ರಾಹುಲ್ ಗಾಂಧಿಯಿಂದ ಯುವಕರಿಗೆ 2 ಘೋಷಣೆ: ಸತೀಶ ಜಾರಕಿಹೊಳಿ
ಪ್ರಧಾನಿ ಮೋದಿಯವರು ವರ್ಷಕ್ಕೆ 2 ಕೋಟಿ ಜನ ಯುವಕರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದರು. ಆದರೆ ಅವರ ಘೋಷಣೆ ಘೋಷಣೆಯಾಗಿಯೇ ಉಳಿದಿದೆ. ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಯೋಜನೆಗಳನ್ನು ಈಡೇರಿಸಿದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು: ಸತೀಶ ಜಾರಕಿಹೊಳಿ
ಬೆಳಗಾವಿ(ಮಾ.19): ಯುವಕರನ್ನು ಮುಖ್ಯವಾಹಿನಿಗೆ ತರಲು ಕಾಂಗ್ರೆಸ್ ಪಕ್ಷ ಸದಾ ಬದ್ಧವಿದೆ. ಸಮಾವೇಶದಲ್ಲಿ ರಾಹುಲ್ ಗಾಂಧಿಯವರು ಯುವಕರಿಗಾಗಿ ಎರಡು ಘೋಷಣೆಗಳನ್ನು ಘೋಷಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ನಗರಕ್ಕೆ ಮಾ.20ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತೆ ಪರಿಶೀಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ವರ್ಷಕ್ಕೆ 2 ಕೋಟಿ ಜನ ಯುವಕರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದರು. ಆದರೆ ಅವರ ಘೋಷಣೆ ಘೋಷಣೆಯಾಗಿಯೇ ಉಳಿದಿದೆ. ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಯೋಜನೆಗಳನ್ನು ಈಡೇರಿಸಿದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ತಿಳಿಸಿದರು.
ಚುನಾವಣೆಗೂ ಮುನ್ನ ಬಿಜೆಪಿ, ಕಾಂಗ್ರೆಸ್ ಪ್ರಚಾರದ ಅಬ್ಬರ; ಮತದಾರರ ಚಿತ್ತ ಯಾರತ್ತ?
ಈಗ ಬೆಳಗಾವಿಯಲ್ಲಿ ಯುವ ಸಮಾವೇಶ ಮಾಡಲಾಗುತ್ತಿದೆ. ಸಮಾವೇಶಕ್ಕೆ ಕಾಂಗ್ರೆಸ್ ನಾಯಕ ರಾಹುಲ… ಗಾಂಧಿ ಆಗಮಿಸುತ್ತಿದ್ದು, ಯುವಕರಿಗೆ ಹೊಸ ಸಂದೇಶ ನೀಡಲಿದ್ದಾರೆ ಎಂದರು. ಬೆಳಗಾವಿ ಸಮಾವೇಶದಲ್ಲಿ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ರೋಡ್ ಶೋ ಮಾಡುವ ಬಗ್ಗೆ ಇನ್ನೂ ಖಚಿತವಾಗಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಎಲ್ಲಾ ತಯಾರಿಗಳನ್ನು ನಡೆಸುತ್ತಿದ್ದೇವೆ. ಜಿಲ್ಲೆಯಲ್ಲಿಯೂ 10ರಿಂದ 12 ಅಭ್ಯರ್ಥಿಗಳನ್ನು ಗೆಲ್ಲಿಸಲಾಗುವುದು ಎಂದು ತಿಳಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯನವರ ಸ್ಪರ್ಧೆ ಬಗ್ಗೆ ಹೈಕಮಾಂಡಗೆ ಬಿಟ್ಟ ವಿಚಾರ. ನಾವು ಸವದತ್ತಿಯಲ್ಲಿ ಸ್ಪರ್ಧೆ ಮಾಡುತ್ತಿರಾ ಎಂದು ಕೇಳಿದ್ದಿವಿ. ಆದರೆ ಅವರು ಸವದತ್ತಿಯಲ್ಲಿ ಸ್ಪರ್ಧಿಸಲ್ಲ ಎಂದಿದ್ದಾರೆ. ಹೀಗಾಗಿ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು ಎಂದರು. ಸದ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿಲ್ಲ. ಮೊದಲ ಪಟ್ಟಿಯನ್ನು ಮಾ.22ರಂದು ಬಿಡುಗಡೆಯಾಗಲಿದೆ ಎಂದ ಅವರು, ರಮೇಶ ಕತ್ತಿ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ನನ್ನ ಜತೆ ಚರ್ಚೆಯಾಗಿಲ್ಲ. ಸಾಕಷ್ಟುಜನ ಬೇರೆ ಪಕ್ಷದವರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದಷ್ಟೇ ಹೇಳಿದರು.