ಕಾಂಗ್ರೆಸ್‌ ಗ್ಯಾರಂಟಿ- 4 'ಯುವನಿಧಿ' ಘೋಷಣೆ: ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ಭತ್ಯೆ

ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲ ನಿರುದ್ಯೋಗಿಗಳಿಗೆ 3 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ರಾಹುಲ್‌ಗಾಂಧಿ ಘೋಷಣೆ ಮಾಡಿದರು.

3000 RS Allowance for unemployed youth Congress 4th Guarantee Youthfund announcement sat

ಬೆಳಗಾವಿ (ಮಾ.20):  ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲ ನಿರುದ್ಯೋಗಿಗಳಿಗೆ 3 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಕಾಂಗ್ರೆಸ್‌ 4ನೇ ಗ್ಯಾರಂಟಿಯನ್ನು ರಾಹುಲ್‌ಗಾಂಧಿ ಘೋಷಣೆ ಮಾಡಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಯುವಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್‌ 4ನೇ ಗ್ಯಾರಂಟಿ ಕಾರ್ಡ್‌ ಹಿಡಿದುಕೊಂಡು ಪ್ರದರ್ಶನ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ 4ನೇ ಗ್ಯಾರಂಟಿ 'ಯುವನಿಧಿ' ಕಾರ್ಯಕ್ರಮ ಘೋಷಣೆ ಮಾಡಲಾಯಿತು. ನಿರುದ್ಯೋಗ ಯುವಕ, ಯುವತಿಯರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುವುದು. ಡಿಪ್ಲೋಮಾ ಆದವರಿಗೆ 1500 ರೂ., ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ಕೊಡಲಾಗುವುದು. ಕಾಂಗ್ರೆಸ್ ಪಕ್ಷದಿಂದ ನಾಲ್ಕನೇ ಗ್ಯಾರಂಟಿ ಘೋಷಣೆ ಮೂಲಕ ಯುವಕರನ್ನು ಸೆಳೆಯಲಾಗಿದೆ. ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರಿಂದ ನಾಲ್ಕನೇ ಗ್ಯಾರಂಟಿ ಅನಾವರಣ ಮಾಡಿದರು.

ರಾಜ್ಯ ರಾಜಕಾರಣಕ್ಕೆ ರಮ್ಯಾ ರೀ ಎಂಟ್ರಿ: ಎರಡು ಕ್ಷೇತ್ರದಲ್ಲಿ ಸ್ಪರ್ಧೆ ನಿರೀಕ್ಷಿತ

ಹಿಂದಿನ ಮೂರು ಗ್ಯಾರಂಟಿಗಳು: ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ ಮೊದಲನೇ ಗ್ಯಾರಂಟಿ ಆಗಿ ಗೃಹ ಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವುದು. 2ನೇ ಗ್ಯಾರಂಟಿಯಾಗಿ ಎಲ್ಲ ಮಹಿಳೆಯರಿಗೆ ಗೃಹಲಕ್ಷ್ಮೀ ಕಾರ್ಯಕ್ರಮದಡಿ 2 ಸಾವಿರ ರೂ. ಮಾಸಿಕ ಸಹಾಯಧನ ನೀಡುವುದು. 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್‌ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನಿಡಲಾಗುತ್ತದೆ. ಈಗ ಕಾಂಗ್ರೆಸ್‌ 4ನೇ ಗ್ಯಾರಂಟಿಯಾಗಿ ನಿರುದ್ಯೋಗಿ ಯುವಜನರಿಗೆ 3 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡುವುದಾಗಿ ಘೋಷಣೆ ಮಾಡಿದೆ.

ಎಲ್ಲ ವರ್ಗದವರ ರಕ್ಷಣೆಯೇ ಕಾಂಗ್ರೆಸ್‌ ಗುರಿ: ಬೆಳಗಾವಿಯ ಯುವಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಮಹಾತ್ಮಗಾಂಧಿ ಕಾಂಗ್ರೆಸ್ ಅಧ್ಯಕ್ಷರಾದ ಪುಣ್ಯ ಭೂಮಿಯಿಂದ ಸಮಾವೇಶ ಆರಂಭಿಸಲಾಗಿದೆ. ಕಾಂಗ್ರೆಸ್ ಶಕ್ತಿ, ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ -ಈ ದೇಶದ ಇತಿಹಾಸವಾಗಿದೆ. ಎಲ್ಲ ವರ್ಗದ ಜನರ ರಕ್ಷಣೆ ಮಾಡಬೇಕಿರೋದು ನಮ್ಮ ನಿಮ್ಮೆಲ್ಲರ ಕರ್ತವ್ಯ. ಯುವಕರಿಗೆ ರಕ್ಷಣೆ ನೀಡಲು ಇಂದು ರಾಹುಲ್ ಗಾಂಧಿ ಇಲ್ಲಿ ಬಂದಿದ್ದಾರೆ ಎಂದರು. 

ನಾನು ಸಾವರ್ಕರ್‌ ಅಲ್ಲ ರಾಹುಲ್‌: ಪೊಲೀಸ್‌ ನೋಟಿಸ್‌ಗೆ ರಾಗಾ ಗರಂ

ಭ್ರಷ್ಟಾಚಾರ ಇಲ್ಲದೆ ಉದ್ಯೋಗ ಸೃಷ್ಟಿ: ಯುವಕರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಕಾಂಗ್ರಸ್ ಸಂಕಲ್ಪ ಮಾಡಿ, ಉದ್ಯೋಗ ಸೃಷ್ಟಿ ಮಾಡಿ ಯುವಕರಿಗೆ ಉದ್ಯೋಗ ಕಲ್ಪಿಸುವ ಕಾನೂನು ಖಾಸಗಿ ಎಂಪ್ಲಾಯ್ಮೆಂಟ್ ಎಕ್ಸ್ಚೇಂಜ್ ಕಾರ್ಯಕ್ರಮ ರೂಪಿಸುತ್ತಿದ್ದೇವೆ. ಭ್ರಷ್ಟಾಚಾರ ಇಲ್ಲದೇ ಉದ್ಯೋಗ ಸೃಷ್ಟಿ ಮಾಡುವ ಕಾ‌ನೂನು ತರುತ್ತೇವೆ. ಇದೇ ಭೂಮಿಯಿಂದ 200 ಯೂನಿಟ್ ಉಚಿತ ವಿದ್ಯುತ್ ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಮನೆ ಮನೆಗೆ ಈ ವಿಚಾರ ತಲುಪಿಸುವುದು ನಿಮ್ಮ ಕರ್ತವ್ಯವಾಗಿದೆ. 130ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಡಿಕೆ. ಶಿವಕುಮಾರ್‌ ಮನವಿ ಮಾಡಿದರು.

Latest Videos
Follow Us:
Download App:
  • android
  • ios