Asianet Suvarna News Asianet Suvarna News

ಪಿವಿ ಸಿಂಧು 2022ರವರೆಗೆ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌?

ಕೊರೋನಾ ವೈರಸ್ ಭೀತಿಯಿಂದಾಗಿ ವಿಶ್ವ ಬ್ಯಾಡ್ಮಿಂಟನ್‌ ಟೂರ್ನಿ 2021ರಲ್ಲಿ ನಡೆಯುವುದು ಅನುಮಾನ ಎನಿಸಿದೆ. ಪಿವಿ ಸಿಂಧು 2022ರವರೆಗೆ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ ಆಗಿ ಮುಂದುವರೆಯುವ ಸಾಧ್ಯತೆಯಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Indian Badminton star PV Sindhu may extend her reign as World champion till 2022
Author
Hyderabad, First Published Apr 7, 2020, 10:14 AM IST

ಹೈದ್ರಾಬಾದ್(ಏ.07)‌: ಕೊರೋನಾದಿಂದಾಗಿ ಟೋಕಿಯೋ ಒಲಿಂಪಿಕ್ಸ್‌ 1 ವರ್ಷ ಮುಂದೂಡಿಕೆಯಾಗಿರುವುದರಿಂದ ಭಾರತದ ತಾರಾ ಶಟ್ಲರ್‌ ಪಿ.ವಿ. ಸಿಂಧು 2022ರವರೆಗೂ ವಿಶ್ವ ಚಾಂಪಿಯನ್‌ ಆಗಿ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗಿದೆ. 

2ನೇ ಮಹಾಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಟೂರ್ನಿ ಕೊರೋನಾಗೆ ರದ್ದು!

ಸಿಂಧು, ಕಳೆದ ವರ್ಷದ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದು ಈ ಶ್ರೇಯಕ್ಕೆ ಪಾತ್ರರಾಗಿದ್ದರು. ಈ ಕೂಟದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಶಟ್ಲರ್‌ ಎಂಬ ಹೆಗ್ಗಳಿಕೆ ಕೂಡ ಸಿಂಧು ಅವರದ್ದಾಗಿತ್ತು. 2021ರಲ್ಲಿ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುವುದರಿಂದ ಅದೇ ವರ್ಷ ವಿಶ್ವ ಬ್ಯಾಡ್ಮಿಂಟನ್‌ ಟೂರ್ನಿ ನಡೆಯುವುದು ಅನುಮಾನವಾಗಿದೆ. ಹೀಗಾಗಿ ಸಿಂಧು 3 ವರ್ಷಗಳ ಕಾಲ ವಿಶ್ವ ಚಾಂಪಿಯನ್‌ ಎನಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಬ್ಯಾಡ್ಮಿಂಟನ್ ಆಟಗಾರರಿಗೆ ಪುಲ್ಲೇಲಾ ಗೋಪಿಚಂದ್‌ ವಾಟ್ಸ್‌ಆ್ಯಪ್‌ನಲ್ಲಿ ಪಾಠ

ಸದ್ಯ ಸಿಂದು ಆಲ್ ಇಂಗ್ಲೆಂಡ್ ಟೂರ್ನಿಯಲ್ಲಿ ಭಾಗವಹಿಸಿ ತವರಿಗೆ ಮಾರ್ಚ್‌ 15ರಂದು ಬಂದಿದ್ದರು. ಕೊರೋನಾ ಭೀತಿ ಮುನ್ನೆಚ್ಚರಿಕಾ ಕ್ರಮವಾಗಿ ಸಿಂಧು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿದ್ದರು. ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಬಂದು ಕ್ವಾರಂಟೈನ್ ಅವಧಿಯನ್ನು ಏಪ್ರಿಲ್ 5ರವರೆಗೆ ವಿಸ್ತರಿಸಿದ್ದಾರೆ. ಜೊತೆಗೆ ನನ್ನ ಪಾಸ್‌ಪೋರ್ಟ್ ವಶಕ್ಕೆ ಪಡೆದಿದ್ದು, ಮನೆಯ ಮುಂದೆ ಕ್ವಾರಂಟೈನ್ ಸ್ಟಿಕ್ಕರ್ ಅಂಟಿಸಿದ್ದಾರೆ. ಇಂಗ್ಲೆಂಡ್‌ನಿಂದ ಬಂದ ನನ್ನ ಸ್ನೇಹಿತರನ್ನು ವಿಚಾರಿಸಿದಾಗ ಅವರಿಗೂ ಇದೇ ಪರಿಸ್ಥಿತಿ ಎದುರಾಗಿರುವುದು ತಿಳಿಸಿದ್ದಾರೆಂದು ಸಿಂಧು ಹೇಳಿದ್ದಾರೆ. 
 

Follow Us:
Download App:
  • android
  • ios