ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಫಲವಾಗಿ, "ಕ್ರೀಡಾ ವಾತಾವರಣವನ್ನು ಮತ್ತಷ್ಟು ದೃಢಪಡಿಸುವ ನಿಟ್ಟಿನಲ್ಲಿ, ಬೇರು ಹಂತದಲ್ಲೇ ಯುವ ಕ್ರೀಡಾಪಟುಗಳನ್ನು ಬೆಳೆಸಲು ಹಾಗೂ ಆ ಮೂಲಕ ಬದುಕು ಕಟ್ಟಿಕೊಳ್ಳುವಂತೆ ಮಾಡಲು ಇದು ನೆರವಾಗಲಿದೆ" ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ನವದೆಹಲಿ(ಮಾ.06): ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ಪದಕ ವಿಜೇತರಾದವರು ಪರಿಷ್ಕೃತ ಮಾನದಂಡಗಳ ಪ್ರಕಾರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಈ ಮೂಲಕ 

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಫಲವಾಗಿ, "ಕ್ರೀಡಾ ವಾತಾವರಣವನ್ನು ಮತ್ತಷ್ಟು ದೃಢಪಡಿಸುವ ನಿಟ್ಟಿನಲ್ಲಿ, ಬೇರು ಹಂತದಲ್ಲೇ ಯುವ ಕ್ರೀಡಾಪಟುಗಳನ್ನು ಬೆಳೆಸಲು ಹಾಗೂ ಆ ಮೂಲಕ ಬದುಕು ಕಟ್ಟಿಕೊಳ್ಳುವಂತೆ ಮಾಡಲು ಇದು ನೆರವಾಗಲಿದೆ" ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯು ಕ್ರೀಡಾ ಸಚಿವಾಲಯದೊಂದಿಗೆ ಸಮಾಲೋಚಿಸಿ "ಕ್ರೀಡಾಪಟುಗಳು ಸರ್ಕಾರಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವವರಿಗೆ ಈ ಪರಿಷ್ಕೃತ ಆದೇಶ ಸಹಾಯಕವಾಗಲಿದೆ" ಎಂದು ಠಾಕೂರ್ ಸೋಷಿಯಲ್ ಮೀಡಿಯಾವಾದ 'ಎಕ್ಸ್‌'ನಲ್ಲಿ ತಿಳಿಸಿದ್ದಾರೆ.

Scroll to load tweet…

"ಈ ಬೇರುಮಟ್ಟದ ನಿರ್ಧಾರದಿಂದ ಖೇಲೋ ಇಂಡಿಯಾ ಗೇಮ್ಸ್, ಯೂಥ್‌, ಯೂನಿವರ್ಸಿಟಿ, ಪ್ಯಾರಾ ಹಾಗೂ ವಿಂಟರ್ ಗೇಮ್ಸ್‌ ಪದಕ ವಿಜೇತರು ಸರ್ಕಾರಿ ಉದ್ಯೋಗ ಪಡೆಯಲು ಅರ್ಹತೆಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

"ಈ ಪರಿಷ್ಕೃತ ಆದೇಶದಿಂದಾಗಿ ಭಾರವವು ಕ್ರೀಡಾ ಕ್ಷೇತ್ರದಲ್ಲಿ ಸೂಪರ್ ಪವರ್ ಆಗಿ ಹೊರಹೊಮ್ಮಲು ಮಹತ್ವದ್ದ ಮೈಲಿಗಲ್ಲು ಎನಿಸಲಿದೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ಖೇಲೋ ಇಂಡಿಯಾ ಬಗ್ಗೆ:

ಬೇರುಮಟ್ಟದಲ್ಲಿನ ಕ್ರೀಡಾಪಟುಗಳನ್ನು ಗುರುತಿಸುವ ಉದ್ದೇಶದಿಂದ ಖೇಲೋ ಇಂಡಿಯಾ ಗೇಮ್ಸ್‌ ಅನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2018ರಲ್ಲಿ ಆರಂಭಿಸಿದೆ. ಈ ಕ್ರೀಡಾಕೂಟದ ಮೂಲಕ ಹಲವು ಕ್ರೀಡಾಪ್ರತಿಭೆಗಳು ಬೆಳಕಿಗೆ ಬರುವಂತೆ ಮಾಡಿದೆ.