ಕರ್ನಾಟಕದಿಂದ ತೆಲಂಗಾಣಕ್ಕೆ 1000 ಕೋಟಿ, ರಾಜ್ಯದಲ್ಲಿರೋದು 100% ಭ್ರಷ್ಟ ಸರ್ಕಾರ: ಜೋಶಿ ಆಕ್ರೋಶ
ಈ ಹಿಂದೆಯೂ ಮುಖ್ಯಮಂತ್ರಿಯವರು ಇದೇ ರೀತಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕಳುಹಿಸಿದ್ದರು. ಇದೀಗ ವಾಲ್ಮೀಕಿ ನಿಗಮದ ಹಣ ನುಂಗಿ ನೀರು ಕುಡಿದಿದ್ದಾರೆ. ಸಿಎಂಗೆ ಈ ಬಗ್ಗೆ ಎಲ್ಲವೂ ಗೊತ್ತಿದ್ದು, ಇದೀಗ ಹತಾಶ ಭಾವನೆಯಿಂದ ಅವರ ಶಿಷ್ಯರ ಬಗ್ಗೆ ಮಾತನಾಡುತ್ತಿದ್ದಾರೆ. ಶಾಸಕ ದದ್ದಲ ಅವರು ನನ್ನನ್ನು ಬಂಧಿಸಿ ಎಂದು ಎಸ್‌ಐಟಿ ಎದುರು ಏತಕ್ಕೆ ಕೂರಬೇಕಿತ್ತು ಎಂದು ಜೋಶಿ ಪ್ರಶ್ನಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಧಾರವಾಡ(ಜು.14): ರಾಜ್ಯದಲ್ಲಿರೋದು ನೂರು ಪರ್ಸೆಂಟ್ ಭ್ರಷ್ಟ ಸರ್ಕಾರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಹಿಂದೆ ಯಾವುದೇ ಸಾಕ್ಷ್ಯಾಧ ಕ್ಷಾಧಾರ ಇಲ್ಲದಿದ್ದರೂ ಕಾಂಗ್ರೆಸ್‌ನವರು ನಮ್ಮ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಆದರೀಗ ರಾಜ್ಯದಲ್ಲಿರೋದು 100 ಪರ್ಸೆಂಟ್ ಭ್ರಷ್ಟ ಸರ್ಕಾರ ಎಂದು ಆರೋಪಿಸಿದರು.
ಕಳೆದೊಂದು ವರ್ಷದಲ್ಲಿ ಕಾಂಗ್ರೆಸ್ ನಾಯಕರಿಂದ ಭಾರೀ ಭ್ರಷ್ಟಾಚಾರ ನಡೆದಿದೆ. ಸರಿ ಸುಮಾರು 1000 ಕೋಟಿ ರು. ಸಂಗ್ರಹಿಸಿ ತೆಲಂಗಾಣಕ್ಕೆ ಕೊಡಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆಶಿಗೆ ಗೊತ್ತಿದ್ದೇ ಆದ ಹಗರಣ. ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಹ ಭಾಗಿಯಾಗಿದ್ದು, ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ಅಕ್ಕಿ ಕೊಡ್ತೇವೆ, ಆದರೆ ಖರೀದಿಗೆ ರಾಜ್ಯದಲ್ಲಿ ಹಣವೇ ಇಲ್ಲ: ಪ್ರಲ್ಹಾದ್ ಜೋಶಿ
ಈ ಹಿಂದೆಯೂ ಮುಖ್ಯಮಂತ್ರಿಯವರು ಇದೇ ರೀತಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕಳುಹಿಸಿದ್ದರು. ಇದೀಗ ವಾಲ್ಮೀಕಿ ನಿಗಮದ ಹಣ ನುಂಗಿ ನೀರು ಕುಡಿದಿದ್ದಾರೆ. ಸಿಎಂಗೆ ಈ ಬಗ್ಗೆ ಎಲ್ಲವೂ ಗೊತ್ತಿದ್ದು, ಇದೀಗ ಹತಾಶ ಭಾವನೆಯಿಂದ ಅವರ ಶಿಷ್ಯರ ಬಗ್ಗೆ ಮಾತನಾಡುತ್ತಿದ್ದಾರೆ. ಶಾಸಕ ದದ್ದಲ ಅವರು ನನ್ನನ್ನು ಬಂಧಿಸಿ ಎಂದು ಎಸ್‌ಐಟಿ ಎದುರು ಏತಕ್ಕೆ ಕೂರಬೇಕಿತ್ತು ಎಂದು ಜೋಶಿ ಪ್ರಶ್ನಿಸಿದರು.