* ಕೊರೋನಾ ಪ್ರಕರಣಗಳ ಸಂಖ್ಯೆ ಇದೀಗ ಮತ್ತೆ ದಿಢೀರ್ ಏರಿಕೆ* 1,875 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ* ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.20.

ಬೆಂಗಳೂರು, (ಆ.01): ಕೊರೋನಾ ಎರಡನೇ ಇಳಿಮುಖವಾಗುತ್ತಿದೆ ಎನ್ನುವಷ್ಟರಲ್ಲೇ ಮತ್ತೆ ಪಾಸಿಟಿವ್ ಸಂಖ್ಯೆಗಳಲ್ಲಿ ಇದೀಗ ಮತ್ತೆ ದಿಢೀರ್ ಏರಿಕೆಯಾಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯಾದ್ಯಂತ ಇಂದು (ಆ.01) 1,55,048 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಈ ಪೈಕಿ 1,875 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 25 ಜನರು ಬಲಿಯಾಗಿದ್ದಾರೆ. ಇನ್ನು 1,502 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೋನಾ ತಡೆಯಲು ರಣತಂತ್ರ: ಗಡಿಯಲ್ಲಿ ಕಠಿಣ ನಿಯಮ ಜಾರಿ

ಈ ಮೂಲಕ ಸೋಂಕಿತರ ಸಂಖ್ಯೆ 29,06,999ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 36,587ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,46,244ಕ್ಕೆ ಏರಿಕೆಯಾಗಿದೆ. ಇನ್ನು 24,144 ಸಕ್ರೀಯ ಪ್ರಕರಣಗಳಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.20. 

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 409 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 8 ಮಂದಿ ಬಲಿಯಾಗಿದ್ದಾರೆ. ನಗರದಲ್ಲಿ ಸೋಂಕಿತರ ಸಂಖ್ಯೆ 12,27,748ಕ್ಕೆ ಏರಿಕೆಯಾಗಿದೆ.