ಭಾರತಕ್ಕೆ ಮತ್ತೊಂದು ಕಂಚಿನ ಪದಕ; ಸರಬ್ಜೋತ್‌ ಸಿಂಗ್‌ ಜತೆಗೂಡಿ ಮತ್ತೊಂದು ಒಲಿಂಪಿಕ್ ಪದಕ ಗೆದ್ದ ಮನು ಭಾಕರ್

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮನು ಭಾಕರ್ ಹಾಗೂ ಸರಬ್ಜೋತ್‌ ಸಿಂಗ್‌ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ.

Paris Olympics 2024 Manu Bhaker Sarabjot Singh win bronze in 10m Air Pistol Mixed Team event kvn

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಮನು ಭಾಕರ್ ಹಾಗೂ ಸರಬ್ಜೋತ್‌ ಸಿಂಗ್‌ ಜೋಡಿ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಭಾರತ ಈ ಕೂಟದಲ್ಲಿ ಎರಡನೇ ಕಂಚಿನ ಪದಕ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೊದಲು ಮಹಿಳೆಯರ 10 ಮೀ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಕಂಚಿನ ಪದಕ ಜಯಿಸಿದ್ದ ಮನು ಭಾಕರ್, ಇದೀಗ ಮಿಶ್ರ ತಂಡ ವಿಭಾಗದಲ್ಲೂ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎನ್ನುವ ಹಿರಿಮೆಗೆ ಮನು ಭಾಕರ್ ಪಾತ್ರರಾಗಿದ್ದಾರೆ.

ಮೊದಲ ಸುತ್ತಿನಲ್ಲಿ ಕೊರಿಯಾ ಜೋಡಿ 2-0 ಮುನ್ನಡೆ ಸಾಧಿಸಿತು. ಇದಾದ ಬಳಿಕ ಸತತ 4 ಸುತ್ತುಗಳಲ್ಲಿ ಭಾರತದ ಮನು ಭಾಕರ್ ಹಾಗೂ ಸರಬ್ಜೋತ್‌ ಸಿಂಗ್‌ ಜೋಡಿ ಮುನ್ನಡೆ ಸಾಧಿಸುವ ಮೂಲಕ 8-2 ಮುನ್ನಡೆಗಳಿಸಿತು. ಆ ಬಳಿಕ ಮತ್ತೆ ಕೊರಿಯಾ ಜೋಡಿ ಕಮ್‌ಬ್ಯಾಕ್ ಮಾಡುವ ಪ್ರಯತ್ನ ನಡೆಸಿತಾದರೂ, ಭಾರತದ ಜೋಡಿ ಮುನ್ನಡೆಯನ್ನು ಕಾಯ್ದುಕೊಳ್ಳುತ್ತಲೇ ಸಾಗುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡುವಲ್ಲಿ ಯಶಸ್ವಿಯಾಗಿತ್ತು. ಅಂತಿಮವಾಗಿ ಭಾರತದ ಜೋಡಿ 16-10 ಅಂಕಗಳ ಅಂತರದಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡಿತು.

ಮತ್ತೊಂದು ಒಲಿಂಪಿಕ್ ಪದಕ ಗೆಲ್ಲುವ ಹೊಸ್ತಿಲಲ್ಲಿ ಮನು ಭಾಕರ್‌..! ಇತಿಹಾಸ ಬರೆಯಲು ರೆಡಿ

ಸೋಮವಾರ ನಡೆದ ಅರ್ಹತಾ ಸುತ್ತಿನಲ್ಲಿ ಮನು-ಸರಬ್ಜೋತ್‌, 580 ಅಂಕಗಳೊಂದಿಗೆ ಅಗ್ರ-4ರಲ್ಲಿ ಸ್ಥಾನ ಗಿಟ್ಟಿಸಿಕೊಂಡರು. ಟರ್ಕಿ ಜೋಡಿ 582, ಸರ್ಬಿಯಾ ಜೋಡಿ 581 ಅಂಕ ಗಳಿಸಿ ಅಗ್ರ-2 ಸ್ಥಾನ ಪಡೆದ ಕಾರಣ ಪದಕ ಖಚಿತಪಡಿಸಿತ್ತು. ಭಾರತ 580ರ ಬದಲು 583 ಅಂಕ ಗಳಿಸಿದ್ದರೆ ಚಿನ್ನ ಅಥವಾ ಬೆಳ್ಳಿ ಪದಕ ಖಚಿತವಾಗುತಿತ್ತು. ಇದೇ ವೇಳೆ ದಕ್ಷಿಣ ಕೊರಿಯಾ 579 ಅಂಕ ಗಳಿಸಿ ಕಂಚಿನ ಪದಕ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿತ್ತು.
 

Latest Videos
Follow Us:
Download App:
  • android
  • ios