2026ರ ವಿಶ್ವ ಬ್ಯಾಡ್ಮಿಂಟನ್‌ ಟೂರ್ನಿಗೆ ಭಾರತ ಆತಿಥ್ಯ

* ವಿಶ್ವ ಬ್ಯಾಡ್ಮಿಂಟನ್‌ ಟೂರ್ನಿಗೆ ಆತಿಥ್ಯ ಪಡೆದ ಭಾರತ

* ಭಾರತದಲ್ಲಿ ನಡೆಯಲಿದೆ 2026ರ ವಿಶ್ವ ಬ್ಯಾಡ್ಮಿಂಟನ್‌ ಟೂರ್ನಿ

* ಈ ಮೊದಲು 2009ರಲ್ಲಿ ಹೈದರಾಬಾದ್‌ನಲ್ಲಿ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ ನಡೆದಿತ್ತು.

India to host 2026 Badminton World Championship Tournament BAI Confirmed kvn

ನವದೆಹಲಿ(ಜು.14): 2026ರ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ಗೆ ಭಾರತ ಆತಿಥ್ಯ ವಹಿಸಲಿದೆ ಎಂದು ವಿಶ್ವ ಬ್ಯಾಡ್ಮಿಂಟನ್‌ ಫೆಡರೇಷನ್‌(ಬಿಡಬ್ಲ್ಯುಎಫ್‌) ತಿಳಿಸಿದೆ.

ಕೋವಿಡ್‌-19 ಕಾರಣ ಈ ವರ್ಷದ ಚೀನಾದಲ್ಲಿ ನಡೆಯಬೇಕಿದ್ದ ಚಾಂಪಿಯನ್‌ಶಿಪ್‌ ಅನ್ನು ಚೀನಾದಿಂದ ಫಿನ್‌ಲ್ಯಾಂಡ್‌ಗೆ ಸ್ಥಳಾಂತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಗದಿತ ವೇಳಾಪಟ್ಟಿಯಂತೆ 2023ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಸುದಿರ್‌ಮನ್‌ ಕಪ್‌ ಅನ್ನು ಚೀನಾಗೆ ಸ್ಥಳಾಂತರಿಸಲಾಗಿದ್ದು, ಭಾರತಕ್ಕೆ 2026ರ ವಿಶ್ವ ಚಾಂಪಿಯನ್‌ಶಿಪ್‌ನ ಆತಿಥ್ಯವನ್ನು ನೀಡಲಾಗಿದೆ ಎಂದು ಬಿಡಬ್ಲ್ಯುಎಫ್‌ ಮಂಗಳವಾರ ಪ್ರಕಟಿಸಿದೆ. ಈ ಮೊದಲು 2009ರಲ್ಲಿ ಹೈದರಾಬಾದ್‌ನಲ್ಲಿ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ ನಡೆದಿತ್ತು. ಇದೀಗ ಭಾರತಕ್ಕೆ 2ನೇ ಬಾರಿ ಆತಿಥ್ಯ ವಹಿಸುವ ಅವಕಾಶ ಲಭಿಸಿದೆ.

ಟೋಕಿಯೋ ಒಲಿಂಪಿಕ್ಸ್‌: ಪಿ.ವಿ ಸಿಂಧುವಿಗೆ ಒಟ್ಟಿಗೆ ಐಸ್‌ಕ್ರೀಮ್‌ ತಿನ್ನೋಣವೆಂದ ಮೋದಿ

ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನ ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ಒಲಿಂಪಿಕ್‌ ಪದಕ ವಿಜೇತೆ ಪಿ.ವಿ. ಸಿಂಧು 4 ಪದಕಗಳಿಗೆ ಕೊರಳೊಡ್ಡಿದ್ದಾರೆ. ಒಮ್ಮೆ ಚಾಂಪಿಯನ್‌ ಪಟ್ಟ ಅಲಂಕರಿಸಿರುವ ಸಿಂಧು, ಇದಕ್ಕೂ ಮುನ್ನ 2 ಬೆಳ್ಳಿ ಹಾಗೂ ಒಮ್ಮೆ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇದಷ್ಟೇ ಅಲ್ಲದೇ ಪುರುಷರ ಸಿಂಗಲ್ಸ್‌ನಲ್ಲಿ ಬಿ ಸಾಯಿ ಪ್ರಣೀತ್, ಮಹಿಳಾ ಸಿಂಗಲ್ಸ್‌ನಲ್ಲಿ ಸೈನಾ ನೆಹ್ವಾಲ್‌ ಹಾಗೂ ಮಹಿಳಾ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಹಾಗೂ ಜ್ವಾಲ ಗುಟ್ಟಾ ಪದಕ ಜಯಿಸಿದ ಸಾಧನೆ ಮಾಡಿದ್ದಾರೆ.  

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳಿಗೆ ಚೀಯರ್ ಅಪ್‌ ಮಾಡಿ, ಪ್ರತಿದಿನ ಭಾರತೀಯ ಒಲಿಂಪಿಕ್ಸ್‌ ಜೆರ್ಸಿ ಪಡೆಯಿರಿ. ಒಲಿಂಪಿಕ್ಸ್‌ ಕ್ವಿಜ್‌ನಲ್ಲಿ ಪಾಲ್ಗೊಳ್ಳಲು ಈ ಲಿಂಕ್‌ ಕ್ಲಿಕ್‌ ಮಾಡಿ.

Latest Videos
Follow Us:
Download App:
  • android
  • ios