ಯುಎಸ್ ಓಪನ್: ಸೆರೆನಾ ಪ್ರಶಸ್ತಿ ಕನಸು ಭಗ್ನ!
ತಾಯಿಯಾದ ಬಳಿಕ ಮೊದಲ ಗ್ರ್ಯಾನ್‌ಸ್ಲಾಂ ಕನವರಿಕೆಯಲ್ಲಿದ್ದ ಸ್ಟಾರ್ ಟೆನಿಸ್ ಆಟಗಾರ್ತಿ ಸೆರೆನಾ ವಿಲಿಯಮ್ಸ್‌ಗೆ ಮತ್ತೊಮ್ಮೆ ನಿರಾಸೆ ಎದುರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ನ್ಯೂಯಾರ್ಕ್(ಸೆ.12): 24ನೇ ಗ್ರ್ಯಾನ್ ಸ್ಲಾಂ ಪ್ರಶಸ್ತಿ ಗೆಲ್ಲುವ ಸೆರೆನಾ ವಿಲಿಯಮ್ಸ್ ಕನಸು ಮತ್ತೊಮ್ಮೆ ಭಗ್ನಗೊಂಡಿದೆ.
ಯುಎಸ್ ಓಪನ್ ಮಹಿಳಾ ಸಿಂಗಲ್ಸ್ ಸೆಮಿಫೈನಲ್ನಲ್ಲಿ ಸೆರೆನಾ, ಬೆಲಾರುಸ್ನ ವಿಕ್ಟೋರಿಯಾ ಅಜರೆಂಕಾ ವಿರುದ್ಧ 6-1, 3-6, 3-6 ಸೆಟ್‌ಗಳಲ್ಲಿ ಸೋಲುಂಡು ಟೂರ್ನಿಯಿಂದ ಹೊರಬಿದ್ದರು. 2013ರ ಬಳಿಕ ಮೊದಲ ಬಾರಿಗೆ ಅಜರೆಂಕಾ, ಗ್ರ್ಯಾನ್ ಸ್ಲಾಂ ಫೈನಲ್ ಪ್ರವೇಶಿಸಿದ್ದಾರೆ.
ತಾಯಿಯಾದ ಬಳಿಕ ಮೊದಲ ಗ್ರ್ಯಾನ್ ಸ್ಲಾಂ ಗೆಲ್ಲಲು ಸೆರೆನಾ ಮತ್ತಷ್ಟು ದಿನಗಳ ಕಾಲ ಕಾಯಬೇಕಿದೆ. ಹಿಂದಿನ 7 ಗ್ರ್ಯಾನ್ ಸ್ಲಾಂಗಳಲ್ಲಿ 4 ಬಾರಿ ಫೈನಲ್ ಪ್ರವೇಶಿಸಿದ್ದ ಸೆರೆನಾ ಪ್ರಶಸ್ತಿ ಗೆಲ್ಲುವಲ್ಲಿ ವಿಫಲರಾಗಿದ್ದರು.
ಯುಎಸ್ ಓಪನ್: ಫೈನಲ್‌ಗೆ ಲಗ್ಗೆಯಿಟ್ಟ ಜಪಾನ್‌ನ ನವೊಮಿ ಒಸಾಕ
ಮತ್ತೊಂದು ಸೆಮೀಸ್‌ನಲ್ಲಿ ಅಮೆರಿಕದ ಜೆನಿಫರ್ ಬ್ರಾಡಿ ವಿರುದ್ಧ 7-6, 3-6, 6-3 ಸೆಟ್‌ಗಳಲ್ಲಿ ಜಯಿಸಿದ 2018ರ ಯುಎಸ್ ಓಪನ್ ಚಾಂಪಿಯನ್ ಜಪಾನ್‌ನ ನವೊಮಿ ಒಸಾಕ, ಫೈನಲ್ ಪ್ರವೇಶಿಸಿದ್ದಾರೆ. ಫೈನಲ್‌ನಲ್ಲಿ ಅಜರೆಂಕಾ ವಿರುದ್ಧ ಸೆಣಸಲಿದ್ದಾರೆ. ಉಭಯ ಆಟಗಾರ್ತಿಯರು 3ನೇ ಗ್ರ್ಯಾನ್ ಸ್ಲಾಂ ಪ್ರಶಸ್ತಿಗಾಗಿ ಸೆಣಸಲಿದ್ದಾರೆ.