ಇದೀಗ ಮನು ಭಾಕರ್, ಸರಬ್ಜೋತ್‌ ಸಿಂಗ್‌ ಜತೆಗೂಡಿ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಸ್ವತಂತ್ರ ಭಾರತದಲ್ಲಿ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ದೇಶದ ಮೊದಲ ಕ್ರೀಡಾಪಟು ಎನ್ನುವ ಹಿರಿಮೆಗೆ ಮನು ಭಾಕರ್ ಪಾತ್ರರಾಗಿದ್ದಾರೆ.

ಪ್ಯಾರಿಸ್‌: ಭಾರತ ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಎರಡನೇ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ. ಮನು ಭಾಕರ್ ಹಾಗೂ ಸರಬ್ಜೋತ್‌ ಸಿಂಗ್‌ ಅವರನ್ನೊಳಗೊಂಡ ಜೋಡಿ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಇದಕ್ಕೂ ಮುನ್ನ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಹರ್ಯಾಣ ಮೂಲದ 22 ವರ್ಷದ ಮನು ಭಾಕರ್ ಕಂಚಿನ ಪದಕ ಜಯಿಸಿದ್ದರು. ಈ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶೂಟಿಂಗ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಶೂಟರ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದರು.

ಇದೀಗ ಮನು ಭಾಕರ್, ಸರಬ್ಜೋತ್‌ ಸಿಂಗ್‌ ಜತೆಗೂಡಿ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಸ್ವತಂತ್ರ ಭಾರತದಲ್ಲಿ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ದೇಶದ ಮೊದಲ ಕ್ರೀಡಾಪಟು ಎನ್ನುವ ಹಿರಿಮೆಗೆ ಮನು ಭಾಕರ್ ಪಾತ್ರರಾಗಿದ್ದಾರೆ.

ಭಾರತಕ್ಕೆ ಮತ್ತೊಂದು ಕಂಚಿನ ಪದಕ; ಸರಬ್ಜೋತ್‌ ಸಿಂಗ್‌ ಜತೆಗೂಡಿ ಮತ್ತೊಂದು ಒಲಿಂಪಿಕ್ ಪದಕ ಗೆದ್ದ ಮನು ಭಾಕರ್

ದಕ್ಷಿಣ ಕೊರಿಯಾ ಎದುರು ಮನು ಭಾಕರ್ ಹಾಗೂ ಸರಬ್ಜೋತ್‌ ಸಿಂಗ್‌ ಅವರನ್ನೊಳಗೊಂಡ ಜೋಡಿ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ 16-10 ಅಂಕಗಳಿಂದ ಜಯಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡುವಲ್ಲಿ ಯಶಸ್ವಿಯಾಯಿತು.

Scroll to load tweet…

ಇನ್ನು ಇದಕ್ಕೂ ಮೊದಲು ಸ್ವತಂತ್ರ್ಯ ಪೂರ್ವದಲ್ಲಿ ನಾರ್ಮನ್ ಪ್ರಿಚರ್ಡ್‌ 1900ರ ಒಲಿಂಪಿಕ್ಸ್‌ನಲ್ಲಿ ಭಾರತದ ಪರ ಅಥ್ಲೆಟಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ್ದರು. ಆದರೆ ಆಗ ಭಾರತದಲ್ಲಿ ಬ್ರಿಟೀಷರ ಆಡಳಿತವಿತ್ತು. ನಾರ್ಮನ್ ಪ್ರಿಚರ್ಡ್‌ 1900ರಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ್ದರು. ಇದೀಗ ಬರೋಬ್ಬರಿ 124 ವರ್ಷಗಳ ಬಳಿಕ ಮನು ಭಾಕರ್ ಒಂದೇ ಆವೃತ್ತಿಯಲ್ಲಿ ಎರಡು ಒಲಿಂಪಿಕ್ಸ್ ಪದಕ ಗೆದ್ದು ಚಾರಿತ್ರ್ಯಿಕ ಸಾಧನೆ ಮಾಡಿದ್ದಾರೆ.

Scroll to load tweet…

ಒಲಿಂಪಿಕ್ಸ್ ಕಂಚು ಗೆಲ್ಲಲು ಮನು ಭಾಕರ್ ಮೇಲೆ ಕೇಂದ್ರ ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹2 ಕೋಟಿ..!

ಇನ್ನು ಸ್ವತಂತ್ರ್ಯ ಭಾರತದಲ್ಲಿ ಒಲಿಂಪಿಕ್ಸ್‌ನ ವೈಯುಕ್ತಿಕ ವಿಭಾಗದಲ್ಲಿ ಒಂದಕ್ಕಿಂತ ಹೆಚ್ಚು ಪದಕ ಗೆದ್ದ ಮೂರನೇ ಅಥ್ಲೀಟ್ ಎನ್ನುವ ಹಿರಿಮೆಗೂ ಮನು ಭಾಕರ್ ಪಾತ್ರರಾಗಿದ್ದಾರೆ. ಈ ಮೊದಲು ಕುಸ್ತಿಪಟು ಸುಶೀಲ್ ಕುಮಾರ್(2008ರಲ್ಲಿ ಕಂಚು, 2012ರಲ್ಲಿ ಬೆಳ್ಳಿ) ಹಾಗೂ ಬ್ಯಾಡ್ಮಿಂಟನ್ ಪಟು ಪಿ ವಿ ಸಿಂಧು(2016ರಲ್ಲಿ ಬೆಳ್ಳಿ ಹಾಗು 2020ರಲ್ಲಿ ಕಂಚು) ಪದಕ ಜಯಿಸಿದ್ದರು. ಇದೀಗ ಮನು ಭಾಕರ್ ಈ ಪ್ರತಿಷ್ಠಿತ ಕ್ರೀಡಾಪಟುಗಳ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಮನು ಭಾಕರ್‌ಗೆ ಇದೆ 3ನೇ ಒಲಿಂಪಿಕ್ಸ್ ಪದಕ ಗೆಲ್ಲುವ ಚಾನ್ಸ್:

ಹೌದು, ಈಗಾಗಲೇ ಮೊದಲೆರಡು ಸ್ಪರ್ಧೆಗಳಲ್ಲಿ ಕಂಚಿನ ಪದಕ ಜಯಿಸಿರುವ ಮನು ಭಾಕರ್, ಇದೀಗ ಮಹಿಳೆಯರ 25 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು, ಹ್ಯಾಟ್ರಿಕ್ ಪದಕ ಬೇಟೆಯಾಡುವ ವಿಶ್ವಾಸದಲ್ಲಿದ್ದಾರೆ.