ಅಮಿತ್ ಶಾ ಮಂಡ್ಯ ಸಮಾವೇಶಕ್ಕೆ 1 ಲಕ್ಷ ಜನ: ಎಸ್‌ಟಿಎಸ್‌

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ರಾಜ್ಯಕ್ಕೆ ಆಗಮಿಸುತ್ತಿದ್ದು, ಪಕ್ಷದ ಸಭೆಗಳು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಿರುವ ಸಹಕಾರ ಇಲಾಖೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

1 lakh people for Amit Shah Mandya convention says STS rav

ಸುವರ್ಣವಿಧಾನಸೌಧ (ಡಿ.29) : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ರಾಜ್ಯಕ್ಕೆ ಆಗಮಿಸುತ್ತಿದ್ದು, ಪಕ್ಷದ ಸಭೆಗಳು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಿರುವ ಸಹಕಾರ ಇಲಾಖೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಮಂಡ್ಯದಲ್ಲಿ ನಡೆಯುವ ಬೃಹತ್‌ ಸಮಾವೇಶದಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಹಾಸನ ಜಿಲ್ಲೆಯ ಜನರು ಮಂಡ್ಯದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪಕ್ಷ ಸಂಘಟನೆ: ಗುರುವಾರ ರಾಜ್ಯಕ್ಕೆ ಅಮಿತ್ ಶಾ ಆಗಮನ

ಅಮಿತ್‌ ಶಾ ಭೇಟಿಯಿಂದ ಆ ಭಾಗದಲ್ಲಿ ಬಿಜೆಪಿ ಬಲ ಹೆಚ್ಚಲಿದೆ. ಸಮಾವೇಶವು ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಮಂಡ್ಯ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಭದ್ರಕೋಟೆಯಾಗಿ ಉಳಿಯುವುದಿಲ್ಲ. ಅಲ್ಲಿ ಅವು ಸೋಲಲಿವೆ. ಸಮಾವೇಶದ ಯಶಸ್ಸಿಗಾಗಿ ಅಬಕಾರಿ ಸಚಿವ ಗೋಪಾಲಯ್ಯ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಶ್ರಮಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

2023ರ ಅಸೆಂಬ್ಲಿ ಚುನಾವಣೆಯಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಹಾಸನ ಭಾಗದಲ್ಲಿ ಅತಿ ಹೆಚ್ಚು ಬಿಜೆಪಿ ಶಾಸಕರು ಗೆಲ್ಲಬೇಕೆಂಬ ಗುರಿ ನಮ್ಮದು. ಈ ನಿಟ್ಟಿನಲ್ಲಿ ಪಕ್ಷ ಬಲಪಡಿಸಲು ವಿಶೇಷ ಗಮನ ಕೊಡುತ್ತಿದ್ದೇವೆ ಎಂದರು.

ವಿವಿಧ ಸರ್ಕಾರಿ ಕಾರ‍್ಯಕ್ರಮಗಳು:

ಸಮಾವೇಶದ ಬಳಿಕ ಸಂಜೆ 5.30ಕ್ಕೆ ಬೆಂಗಳೂರಿನ ಪ್ಯಾಲೇಸ್‌ನಲ್ಲಿ ಸಹಕಾರ ಕ್ಷೇತ್ರದಿಂದ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 24 ಸಾವಿರ ಕೋಟಿ ಸಾಲ ನೀಡುವ ಕಾರ್ಯಕ್ರಮ ನಡೆಯಲಿದೆ. ಯಶಸ್ವಿನಿ ಯೋಜನೆಗೆ 20 ಲಕ್ಷ ಜನರು ನೋಂದಾವಣೆ ಆಗಿದ್ದಾರೆ. ಯೋಜನೆಗೆ ಜನವರಿ ಒಂದರಿಂದ ಮರು ಚಾಲನೆ ನೀಡುವ ಕಾರ್ಯವನ್ನು ಅಮಿತ್‌ ಶಾ ಅವರು ಉದ್ಘಾಟಿಸಲಿದ್ದಾರೆ. ಅಲ್ಲದೆ, ಸ್ತ್ರೀಶಕ್ತಿ ಗುಂಪುಗಳಿಗೆ ಸಾಲ ನೀಡುತ್ತಾರೆ ಎಂದರು.

ಸಕ್ಕರೆ ಕ್ಷೇತ್ರ ಬಲಿಷ್ಠಗೊಳಿಸಲು ಅಮಿತ್‌ ಶಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಸುಮಾರು 5,700 ವಿಎಸ್‌ಎಸ್‌ಗಳಿಗೆ, ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಲಭಿಸಿದ ಪ್ರಯೋಜನವನ್ನು ಪರಿಶೀಲಿಸುವರು. ಶನಿವಾರ ಮಲ್ಲೇಶ್ವರದ ಸೌಹಾರ್ದ ಫೆಡರೇಶನ್‌ಗೆ ಭೇಟಿ ನೀಡಿ ಸೌಹಾರ್ದ ಸಹಕಾರಿಗಳ ಸಭೆ ನಡೆಸಲಿದ್ದಾರೆ. ರಾಜ್ಯದ ಸಹಕಾರ ಇಲಾಖೆ ದೇಶದಲ್ಲಿ 2ನೇ ಸ್ಥಾನದಲ್ಲಿದೆ ಎಂದು ವಿವರಿಸಿದರು.

Assembly Election 2023: ಅಮಿತ್ ಶಾ ಕರ್ನಾಟಕ ಭೇಟಿ: ರಾಜ್ಯದಲ್ಲಿ ಚಾಣಕ್ಯನ 'ರಣತಂತ್ರ' ಏನು?

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮದ್ದೂರಿನ ಮೆಗಾ ಡೇರಿಯನ್ನು ಉದ್ಘಾಟಿಸಲು ಅಮಿತ್‌ ಶಾ ಒಪ್ಪಿಕೊಂಡಿದ್ದಾರೆ. ಬಳಿಕ ಸಹಕಾರಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಬಾರ್ಡ್‌ನಿಂದ ಕೊಡುವ 24 ಸಾವಿರ ಕೋಟಿ ರು. ಸಾಲವನ್ನು ದ್ವಿಗುಣಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯೋಚಿಸಿದ್ದಾರೆ. ಆ ಬಗ್ಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

Latest Videos
Follow Us:
Download App:
  • android
  • ios