Asianet Suvarna News Asianet Suvarna News

ವಿಧಾನ ಪರಿಷತ್ ಚುನಾವಣೆ 2024: 7 ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ 300 ಆಕಾಂಕ್ಷಿ..!

ವಿಧಾನ ಪರಿಷತ್ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ನಿರೀಕ್ಷೆಗೂ ಮೀರಿ ಹೆಚ್ಚಾಗಿದೆ. 300ಕ್ಕೂ ಹೆಚ್ಚಿನ ಜನ ಆಕಾಂಕ್ಷಿಗಳಿದ್ದಾರೆ. ಟಿಕೆಟ್ ನೀಡುವ ಮಾನದಂಡ ಏನಾಗಿರಬೇಕು? ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 

300 Aspirants in Congress for 7 Seats in Vidhan Parishat Election 2024 in Karnataka grg
Author
First Published May 29, 2024, 8:56 AM IST

ಬೆಂಗಳೂರು/ನವದೆಹಲಿ(ಮೇ.29):  ವಿಧಾನಪರಿಷತ್ ಚುನಾವಣೆ ಟಿಕೆಟ್‌ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚಿನ ಆಕಾಂಕ್ಷಿಗಳಿದ್ದು, ಟಿಕೆಟ್ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ ನಾಯಕರು ತೀರ್ಮಾನ ತೆಗೆದು ಕೊಳ್ಳಲಿದ್ದಾರೆ. ಈಗಾಗಲೇ ಪಕ್ಷಕ್ಕೆ ದುಡಿದ ಅರ್ಹರಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದು, ಒಂದು ಸುತ್ತಿನ ಸಭೆ ಆಗಿದೆ. ಈ ಬಾರಿ ಎಲ್ಲ ವರ್ಗದವರಿಗೂ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಹೇಳಿದ್ದಾರೆ.

ಬಳಿಕ ದೆಹಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರನ್ನು ಭೇಟಿಯಾದ ನಂತರ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ನಿರೀಕ್ಷೆಗೂ ಮೀರಿ ಹೆಚ್ಚಾಗಿದೆ. 300ಕ್ಕೂ ಹೆಚ್ಚಿನ ಜನ ಆಕಾಂಕ್ಷಿಗಳಿದ್ದಾರೆ. ಟಿಕೆಟ್ ನೀಡುವ ಮಾನದಂಡ ಏನಾಗಿರಬೇಕು? ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ. ಎಲ್ಲ ವರ್ಗದಿಂದಲೂ ಟಿಕೆಟ್ ಗಾಗಿ ಬೇಡಿಕೆಯಿದೆ. ಆದರೆ, ಈ ಬಾರಿ ಎಲ್ಲ ವರ್ಗದವರಿಗೂ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ, ಮುಂದಿನ ಬಾರಿ ಅವಕಾಶ ಮಾಡಿಕೊಡುತ್ತೇವೆ ಎಂದರು. ಟಿಕೆಟ್‌ಗೆ ಕಾಂಗ್ರೆಸ್‌ನಲ್ಲಿ 100 ಆಕಾಂಕ್ಷಿಗಳಿದ್ದಾರೆ ಎಂದು ವರದಿಯಾಗಿತ್ತು. ಆದರೆ ಆಕಾಂಕ್ಷಿಗಳ ಸಂಖ್ಯೆ 300 ಎಂದು ಡಿಕೆಶಿ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ನನ್ನ ವಿರುದ್ಧ ವಿನಾಕಾರಣ ಅಪಪ್ರಚಾರ ಮಾಡಲಾಗುತ್ತಿದೆ- ಡಾ. ಧನಂಜಯ ಸರ್ಜಿ

ಟಿಕೆಟ್ ಆಕಾಂಕ್ಷಿಗಳೆಲ್ಲರೂ ಬ್ಲಾಕ್, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪಕ್ಷಕ್ಕೆ ದುಡಿದಿದ್ದಾರೆ. ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿ ಎಲ್ಲರಿಗೂ ಅವಕಾಶ ನೀಡಬೇಕು ಎಂಬ ಬೇಡಿಕೆ ಯಿಂದೆ. ಕೆಲ ಸ್ಥಾನಗಳಲ್ಲಿ ಹಾಲಿ ಸದಸ್ಯರಿದ್ದಾರೆ. ಹೀಗಾಗಿ ಈ ಬಾರಿ ಟಿಕೆಟ್ ಹಂಚಿಕೆಯಲ್ಲಿ ಕಷ್ಟಕರ ಪರಿಸ್ಥಿತಿ ಎದುರಾಗುವಂತಾಗಿದೆ. ಹೈಕಮಾಂಡ್ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ನೋಡಬೇಕು ಎಂದು ಹೇಳಿದರು.

ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ: 

ಟಿಕೆಟ್ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳೇ ಎಲ್ಲ ತೀರ್ಮಾನ ತೆಗೆದುಕೊಳ್ಳಬಾರದು ಎಂದು ಡಾ.ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಖಂಡಿತ, ಪರಮೇಶ್ವರ್ ಅಭಿಪ್ರಾಯವನ್ನೂ ತೆಗೆದುಕೊಳ್ಳಲಾಗುವುದು. ಯಾವುದನ್ನೂ ನಾವೇ ತೀರ್ಮಾನಿಸುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಹಲವು ನಾಯಕರು ಟಿಕೆಟ್ ಕೇಳುತ್ತಿದ್ದಾರೆ. ಪ್ರಾಥಮಿಕವಾಗಿ ಒಂದಷ್ಟು ಹೆಸರನ್ನು ನಾವು ಸೂಚಿಸಿದ್ದೇವೆ. ಜೊತೆಗೆ ಸಚಿವರು, ಎಐಸಿಸಿ ಕಾರ್ಯದರ್ಶಿಗಳೂ ತಮ್ಮ ಆಯ್ಕೆಗಳನ್ನು ಶಿಫಾ ರಸು ಮಾಡಿದ್ದಾರೆ. ವರಿಷ್ಠರ ಜತೆಗೆ ಒಂದು ಸುತ್ತಿನ ಸಭೆ ಆಗಿದೆ. ಎಐಸಿಸಿ ಅಧ್ಯಕ್ಷರು, ಬೇರೆ ನಾಯಕರ ಜತೆ ಮಾತುಕತೆ ನಡೆಸಬೇಕಿದೆ. ಪಕ್ಷ ಏನು ಹೇಳುತ್ತವೆ ಅದರಂತೆ ನಾವು ಕೇಳಬೇಕು. ಎಐಸಿಸಿ ಕಾರ್ಯದರ್ಶಿಗಳ ಜತೆಗೂ ಪಟ್ಟಿ ತೆಗೆದುಕೊಳ್ಳಲಿದ್ದಾರೆ.ಯಾರಾರು ಪಕ್ಷದಪರಕೆಲಸಮಾಡಿದ್ದಾರೆ. ತ್ಯಾಗ ಮಾಡಿದ್ದಾರೆ. ಚುನಾವಣೆಯಲ್ಲಿ ಪಕ್ಷದ ಪರ ಅವರ ಸಾಧನೆ ಏನು? ಹಿನ್ನೆಲೆ ಏನು? ಎಂಬು ದನ್ನು ನೋಡಿಕೊಂಡು ಹೈಕಮಾಂಡ್‌ ಪಟ್ಟಿ ನೀಡಲಾಗುತ್ತದೆ. ನಂತರ ಯುವಕರು, ಹಿರಿಯ ರು ಸೇರಿದ ಸಮತೋಲನದ ಪಟ್ಟಿಯನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ ಎಂದರು

ಇಂದು ಕಾಂಗ್ರೆಸ್ ಪಟ್ಟಿ ಅಂತಿಮ?

ನವದೆಹಲಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಮಂಗಳವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವೇಣುಗೋಪಾಲ್ ಜೊತೆ ಮಾತುಕತೆ ನಡೆಸಿದರು. ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಸಭೆ ನಡೆಸಲಿದ್ದು, ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಹಾಗೂಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಆಗಮಿಸಿದರು. ಬಳಿಕ, ಖಾಸಗಿ ಹೋಟೆಲ್‌ಗೆ ತೆರಳಿ ಊಟಮುಗಿಸಿ, ಡಿ.ಕೆ.ಶಿವಕುಮಾರ್ ಅವರು ಸಂಸದ ಸೋದರ ಡಿ.ಕೆ.ಸುರೇಶ್ ನಿವಾಸಕ್ಕೆ ತೆರಳಿ ಕೆಲಕಾಲ ವಿಶ್ರಾಂತಿ ಪಡೆದರು.

ನೀತಿ ಸಂಹಿತೆ ಇದ್ದರೂ ಸಭೆ: ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ಚಾಟಿ

ಬಳಿಕ, ದೆಹಲಿಯ ಸುರ್ಜೇವಾಲ ನಿವಾಸಕ್ಕೆ ಭೇಟಿ ನೀಡಿದ ಇಬ್ಬರೂ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆ ಎಂಎಲ್‌ಸಿ ಚುನಾವಣೆಯ ಬಗ್ಗೆ ಪ್ರಾಥಮಿಕ ಚರ್ಚೆ ನಡೆಸಿದರು. ಈ ವೇಳೆ, ಸುರ್ಜೇವಾಲ ಮನೆಯ ಮುಂದೆ ಆಕಾಂಕ್ಷಿಗಳ ದಂಡೇ ನೆರೆದಿತ್ತು. ಬಳಿಕ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಮತ್ತೊಂದು ಸುತ್ತಿನ ಸಭೆ ನಡೆಸಿದರು. ಈ ವೇಳೆ, ಸಚಿವ ಭೈರತಿ ಸುರೇಶ್ ಇದ್ದರು. ಬಳಿಕ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಜೊತೆ ಸಭೆ ನಡೆಸಿದರು. ಈ ಮಧ್ಯೆ, ಬುಧವಾರ ಬೆಳಗ್ಗೆ 9 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನಿವಾಸದಲ್ಲಿ ಖರ್ಗೆ ಜೊತೆ ಉಭಯ ನಾಯಕರು ಸಭೆ ನಡೆಸಲಿದ್ದು, ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆಯಿದೆ. 7 ಸ್ಥಾನಗಳಿಗಾಗಿ 32 ಮಂದಿ ಆಕಾಂಕ್ಷಿಗಳಿದ್ದಾರೆ ಎಂದು ತಿಳಿದು ಬಂದಿದೆ.

ಆಕಾಂಕ್ಷಿಗಳ ಸಂಖ್ಯೆ ನಿರೀಕ್ಷೆಗೂ ಮೀರಿದೆ

ವಿಧಾನಪರಿಷತ್‌ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ನಿರೀಕ್ಷೆಗೂ ಮೀರಿ ಹೆಚ್ಚಾಗಿದೆ. 300ಕ್ಕೂ ಹೆಚ್ಚಿನ ಜನ ಆಕಾಂಕ್ಷಿಗಳಿದ್ದಾರೆ. ಟಿಕೆಟ್ ನೀಡುವ ಮಾನದಂಡ ಏನಾಗಿರಬೇಕು? ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ.

ವಿಧಾನಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಮಂಗಳವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ವೇಣು ಗೋಪಾಲ್ ಜತೆ ಮಾತುಕತೆ ನಡೆಸಿದರು. ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾ ರ್ಜುನ ಖರ್ಗೆ ಜೊತೆ ಸಭೆ ನಡೆಸಲಿದ್ದು, ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿ ಸುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ / ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios