Asianet Suvarna News Asianet Suvarna News

ಬಿಜೆಪಿ, ಜೆಡಿಎಸ್‌ನ 30 ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಸಚಿವ ಚಲುವರಾಯಸ್ವಾಮಿ

ಬಿಜೆಪಿ ಮತ್ತು ಜೆಡಿಎಸ್ ಪಕ್ಷದ 30 ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲು ತುದಿಗಾಲಲ್ಲಿ ನಿಂತಿದ್ದಾರೆ. ಯಾರು ಪಕ್ಷ ಸೇರುತ್ತಾರೆ ಎಂದು ತಿಳಿದರೆ ಎರಡೂ ಪಕ್ಷದ ನಾಯಕರಿಗೆ ಶಾಕ್ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಸ್ವಾಮಿ ಶುಕ್ರವಾರ ತಿಳಿಸಿದರು. 
 

30 MLAs from BJP and JDS are on the verge of joining Congress Says Minister N Cheluvarayaswamy gvd
Author
First Published Jan 27, 2024, 4:35 AM IST

ಮಂಡ್ಯ (ಜ.27): ಬಿಜೆಪಿ ಮತ್ತು ಜೆಡಿಎಸ್ ಪಕ್ಷದ 30 ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲು ತುದಿಗಾಲಲ್ಲಿ ನಿಂತಿದ್ದಾರೆ. ಯಾರು ಪಕ್ಷ ಸೇರುತ್ತಾರೆ ಎಂದು ತಿಳಿದರೆ ಎರಡೂ ಪಕ್ಷದ ನಾಯಕರಿಗೆ ಶಾಕ್ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಶುಕ್ರವಾರ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ಸಾದ ನಂತರ ಬಹಳಷ್ಟು ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆ ಎಂಬ ವಿಪಕ್ಷ ನಾಯಕ ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಆಡಳಿತವನ್ನು ಕಂಡು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಶಾಸಕರುಗಳು ಕಾಂಗ್ರೆಸ್‌ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಅವರನ್ನು ಲೋಕಸಭಾ ಚುನಾವಣೆ ಮುನ್ನ ಅಥವಾ ನಂತರ ಬರಮಾಡಿಕೊಳ್ಳುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ವಾಪಸ್ ಹೋಗಿದ್ದರಿಂದ ನಮಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಕಳೆದ ಚುನಾವಣೆ ವೇಳೆ ಬಿಜೆಪಿಯಲ್ಲಿ ನೋವಾಗಿದೆ ಎಂದು ಅವರೇ ಬಂದರು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಬಳಿಕ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಇದೀಗ ವಾಪಸ್ಸು ಹೋಗಿದ್ದಾರೆ. ಇದರಿಂದ ನಮಗೇನೂ ನಷ್ಟವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟ್ರಾಫಿಕ್ ಸಮಸ್ಯೆ ತಡವಾಗಿ ಬಂದ ಸಚಿವರು: ಬೆಂಗಳೂರಿನಲ್ಲಿ ಉಂಟಾದ ಟ್ರಾಫಿಕ್ ಸಮಸ್ಯೆಯಿಂದಾಗಿ ಗಣರಾಜ್ಯೋತ್ಸವ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ 20 ನಿಮಿಷ ತಡವಾಗಿ ಆಗಮಿಸಿದರು. ಶುಕ್ರವಾರ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನಿಗದಿಯಾಗಿತ್ತು. ಆದರೆ, ಸಚಿವ ಎನ್.ಚಲುವರಾಯಸ್ವಾಮಿ ಅವರು ತಡವಾಗಿ ಆಗಮಿಸಿದ್ದರಿಂದ 9.22ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈವರೆಗೆ ಎಲ್ಲ ಸಚಿವರು ರಾಷ್ಟ್ರೀಯ ಹಬ್ಬಗಳಂದು ಹಿಂದಿನ ದಿನವೇ ಮಂಡ್ಯ ಅಥವಾ ಮೈಸೂರಿನಲ್ಲಿ ವಾಸ್ತವ್ಯ ಹೂಡಿ, ನಿಗದಿತ ಸಮಯಕ್ಕೆ ವೇದಿಕೆಗೆ ಆಗಮಿಸುತ್ತಿದ್ದರು. 

ಕಾಂಗ್ರೆಸ್‌ ಮೋಸಕ್ಕೆ ಜಗದೀಶ್‌ ಶೆಟ್ಟರ್‌ ಸಾಕ್ಷಿ: ಮಾಜಿ ಪ್ರಧಾನಿ ದೇವೇಗೌಡ

ಆದರೆ, ಸಚಿವ ಚಲುವರಾಯಸ್ವಾಮಿ ಅವರು ಶುಕ್ರವಾರ ಬೆಂಗಳೂರಿನಿಂದ ನೇರವಾಗಿ ಮಂಡ್ಯಗೆ ಬಂದಿದ್ದರಿಂದ ಕೆಂಗೇರಿ ಬಳಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಮಂಡ್ಯಗೆ ಬರುವುದು ತಡವಾಯಿತು. ಬೆಳಗ್ಗೆ 9.20ಕ್ಕೆ ಡಿಎಆರ್ ಮೈದಾನಕ್ಕೆ ಆಗಮಿಸಿದ ಸಚಿವರು ನೇರವಾಗಿ ಧ್ವಜಕಟ್ಟೆ ಏರಿ, ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪಾಭಿಷೇಕ ನೆರವೇರಿಸಿದರು. ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಸತತ ಮೂರು ದಿನಗಳ ರಜೆ ಹಿನ್ನೆಲೆಯಲ್ಲಿ ಕೆಂಗೇರಿಯಲ್ಲಿ ಟ್ರಾಫಿಕ್ ಹೆಚ್ಚಾಗಿತ್ತು. ಡಿಐಜಿ ಶರತ್‌ಚಂದ್ರ ಅವರಿಗೆ ಕರೆ ಮಾಡಿ ಹೆಚ್ಚಿನ ಪೊಲೀಸರನ್ನು ಸ್ಥಳಕ್ಕೆ ಕರೆಸಿಕೊಂಡು ಟ್ರಾಫಿಕ್ ನಿಯಂತ್ರಿಸಿ, ಮಂಡ್ಯಗೆ ಬರುವುದು ತಡವಾಯಿತು ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.

Latest Videos
Follow Us:
Download App:
  • android
  • ios