ಯಡಿಯೂರಪ್ಪನವರ ಮುಂದಿನ ಗುರಿ ಏನು? ಕಾರ್ಯಕಾರಣಿ ಸಭೆಯಲ್ಲಿ ಬಹಿರಂಗ..!

ಶಿವಮೊಗ್ಗದಲ್ಲಿ ಇಂದು (ಭಾನುವಾರ) ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ಮುಂದಿನ ಗುರಿ ಬಗ್ಗೆ ತಿಳಿಸಿದರು.

150 Seats Our Target In Next Assembly Election Says CM BS Yediyurappa

ಬೆಂಗಳೂರು, (ಜ.03): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ 140 ರಿಂದ 150 ಶಾಸಕರನ್ನು ಗೆಲ್ಲಿಸುವ ಗುರಿಯಿದ್ದು, ಇದಕ್ಕಾಗಿ ಪಕ್ಷ ಸಂಘಟಿಸಲು ಶೀಘ್ರವೇ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಇಂದು (ಭಾನುವಾರ) ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವಿಗೆ ಗರಿಷ್ಠ ಶ್ರಮ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಆಪ್ತ ನಾಯಕರೊಂದಿಗೆ ಅರುಣ್ ಸಿಂಗ್ ಚರ್ಚೆ: ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ 

ಕೃಷಿಕರಿಗೆ ತೊಂದರೆಯಾಗುವ ಕಸ್ತೂರಿರಂಗನ್ ವರದಿ ಜಾರಿ ಬರಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಕಾನೂನು ಪ್ರಕಾರವೇ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ನಡೆಯಲಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವದ ಅಗ್ರಗಣ್ಯ ನಾಯಕ ಎಂದು ಜಗತ್ತು ಒಪ್ಪಿಕೊಂಡಿದೆ. ದೇಶವನ್ನು ಮಾದರಿ ರಾಷ್ಟ್ರವನ್ನಾಗಿ ಮಾಡಲು ಶ್ರಮ ವಹಿಸಿರುವ ಅಗ್ರಗಣ್ಯ ನಾಯಕ ಮೋದಿ ಅವರು ಮತ್ತೊಂದು ಬಾರಿ ಪ್ರಧಾನಿಯಾಗಿ ದೇಶವನ್ನು ಅಗ್ರಗಣ್ಯ ರಾಷ್ಟವನ್ನಾಗಿ ಮಾಡಲಿ ಎಂದು ಆಶಿಸಿದರು.

ಇಬ್ಬರೇ ಶಾಸಕರಿದ್ದ ನಮ್ಮ ಪಕ್ಷ ಇಂದು ಅಧಿಕಾರದಲ್ಲಿರಲು ಸಾವಿರಾರು ಜನ ಕಾರ್ಯಕರ್ತರ ತ್ಯಾಗ, ಬಲಿದಾನವೇ ಕಾರಣ. ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆ ಯಶಸ್ಸಿಗೆ ಸಾಮೂಹಿಕ ನೇತೃತ್ವ ಹಾಗೂ ಪರಿಶ್ರಮವೇ ಕಾರಣವಾಗಿದೆ. ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಯಶಸ್ಸಿನ ಮೇಲೆ ಮುಂದಿನ ವಿಧಾನಸಭಾ ಚುನಾವಣೆಯ ಫಲಿತಾಂಶ ನಿಂತಿದೆ. ಆದ್ದರಿಂದ ಅಲ್ಲಿ ನಾವು ಹೆಚ್ಚಿನ ಶ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕರ್ತರು ಮತ್ತು ಮುಖಂಡರು ಪಕ್ಷದ ಸಂಘಟನೆಗೆ ಕೆಲವು ವರ್ಷಗಳನ್ನಾದರೂ ನೀಡಬೇಕು. ಎರಡರಿಂದ ಮೂರು ಡಿಗ್ರಿ ಪಡೆದ ಆರೆಸ್ಸೆಸ್ ಪೂರ್ಣಾವಧಿ ಕಾರ್ಯಕರ್ತರ ಪ್ರೇರಣಾದಾಯಕ ಕಾರ್ಯವನ್ನು ನಾವು ಅನುಸರಿಸಬೇಕು ಎಂದು ಎಂದರು.

Latest Videos
Follow Us:
Download App:
  • android
  • ios