Heartbreak: Vinesh Phogat Likely to Miss Paris Olympic Gold Medal Due to Disqualification ವಿನೇಶ್ ಫೋಗಟ್ ಚಿನ್ನ ಗೆಲ್ಲುವ ಕನಸು ನುಚ್ಚುನೂರಾಗಿದೆ. ಮಹಿಳೆಯರ 50 ಕೆ.ಜಿ. ಪ್ರಿಸ್ಟೈಲ್ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶ್ ಫೋಗಟ್ 100 ಗ್ರಾಮ್ ಹೆಚ್ಚಿನ ತೂಕ ಹೊಂದಿರುವುದರಿಂದ ಐಒಸಿ ಅನರ್ಗ ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಒಲ್ಲಿದೆ
ಪ್ಯಾರಿಸ್: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ವಿನೇಶ್ ಫೋಗಟ್‌ಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ ಗೆಲ್ಲುವ ಕನಸು ನುಚ್ಚುನೂರಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಂಸ್ಥೆಯು ವಿನೇಶ್ ಫೋಗಟ್ ಅವರನ್ನು ಅನರ್ಹ ಮಾಡಿದೆ. 50 ಕೆ ಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶ್ ಫೋಗಟ್ ಫೈನಲ್ ಪ್ರವೇಶಿಸಿದ್ದರು.
ಆದರೆ ಇದೀಗ ಮೂಲಗಳ ಪ್ರಕಾರ, ವಿನೇಶ್ ಫೋಗಟ್ ಅವರು ನಿಗದಿತ 50 ಕೆಜಿ ತೂಕಕ್ಕಿಂತ 100 ಗ್ರಾಮ ಹೆಚ್ಚಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ನಿಗದಿತ ತೂಕಕ್ಕಿಂತ 100 ಗ್ರಾಮ್ ಹೆಚ್ಚಿರುವುದರಿಂದ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯು, ವಿನೇಶ್ ಅವರನ್ನು ಅನರ್ಹಗೊಳಿಸಿದೆ ಎಂದು ವರದಿಯಾಗಿದೆ.
ಪ್ರಿಕ್ವಾರ್ಟರ್ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಹಾಗೂ ವಿಶ್ವ ನಂ.1 ಕುಸ್ತಿಪಟುವಾಗಿದ್ದ ಜಪಾನಿನ ಯ್ಯೂ ಸುಸುಕಿ ವಿರುದ್ದ 3-2 ಅಂತರದಲ್ಲಿ ರೋಚಕ ಗೆಲುವು ಸಾಧಿಸಿದ್ದ ಫೋಗಟ್, ಕ್ವಾರ್ಟರ್ ಫೈನಲ್‌ನಲ್ಲಿ ಆಕ್ರಮಣಕಾರಿ ಆಟಕ್ಕೆ ಮೊರೆ ಹೋದರು. ಉಕ್ರೇನ್‌ನ ಮೂರು ಬಾರಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಒಕ್ಸಾನಾ ಲಿವೀಚ್ ಎದುರು 7-5 ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮೀಸ್‌ಗೆ ಲಗ್ಗೆಯಿಟ್ಟಿದ್ದರು. ಕ್ಯೂಬಾದ ಯುಸ್‌ನೈಲೆಸ್ ಗುಜ್ಮನ್ ಎದುರು ದಿಟ್ಟ ಹೋರಾಟ ತೋರಿದ ವಿನೇಶ್ ಇದೀಗ ಫೈನಲ್ ಪ್ರವೇಶಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದರು. ಸೆಮೀಸ್‌ನಲ್ಲಿ ವಿನೇಶ್ 5-0 ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ್ದರು.
ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯು ಇದೀಗ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದರಿಂದ, ಅವರು ಒಲಿಂಪಿಕ್ ಪದಕ ಗೆಲ್ಲುವ ಕನಸು ನುಚ್ಚುನೂರಾಗಿದೆ. ಆದರೆ ಐಒಸಿ ತೀರ್ಮಾನದ ಎದುರು ಪ್ರತಿಭಟನೆ ಸಲ್ಲಿಸಲು ಭಾರತ ಮುಂದಾಗಿದೆ ಎಂದು ವರದಿಯಾಗಿದೆ.
