'ಐದು ನ್ಯಾಯ' ವಿಷಯಗಳ ಮೇಲೆ ಕಾಂಗ್ರೆಸ್ ಚುನಾವಣೆ ಎದುರಿಸಲಿದೆ. ಪ್ರತಿ ವಿಷಯಕ್ಕೂ ಐದರಂತೆ 25 ಗ್ಯಾರಂಟಿಗಳನ್ನು ಘೋಷಿಸಲಿದೆ ಎಂದು ಹೇಳಿದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ನವದೆಹಲಿ(ಮಾ.20):  ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕ, ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದಲ್ಲಿ ಸರ್ಕಾರ ರಚಿಸಿದ್ದ ಕಾಂಗ್ರೆಸ್ ಇದೀಗ ಲೋಕಸಭೆ ಚುನಾವಣೆಗೆ 25 ಗ್ಯಾರಂಟಿಗಳನ್ನು ಘೋಷಿಸಲು ಮುಂದಾಗಿದೆ. 

ಪಕ್ಷದ ಪ್ರಣಾಳಿಕೆ ತಯಾರಿಸುವ ಸಂಬಂಧ ಮಂಗಳವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಚರ್ಚೆ ನಡೆಸಲಾಯಿತು. 

ಕಾಂಗ್ರೆಸ್‌ನಿಂದ ಮತ್ತೆರಡು ಗ್ಯಾರಂಟಿ ಘೋಷಣೆ: ಮಲ್ಲಿಕಾರ್ಜುನ ಖರ್ಗೆ

ಈ ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಅವರು, 'ಐದು ನ್ಯಾಯ' ವಿಷಯಗಳ ಮೇಲೆ ಕಾಂಗ್ರೆಸ್ ಚುನಾವಣೆ ಎದುರಿಸಲಿದೆ. ಪ್ರತಿ ವಿಷಯಕ್ಕೂ ಐದರಂತೆ 25 ಗ್ಯಾರಂಟಿಗಳನ್ನು ಘೋಷಿಸಲಿದೆ ಎಂದು ಹೇಳಿದ್ದಾರೆ.