10 ಮೀಟರ್ ಏರ್ ರೈಫಲ್: ಫೈನಲ್‌ಗೆ ಲಗ್ಗೆಯಿಟ್ಟ ರಮಿತಾ ಜಿಂದಾಲ್, ಪದಕಕ್ಕೆ ಇನ್ನೊಂದು ಹೆಜ್ಜೆ

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ರಮಿತಾ ಜಿಂದಾಲ್ ಫೈನಲ್ ಪ್ರವೇಶಿಸುವ ಮೂಲಕ ಪದಕದ ಆಸೆ ಮೂಡಿಸಿದ್ದಾರೆ.

Paris Olympics 2024 Ramita Jindal Qualifies For Rifle Final Heartbreak For Elavenil Valarivan kvn

ಪ್ಯಾರಿಸ್: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಅದ್ಭುತ ಪ್ರದರ್ಶನ ಮುಂದುವರೆಸಿದೆ. ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕ ಎರಡನೇ ದಿನ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ರಮಿತಾ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದ್ದಾರೆ. ರಮಿತಾ ಜಿಂದಾಲ್ 5ನೇ ಸ್ಥಾನಿಯಾಗಿ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಸ್ಪರ್ಧೆಯಲ್ಲಿ ರಮಿತಾ ಜಿಂದಾಲ್ 631.5 ಅಂಕಗಳನ್ನು ಕಲೆಹಾಕುವ ಮೂಲಕ 5ನೇ ಸ್ಥಾನಿಯಾಗಿ ಫೈನಲ್ ಪ್ರವೇಸಿದ್ದು, ಫೈನಲ್‌ನಲ್ಲಿ ಶ್ರೇಷ್ಠ ಪ್ರದರ್ಶನ ತೋರಿದರೆ ರಮಿತಾ ಕೊರಳಿಗೆ ಒಲಿಂಪಿಕ್ ಪದಕ ಒಲಿಯಲಿದೆ. ಇನ್ನೊಂದೆಡೆ ಇದೇ ವಿಭಾಗದಲ್ಲಿ ಕೊನೆಯ ಹಂತದ ವರೆಗೂ ಅಧ್ಭುತ ಪ್ರದರ್ಶನ ತೋರಿದ್ದ ಎಲಾವಿನೆಲ್ ವಲರಿವನ್ 630.7 ಅಂಕಗಳೊಂದಿಗೆ ಕೂದಲೆಳೆ ಅಂತರದಲ್ಲಿ ಫೈನಲ್ ಅವಕಾಶವನ್ನು ತಪ್ಪಿಸಿಕೊಂಡರು. ಎಲಾವಿನೆಲ್ 10ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಅರ್ಹತಾ ಸುತ್ತಿನಲ್ಲಿ ಅಗ್ರ 8 ಸ್ಥಾನ ಪಡೆಯುವ ಶೂಟರ್‌ಗಳು ಮಾತ್ರ ಫೈನಲ್ ಪ್ರವೇಶಿಸುತ್ತಾರೆ. 

ಬಾಲ್‌ರಾಜ್ ಪನ್ವಾರ್ ಕ್ವಾರ್ಟರ್ ಫೈನಲ್ ಪ್ರವೇಶ:

ಸೇಲಿಂಗ್ ಸ್ಪರ್ಧೆಯಲ್ಲಿ ನಿನ್ನೆ 4ನೇ ಸ್ಥಾನ ಪಡೆದು ಇಂದು ರಿಪೇಜ್‌ನಲ್ಲಿ ಸ್ಪರ್ಧಿಸಿದ್ದ ಭಾರತದ ಬಾಲ್‌ರಾಜ್ ಪನ್ವಾರ್, ಇದೀಗ ಕ್ವಾರ್ಟರ್‌ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಿಪೇಜ್‌ನಲ್ಲಿ ಬಾಲ್‌ರಾಜ್ ಎರಡನೇ ಸ್ಥಾನ ಪಡೆಯುವ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದು, ಈ ಮೂಲಕ ಈ ಸ್ಪರ್ಧೆಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಭಾರತದ ಮೊದಲ ಸೇಲರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ.

ಪದಕಕ್ಕೆ ಗುರಿ ಇಡ್ತಾರಾ ಮನು ಭಾಕರ್..? ಇಂದು ಬಹುನಿರೀಕ್ಷಿತ ಫೈನಲ್‌ ಶೂಟ್‌ಗೆ ಕ್ಷಣಗಣನೆ

ಸಿಂಧು ಶುಭಾರಂಭ:

ಭಾರತದ ತಾರಾ ಬ್ಯಾಡ್ಮಿಂಟನ್ ಪಟು ಪಿ ವಿ ಸಿಂಧು, ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿದ್ದಾರೆ. ಸಿಂಧು ಮಾಲ್ಡೀವ್ಸ್‌ನ ಅಬ್ದುಲ್ ರಜಾಕ್ ವಿರುದ್ಧ 21-9, 21-6 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. 
 

Latest Videos
Follow Us:
Download App:
  • android
  • ios