ಬೆಂಗಳೂರು: ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಸುಧಾರಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ, ಈ ಭಾಗಕ್ಕೆ ವಿಶೇಷ ಅನುದಾನ ನೀಡುವುದನ್ನು ಮುಂದುರೆಸುತ್ತೇವೆ. ಹಿಂದೆ ಕಲಬುರಗಿಗೆ ಬಂದಾಗ ಪ್ರತಿ ವರ್ಷ 5 ಸಾವಿರ ಕೋಟಿ ರು. ಕೊಡುವೆ ಅಂತ ಹೇಳಿದ್ದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ. ಮುಂದಿನ ವರ್ಷವೂ 5 ಸಾವಿರ ಕೋಟಿ ರು. ಖರ್ಚು ಮಾಡಬೇಕು ಅಂತ ಸೂಚನೆ ಕೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.