ಬಿಜೆಪಿಯ 20 ಶಾಸಕರು ಬರ್ತಾರೆ, ಅವರ ಜೊತೆ ಸೇರಿಯೇ ಲೋಕಸಭೆ ಎಲೆಕ್ಷನ್‌ ಎದುರಿಸ್ತೇವೆ: ರಾಜು ಕಾಗೆ

ನಮ್ಮ ಪಕ್ಷದ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮಲ್ಲಿ ಯಾವುದೇ ಒಳ ಜಗಳವಿಲ್ಲ. 135 ಶಾಸಕರೂ ಒಟ್ಟಾಗಿದ್ದೇವೆ. ಆದರೆ, ಬಿಜೆಪಿಯಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಅನೇಕರು ಕಾಂಗ್ರೆಸ್‌ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯ 20 ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಬರುತ್ತಾರೆ. ಅವರನ್ನು ಕರೆದುಕೊಂಡು ನಾವು ಲೋಕಸಭಾ ಚುನಾವಣೆಗೆ ಹೋಗುತ್ತೇವೆ: ರಾಜು ಕಾಗೆ 

20 MLAs from BJP Join Congress Says Raju Kage grg

ಕಾಗವಾಡ(ಸೆ.07): ‘ಬಿಜೆಪಿಯಿಂದ 20 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ. ಅವರನ್ನು ಕರೆದುಕೊಂಡು ನಾವು ಪಾರ್ಲಿಮೆಂಟ್‌ ಚುನಾವಣೆಗೆ ಹೋಗುತ್ತೇವೆ’ ಎಂದು ಕಾಗವಾಡ ಮತಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ನಮ್ಮ ಪಕ್ಷದ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮಲ್ಲಿ ಯಾವುದೇ ಒಳ ಜಗಳವಿಲ್ಲ. 135 ಶಾಸಕರೂ ಒಟ್ಟಾಗಿದ್ದೇವೆ. ಆದರೆ, ಬಿಜೆಪಿಯಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಅನೇಕರು ಕಾಂಗ್ರೆಸ್‌ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯ 20 ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಬರುತ್ತಾರೆ. ಅವರನ್ನು ಕರೆದುಕೊಂಡು ನಾವು ಲೋಕಸಭಾ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು.

ನಡುಕ ಏನಿದ್ದರು ಡಿಕೆಶಿ ಮತ್ತವರ ಪಕ್ಷಕ್ಕೆ: ಅಶ್ವತ್ಥ ನಾರಾಯಣ

ಕಾಂಗ್ರೆಸ್‌ನಲ್ಲಿಯೇ ಅತೃಪ್ತ ಶಾಸಕರಿದ್ದಾರೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ರಮೇಶ ಜಾರಕಿಹೊಳಿಯವರಿಗೆ ಮಾಡುವುದಕ್ಕೆ ಯಾವುದೇ ಕೆಲಸವಿಲ್ಲ. ಅದಕ್ಕಾಗಿ ನಮ್ಮ ಪಕ್ಷದಲ್ಲಿ ಅತೃಪ್ತ ಶಾಸಕರಿದ್ದಾರೆ ಎನ್ನುತ್ತಿದ್ದಾರೆ ಎಂದು ಜಾರಕಿಹೊಳಿಗೆ ಟಾಂಗ್‌ ನೀಡಿದರು.

Latest Videos
Follow Us:
Download App:
  • android
  • ios