಮೊದಲ ಹಂತದಲ್ಲಿ 8 ರಾಜ್ಯಗಳಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಪ್ರತಿ ರಾಜ್ಯಗಳಲ್ಲೂ 3 ಕ್ರೀಡೆಗಳನ್ನು ಆಯ್ಕೆ ಮಾಡಿಕೊಂಡು ಉತ್ತಮ ದರ್ಜೆಗೇರಿಸುವ ಯೋಜನೆ ಹಾಕಿಕೊಳ್ಳಲಾಗಿದೆ.

Follow Us:
Download App:
  • android
  • ios