Asianet Suvarna News Asianet Suvarna News

ಭಾರತದಲ್ಲಿ ಖಂಡಿತಾ ಒಲಿಂಪಿಕ್ಸ್‌ ನಡೆಯಬೇಕು: ರಾಷ್ಟ್ರಪತಿ ದ್ರೌಪದಿ ಮುರ್ಮು

ಮುಂಬರುವ ವರ್ಷಗಳಲ್ಲಿ ಭಾರತದಲ್ಲಿ ಒಲಿಂಪಿಕ್ಸ್ ಆಯೋಜಿಸುವ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಲವು ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

Olympics Should Definitely Happen In India It Will Promote Merit In Sports Says President Droupadi Murmu kvn
Author
First Published Aug 29, 2024, 10:08 AM IST | Last Updated Aug 29, 2024, 10:09 AM IST

ನವದೆಹಲಿ: 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುವ ಭಾರತದ ಪ್ರಯತ್ನ ಸರಿಯಾದ ದಿಕ್ಕಿನಲ್ಲಿದೆ ಎಂದು ಅಭಿಪ್ರಾಯ ಪಟ್ಟಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಭಾರತದಲ್ಲಿ ಖಂಡಿತವಾಗಿಯೂ ಒಲಿಂಪಿಕ್ಸ್‌ ನಡೆಯಬೇಕು ಎಂದಿದ್ದಾರೆ.

ಬುಧವಾರ ತಮ್ಮನ್ನು ಭೇಟಿಯಾದ ಮಾಧ್ಯಮ ಸಂಸ್ಥೆಯ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ನಾನು ಕ್ರೀಡೆಯನ್ನು ವೀಕ್ಷಿಸಲು ಇಷ್ಟಪಡುತ್ತೇನೆ. ಆದರೂ ನನಗೆ ಆಡಲು ಹೆಚ್ಚಿನ ಅವಕಾಶ ಸಿಗಲಿಲ್ಲ. ಸಾಧ್ಯವಾದಾಗೆಲ್ಲಾ ನಾನು ಭಾರತೀಯ ಕ್ರೀಡೆಗಳಿಗೆ ಆದ್ಯತೆ ನೀಡಿದ್ದೇನೆ ಎಂದರು. ಒಲಿಂಪಿಕ್ಸ್‌ ಭಾರತದಲ್ಲಿ ನಡೆಯಬೇಕು. ಇದು ಜನರನ್ನು ಕ್ರೀಡೆಯತ್ತ ಪ್ರೇರೇಪಿಸುತ್ತದೆ ಎಂದು ಹೇಳಿದರು.

ಯುಎಸ್ ಓಪನ್ 2024: ಇಗಾ, ಆಲ್ಕರಜ್‌, ಸಿನ್ನರ್‌ ಶುಭಾರಂಭ

ಭಾರತ ಈಗಾಗಲೇ ಒಲಿಂಪಿಕ್ಸ್‌ ಆತಿಥ್ಯ ಹಕ್ಕು ಪಡೆಯಲು ಬಿಡ್‌ ಸಲ್ಲಿಸಿದೆ. 2026ರ ಬಳಿಕ ಆತಿಥ್ಯ ದೇಶವನ್ನು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿ ಘೋಷಿಸಲಿದೆ. I ಈ ಮೊದಲು ಪ್ರಧಾನಿ ನರೇಂದ್ರ ಮೋದಿ ಕೂಡಾ ಭಾರತದಲ್ಲಿ ಒಲಿಂಪಿಕ್ಸ್ ಆಯೋಜಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು

ಇಂದು ರಾಷ್ಟ್ರೀಯ ಕ್ರೀಡಾ ದಿನ

ಬೆಂಗಳೂರು: ಹಾಕಿ ದಿಗ್ಗಜ ಧ್ಯಾನ್‌ ಚಂದ್‌ ಅವರ ಜನ್ಮದಿನದ ಪ್ರಯುಕ್ತ ಆಚರಿಸುವ ರಾಷ್ಟ್ರೀಯ ಕ್ರೀಡಾ ದಿನ(ಆ.29)ದ ಅಂಗವಾಗಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಬೆಳಗ್ಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ಒಲಿಂಪಿಕ್‌ ಸಂಸ್ಥೆ(ಕೆಒಎ) ಹಾಗೂ ಕ್ರೀಡಾ ಇಲಾಖೆ ಜಂಟಿಯಾಗಿ ಕ್ರೀಡಾ ದಿನವನ್ನು ಆಚರಿಸಲಿದೆ. ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಹಾಗೂ ಕೆಲ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಫಿಬಾ ಏಷ್ಯಾ ಅಧ್ಯಕ್ಷ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ, ಕೆಒಎ ಅಧ್ಯಕ್ಷ ಡಾ.ಕೆ. ಗೋವಿಂದರಾಜು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Manu Bhaker: ಯಾರ ಜೊತೆಗೆ ಒಂದು ದಿನ ಕಳೆಯೋಕೆ ಇಷ್ಟಪಡ್ತೀರಾ ಎಂದು ಕೇಳಿದ್ದಕ್ಕೆ ಮನು ಭಾಕರ್ ನಾಚಿಕೆಯಿಂದ ಹೇಳಿದ ಹೆಸರು...

ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತ ತಂಡಕ್ಕೆ ಕರ್ನಾಟಕದ ರಾಹೀಲ್‌

ನವದೆಹಲಿ: ಸೆ.8ರಿಂದ 17ರ ವರೆಗೆ ಚೀನಾದಲ್ಲಿ ನಡೆಯಲಿರುವ ಏಷ್ಯನ್‌ ಚಾಂಪಿಯನ್‌ಶಿಪ್‌ ಹಾಕಿ ಟೂರ್ನಿಗೆ 18 ಸದಸ್ಯರ ಭಾರತ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ. ಕರ್ನಾಟಕದ ಮೊಹಮ್ಮದ್‌ ರಾಹೀಲ್‌ ಮೌಸೀನ್‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

28 ವರ್ಷದ ರಾಹೀಲ್‌ ಈ ವರೆಗೂ ಭಾರತ ಪರ 8 ಪಂದ್ಯಗಳನ್ನಾಡಿದ್ದಾರೆ. ಇನ್ನು, ಪಿ.ಆರ್‌.ಶ್ರೀಜೇಶ್‌ ನಿವೃತ್ತಿಯಿಂದ ತೆರವುಗೊಂಡಿರುವ ಗೋಲ್‌ಕೀಪರ್‌ ಸ್ಥಾನಕ್ಕೆ ಕೃಷನ್‌ ಬಹದೂರ್‌ ಪಾಠಕ್‌ ನೇಮಕಗೊಂಡಿದ್ದಾರೆ. ಹರ್ಮನ್‌ಪ್ರೀತ್‌ ಸಿಂಗ್‌ ನಾಯಕನಾಗಿ ಮುಂದುವರಿಯಲಿದ್ದು, ವಿವೇಕ್‌ ಸಾಗರ್‌ ಪ್ರಸಾದ್‌ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಪ್ಯಾರಿಸ್‌ ಒಲಿಂಪಿಕ್ಸ್‌ ಆಡಿದ 10 ಆಟಗಾರರು ತಂಡಕ್ಕೆ ಆಯ್ಕೆಯಾಗಿದ್ದಾರೆ.
 

Latest Videos
Follow Us:
Download App:
  • android
  • ios