ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್: ಸೆಮೀಸ್‌ಗೆ ಲಗ್ಗೆಯಿಟ್ಟ ಸಿಂಧು
ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪಿ.ವಿ. ಸಿಂಧು ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಬರ್ಮಿಂಗ್‌ಹ್ಯಾಮ್(ಮಾ.20): ಭಾರತದ ತಾರಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.
ಹೌದು, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಪಾನ್ ಆಟಗಾರ್ತಿ ಅಕನೆ ಯಮಗುಚಿ ಎದುರು ಸಿಂಧು 16-21, 21-16, 21-19 ಗೇಮ್‌ಗಳಲ್ಲಿ ರೋಚಕ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಮೊದಲ ಗೇಮ್‌ನಲ್ಲಿ ಹಿನ್ನಡೆ ಅನುಭವಿಸಿದ್ದ ಸಿಂಧು ಅದಾದ ಬಳಿಕ ಉಳಿದೆರಡು ಗೇಮ್‌ಗಳಲ್ಲಿ ಆಕ್ರಮಣಕಾರಿ ಆಟವಾಡುವ ಮೂಲಕ ಎರಡನೇ ಬಾರಿಗೆ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.
ಇನ್ನು ಯುವ ಶಟ್ಲರ್ ಲಕ್ಷ್ಯ ಸೆನ್ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ ಫೈನಲ್‌ನಲ್ಲಿ ಸೋತು ಹೊರಬಿದ್ದಿದ್ದಾರೆ. ಇದರೊಂದಿಗೆ ಟೂರ್ನಿಯ ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ಸವಾಲು ಮುಕ್ತಾಯಗೊಂಡಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ನೆದರ್‌ಲೆಂಡ್ಸ್‌ನ ಮಾರ್ಕ್ ಕ್ಯಾಲೊವ್ ವಿರುದ್ಧ 17-21, 21-16, 17-21 ಗೇಮ್‌ಗಳಲ್ಲಿ ವೀರೋಚಿತ ಸೋಲು ಅನುಭವಿಸಿದರು.
ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್: ಕ್ವಾರ್ಟರ್‌ಗೆ ಸಿಂಧು, ಲಕ್ಷ್ಯ ಲಗ್ಗೆ
ಮಹಿಳಾ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಹಾಗೂ ಸಿಕ್ಕಿ ರೆಡ್ಡಿ ಜೋಡಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋತು ಹೊರಬಿತ್ತು. ನೆದರ್‌ಲೆಂಡ್ಸ್‌ನ ಸೆಲೆನಾ ಹಾಗೂ ಸೀನೆನ್ ಜೋಡಿ ವಿರುದ್ಧ 22-24, 12-21 ಗೇಮ್‌ಗಳಲ್ಲಿ ಪರಾಭವಗೊಂಡಿತು. ಇದರೊಂದಿಗೆ ಡಬಲ್ಸ್ ವಿಭಾಗದಲ್ಲಿ ಭಾರತದ ಹೋರಾಟ ಅಂತ್ಯಗೊಂಡಿತು. ಪ್ರಶಸ್ತಿ ನಿರೀಕ್ಷೆಯಲ್ಲಿದ್ದ ಸಾತ್ವಿಕ್ ಸಾಯಿರಾಜ್ ಹಾಗೂ ಚಿರಾಗ್ ಶೆಟ್ಟಿ2ನೇ ಸುತ್ತಿನಲ್ಲೇ ಸೋತು ಹೊರಬಿದ್ದಿದ್ದರು.