ಬೆಂಗಳೂರು, (ಆ.16): ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 1 ಸಾವಿರ ಕೋಟಿ ರೂ.ಗಳನ್ನು 50 ಲಕ್ಷ ರೈತರಿಗೆ ಬಿಡುಗಡೆಯಾಗಿದ್ದು, ಕಳೆದ ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದು ಕೃಷಿ ಸಚಿವ  ಬಿಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯದ ರೈತ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಬಿಸಿ ಪಾಟೀಲ್, 2019-20ನೇ ಸಾಲಿನ ಬೆಳೆ ವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ವಿಮೆಗಾಗಿ ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವುದಾಗಲೀ ಚಿಂತಿಸುವ ಅವಶ್ಯಕತೆಯಿಲ್ಲ. ರೈತ ಬಾಂಧವರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ.

ಬಂದೇ ಬಾರಿಗೆ ಸಿಎಂ, ಪಿಎಂನಿಂದ ರೈತರಿಗೆ ಭರ್ಜರಿ ಗಿಫ್ಟ್...!

 ರಾಜ್ಯದಲ್ಲಿ ಯೂರಿಯಾ ಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ಕಳೆದ ಸಾಲಿಗಿಂತ ಈ ವರ್ಷ ಶೇ.25 ರಷ್ಟು ಹೆಚ್ಚಿನದಾಗಿ ಬಿತ್ತನೆಯಾಗಿದೆ. ಆದ್ದರಿಂದ ಈ ವರ್ಷ 65 ಸಾವಿರ ಮೆಟ್ರಿಕ್ ಟನ್ ಯೂರಿಯಾ ಹೆಚ್ಚಿನದಾಗಿ ಪೂರೈಕೆಯಾಗುತ್ತಿದೆ. ಈ ವಾರ 37 ಸಾವಿರ ಟನ್ ಯೂರಿಯಾ ಸರಬರಾಜು ಆಗುತ್ತಿದೆ ಎಂದು ಮಾಹಿತಿ ನೀಡಿದರು.