ಕೆಎಎ ಅಧ್ಯಕ್ಷ ಸ್ಥಾನಕ್ಕೆ ಶೀಘ್ರ ರಾಜೀನಾಮೆ: ರೈ
ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..
ರಾಮನಗರ(ಜ.21): ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ (ಕೆಎಎ) ಅಧ್ಯಕ್ಷ ಸ್ಥಾನಕ್ಕೆ ಶೀಘ್ರ ರಾಜೀನಾಮೆ ನೀಡಲಿದ್ದೇನೆ ಎಂದು ಮುತ್ತಪ್ಪ ರೈ ಸೋಮವಾರ ಹೇಳಿದ್ದಾರೆ.
ಅನಾರೋಗ್ಯದ ಕಾರಣ ಈ ನಿರ್ಧಾರಕ್ಕೆ ಬಂದಿದ್ದು, ಮುಂದಿನ ಅವಧಿಯಲ್ಲಿ ಈ ಹುದ್ದೆಯನ್ನು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ನಿರ್ವಹಿಸಲಿದ್ದಾರೆ ಎಂದಿದ್ದಾರೆ.
ನನ್ನ ಜೊತೆ ಕೆಲಸ ಮಾಡೋರಿಗೆ ಸೈಟ್ ಕೊಡ್ತೇನೆ :ಮುತ್ತಪ್ಪ ರೈ
‘ಈ ಹಿಂದೆ ರಾಮನಗರ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಗೆ ಅಧ್ಯಕ್ಷರಾಗಿದ್ದಾಗ ಹಲವು ಬಾರಿ ಅಥ್ಲೆಟಿಕ್ಸ್ ಕೂಟಗಳನ್ನು ಆಯೋಜಿಸಿದ್ದೇನೆ. ಆ ವೇಳೆ ಕೆಲವರು ಕೆಎಎ ಅಧ್ಯಕ್ಷರಾಗುವಂತೆ ಒತ್ತಡ ಹಾಕಿದ್ದರು. ಹೀಗಾಗಿ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ’ ಎಂದು ಅವರು ಹೇಳಿಕೊಂಡಿದ್ದಾರೆ.
2018 ರ ಸೆಪ್ಟೆಂಬರ್‌ನಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ಅಧ್ಯಕ್ಷರಾಗಿ ನೇಮಕವಾಗಿದ್ದರು.
ಟಿಕೆಟ್ ಖಾತ್ರಿಯಾಗಿದೆ, ರೈ ಮಾತಿನ ಒಳಮರ್ಮವೇನು?