ಶೂಟಿಂಗ್ ರೇಂಜ್‌ನಲ್ಲೇ ಶೂಟರ್‌ಗಳ ಫೈಟಿಂಗ್! ವಿಡಿಯೋ ವೈರಲ್
ರಾಷ್ಟ್ರ-ರಾಜಧಾನಿಯಲ್ಲಿರುವ ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಇಬ್ಬರು ಶೂಟರ್’ಗಳು ಕ್ಷುಲ್ಲಕ ಕಾರಣಕ್ಕೆ ಬಡಿದಾಡಿಕೊಂಡಿದ್ದಾರೆ. ಆ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಕುರಿತಾದ ವಿಡಿಯೋ ಇಲ್ಲಿದೆ ನೋಡಿ...
ನವದೆಹಲಿ[ಅ.22]: ಇಲ್ಲಿನ ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ಶೂಟರ್ಗಳಿಬ್ಬರು ಪರಸ್ಪರ ಹೊಡೆದಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಶೂಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ ತಮಿಳು ನಟ ಅಜಿತ್!
ಹೀಗಿದೆ ನೋಡಿ ಹೊಡೆದಾಟದ ವಿಡಿಯೋ:
ಶೂಟಿಂಗ್ ವಿಶ್ವಕಪ್: ಭಾರತಕ್ಕೆ ಅಗ್ರಸ್ಥಾನ!
ಬಾಬರ್ ಖಾನ್ ಹಾಗೂ ಭಾರತ ಡಬಲ್ ಟ್ರ್ಯಾಪ್ ತಂಡದ ಮಾಜಿ ಸದಸ್ಯ ಯೋಗಿಂದರ್ ಪಾಲ್ ಸಿಂಗ್, ವೇಳಾಪಟ್ಟಿ ಸಂಬಂಧ ವಾದ ನಡೆಸುತ್ತಿದ್ದರು. ವಾದ ಹೊಡೆದಾಟದಲ್ಲಿ ಅಂತ್ಯಗೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆ ಘಟನೆಯ ತನಿಖೆಗೆ ಆದೇಶಿಸಿದೆ. ಇದೇ ವೇಳೆ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ಇಬ್ಬರ ಸದಸ್ಯತ್ವವನ್ನು ರದ್ದುಗೊಳಿಸಿದೆ.