ಬೆಂಗಳೂರು [ಡಿ.11]:  ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಸಿದ್ಧವಾಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈ ಬಗ್ಗೆ ಚರ್ಚೆ ನಡೆಸಲು ಪಕ್ಷದ ವರಿಷ್ಠರ ಭೇಟಿಗಾಗಿ ಕಾಯುತ್ತಿದ್ದಾರೆ.

ಕೇಂದ್ರದ ಗೃಹ ಸಚಿವರೂ ಆಗಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸಂಸತ್‌ ಅಧಿವೇಶನದ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ನಿರತರಾಗಿರುವುದರಿಂದ ಅವರ ಭೇಟಿಗೆ ಸಮಯ ನಿಗದಿಯಾದ ತಕ್ಷಣ ದೆಹಲಿಗೆ ತೆರಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬಹುತೇಕ ಶುಕ್ರವಾರ ಸಂಜೆ ನಂತರ ಅಮಿತ್‌ ಶಾ ಅವರು ಬಿಡುವಾಗಲಿದ್ದಾರೆ. ಹೀಗಾಗಿ, ಗುರುವಾರ ಸಂಜೆ ಅಥವಾ ಶುಕ್ರವಾರ ಯಡಿಯೂರಪ್ಪ ಅವರು ದೆಹಲಿಗೆ ತೆರಳುವ ಸಂಭವವೂ ಇದೆ.

ಲಿಂಬಾವಳಿ, ಯೋಗಿ, ನಿರಾಣಿ, ಕತ್ತಿಗೂ ಮಂತ್ರಿಗಿರಿ?

ನೂತನ ಶಾಸಕರಾಗಿ ಆಯ್ಕೆಯಾದವರ ಜೊತೆ ತಮಗೂ ಸಚಿವ ಸ್ಥಾನ ನೀಡುವಂತೆ ಪಕ್ಷದ ಹಲವು ಹಿರಿಯ ಶಾಸಕರು ಲಾಬಿ ಆರಂಭಿಸಿದ್ದಾರೆ. ಸದ್ಯ ಖಾಲಿ ಉಳಿದಿರುವ 16 ಸಚಿವ ಸ್ಥಾನಗಳ ಪೈಕಿ ಉಪಚುನಾವಣೆಯಲ್ಲಿ ಗೆದ್ದಿರುವ 11 ಮಂದಿಗೆ ನೀಡುವುದು ಬಹುತೇಕ ನಿಶ್ಚಿತವಾಗಿದೆ. ಇನ್ನೆರಡನ್ನು ಮುನಿರತ್ನ, ಪ್ರತಾಪಗೌಡಪಾಟೀಲ್‌ ಅವರಿಗೆ ಮೀಸಲಿಟ್ಟು ಉಳಿದ 3 ಸ್ಥಾನವನ್ನು ಬಿಜೆಪಿಯ ಹಿರಿಯ ಶಾಸಕರಿಗೆ ನೀಡಲು ಚಿಂತಿಸಲಾಗಿದೆ. 

ಉಪಮುಖ್ಯಮಂತ್ರಿ ಹುದ್ದೆ ಕೊಡಲ್ಲ: ಖಡಕ್ ಆಗಿ ಹೇಳಿದ ಬಿಜೆಪಿ ನಾಯಕ...

ಹಿರಿಯ ಶಾಸಕರಾದ ಉಮೇಶ್‌ ಕತ್ತಿ, ಅರವಿಂದ ಲಿಂಬಾವಳಿ, ರಾಜುಗೌಡ, ಮುರುಗೇಶ್‌ ನಿರಾಣಿ ಮೊದಲಾದವರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಪ್ರಯತ್ನ ಆರಂಭಿಸಿದ್ದಾರೆ. ಈ ನಡುವೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಶಾಸಕರನ್ನು ಪಕ್ಷಕ್ಕೆ ಕರೆತರುವಲ್ಲಿ ಶ್ರಮಿಸಿದವರಲ್ಲಿ ಒಬ್ಬರಾಗಿರುವ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ಅವರೂ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ವಿವರ ಪುಟ 7