ಸಿಎಂ ಬೊಮ್ಮಾಯಿ ಮತ್ತು ಕೃಷಿ ಸಚಿವರ ಜಿಲ್ಲೆಯಲ್ಲೇ 112ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಉಳಿದ ಜಿಲ್ಲೆಗಳ ಸ್ಥಿತಿ ಹೇಗಿರಬಹುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಹಾವೇರಿ (ಅ.22) : ಸಿಎಂ ಬೊಮ್ಮಾಯಿ ಮತ್ತು ಕೃಷಿ ಸಚಿವರ ಜಿಲ್ಲೆಯಲ್ಲೇ 112ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಉಳಿದ ಜಿಲ್ಲೆಗಳ ಸ್ಥಿತಿ ಹೇಗಿರಬಹುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಈ ಸರ್ಕಾರದಿಂದ ರೈತರ ಉದ್ಧಾರ ಎಷ್ಟಾಗಿದೆ ಎಂಬುದಕ್ಕೆ ಈ ಆತ್ಮಹತ್ಯೆಗಳೇ ಸಾಕ್ಷಿ ಎಂದಿರುವ ಅವರು, ರಾಜ್ಯದ ಉಳಿದ ಜಿಲ್ಲೆಗಳ ಅಂಕಿ ಅಂಶ ತೆಗೆದರೆ ಬೊಮ್ಮಾಯಿ ಸರ್ಕಾರವೇ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

ಹಾವೇರಿಯಲ್ಲಿ ಕಳೆದ 10 ತಿಂಗಳಲ್ಲಿ ಬೆಳೆಹಾನಿ ಹಾಗೂ ಸಾಲಬಾಧೆಗೆ 112 ರೈತರು ಆತ್ಮಹತ್ಯೆಗೆ ಶರಣಾಗಿರುವುದು ಗಂಭೀರವಾದ ವಿಷಯ ಎಂದಿರುವ ಅವರು ಈ ಸರ್ಕಾರದಲ್ಲಿ ರೈತರ ಜೀವನ ತುಂಬಾ ಕಷ್ಟಕರವಾಗಿದೆ. ಸಿಎಂ, ಕೃಷಿ ಸಚಿವರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿನ ರೈತರನ್ನೇ ಉದ್ಧಾರ ಮಾಡಲಾಗದವರು. ಈ ರಾಜ್ಯದ ಜನರನ್ನು ಉದ್ಧಾರ ಮಾಡುತ್ತಾರಾ? ಬಿಜೆಪಿ ಸರ್ಕಾರ ಬಂದ ಬಳಿಕ ರೈತರ ಬದುಕು ಅಸಹನೀಯವಾಗಿದೆ. ಹೀಗಾಗಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಕೆಶಿ ವಿರುದ್ದ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ

Scroll to load tweet…