Asianet Suvarna News Asianet Suvarna News

ಜೂನ್ 10, 11ರಂದು ಕರ್ನಾಟಕ ರಾಜ್ಯದ ಕ್ರೀಡಾಪಟುಗಳಿಗೆ ಕೊರೋನಾ ಲಸಿಕೆ

* ರಾಜ್ಯದ ಎಲ್ಲಾ ಕ್ರೀಡಾಪಟುಗಳು  ಹಾಗೂ ಸಿಬ್ಬಂದಿಗೆ ಕೊರೋನಾ ಲಸಿಕೆ ನೀಡಲು ರಾಜ್ಯ ಸರ್ಕಾರ ಆದೇಶ

* ಜೂನ್ 10 ರಂದು ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಚಾಲನೆ

* ಎಲ್ಲಾ ಕ್ರೀಡಾಪಟುಗಳು ಹಾಗೂ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಲು ಕೆಒಎ ಅಧ್ಯಕ್ಷ ಕೆ.ಗೋವಿಂದರಾಜು ಮನವಿ

KOA president K Govindaraju requests all Karnataka Sports personalities take COVID Vaccination kvn
Author
Bengaluru, First Published Jun 9, 2021, 8:29 AM IST

ಬೆಂಗಳೂರು(ಜೂ.09): ಕರ್ನಾಟಕ ರಾಜ್ಯ ಒಲಿಂಪಿಕ್‌ ಸಂಸ್ಥೆ (ಕೆಒಎ) ಮನವಿ ಮೇರೆಗೆ ರಾಜ್ಯದ ಎಲ್ಲಾ ಕ್ರೀಡಾಪಟುಗಳು, ಕೋಚ್‌ಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೊರೋನಾ ಲಸಿಕೆ ನೀಡಲು ರಾಜ್ಯ ಸರ್ಕಾರ ಆದೇಶಿಸಿದೆ. 

ಜೂನ್ 10 ಹಾಗೂ 11ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರ, ಪಟ್ಟಣ ಹಾಗೂ ತಾಲೂಕು ಕೇಂದ್ರಗಳಲ್ಲಿರುವ ಕ್ರೀಡಾಂಗಣಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ. ಅಂತಾರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳು, ಕೋಚ್‌, ಅಧಿಕಾರಿ ಹಾಗೂ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಕೆಒಎ ಅಧ್ಯಕ್ಷ ಕೆ.ಗೋವಿಂದರಾಜು ಮನವಿ ಮಾಡಿದ್ದಾರೆ. 

ಒಲಿಂಪಿಕ್ಸ್ ಅರ್ಹತೆ ಪಡೆದ ಕ್ರೀಡಾಪಟುಗಳಿಗೆ 4 ವಾರದ ಬಳಿಕ 2ನೇ ಡೋಸ್ ಲಸಿಕೆ!

ಜೂನ್ 10ರ ಗುರುವಾರ ಬೆಳಗ್ಗೆ 11.30ಕ್ಕೆ ಸರಿಯಾಗಿ ನಗರದ ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಗುವುದು. ಕ್ರೀಡಾಪಟುಗಳು, ತಾಂತ್ರಿಕ ವರ್ಗ, ಅಧಿಕಾರಿ ವರ್ಗದವರು ಲಸಿಕೆಯ ಸದುಪಯೋಗ ಪಡಿಸಿಕೊಳ್ಳುವಂತೆ ಕೆ. ಗೋವಿಂದರಾಜು ತಿಳಿಸಿದ್ದಾರೆ.

ಕೊರೋನಾ ವೈರಸ್ ಎರಡನೇ ಅಲೆಗೆ ಭಾರತ ಅಕ್ಷರಶಃ ನಲುಗಿ ಹೋಗಿತ್ತು. ಇದೀಗ ಕೊರೋನಾ ಹಬ್ಬುವ ವೇಗ ನಿಧಾನವಾಗಿ ಕಡಿಮೆಯಾಗುತ್ತಿದೆ. ಹೀಗಿದ್ದೂ ಯಾರೂ ಮೈಮರೆಯುವಂತಿಲ್ಲ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios