Asianet Suvarna News Asianet Suvarna News

'ಡ್ರಗ್ಸ್​ ದಂಧೆಯಲ್ಲಿ ರಾಜಕಾರಣಿಗಳು, ಸಾಕ್ಷಿ ಸಮೇತ 32 ಜನರ ಲಿಸ್ಟ್ ಗೃಹ ಸಚಿವರ ಕೈ ಸೇರಲಿದೆ '

ಡ್ರಗ್ಸ್ ದಂಧೆಯಲ್ಲಿ ಶಾಸಕ ಜಮೀರ್ ಅಹ್ಮದ್ ಪಾತ್ರ ಶೇ.100ರಷ್ಟು ಇದೆ. ರಾಜಕಾರಣದಲ್ಲಿ ವ್ಯವಹಾರ ಇಟ್ಟುಕೊಂಡಿರುವುದರಿಂದ ಅವರ​ನ್ನು ಅರೆಸ್ಟ್ ಮಾಡ್ತಿಲ್ಲ ಎಂದು ಗಂಭೀರ ಆರೋಪ ಮಾಡಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್, ಇದೀಗ ಮತ್ತೊಂದು ಬಾಂಬ್​ ಸಿಡಿಸಿದ್ದಾರೆ.

32 politicians involved In Drugs Mafia Says pramodh muthalik
Author
Bengaluru, First Published Sep 12, 2020, 2:30 PM IST

ಮಂಡ್ಯ, (ಸೆ.12): ಡ್ರಗ್ಸ್​ ದಂಧೆಯಲ್ಲಿ ಬರೋಬ್ಬರಿ 32 ರಾಜಕಾರಣಿಗಳಿದ್ದು, ಈ ಬಗ್ಗೆ ಹೋಂ ಮಿನಿಸ್ಟರ್‌ಗೆ ಆಧಾರ ಸಹಿತ ಲಿಸ್ಟ್​ ಕೊಡ್ತೀನಿ ಎಂದು  ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್ ಹೊಸ ಬಾಂಬ್ ಸಿಡಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ.

"

ಶನಿವಾರ ಮಂಡ್ಯದಲ್ಲಿ ಮಾತನಾಡಿದ ಮುತಾಲಿಕ್, ರಾಜಕಾರಣಿಗಳದ್ದೇ ಪಬ್, ಕ್ಲಬ್, ಬಾರ್​ಗಳಿವೆ. ಅವರಿಗೆ ಸಾವಿರಾರು ಕೋಟಿ ರೂ. ವ್ಯಾಪಾರ ಆಗುತ್ತಿರುವುದೇ ಡ್ರಗ್ಸ್‌ನಿಂದ. ವೈನ್, ಡ್ರಗ್ಸ್​ ಲಾಬಿ‌ ರಾಜಕೀಯವನ್ನು ಕೈಯಲ್ಲಿ ಹಿಡಿದುಕೊಂಡಿದೆ. ಈ ಮಾಫಿಯಾದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ನವರೂ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕಲಬುರಗಿ ಗಾಂಜಾಕೋರ ಬಿಜೆಪಿ ಕಾರ್ಯಕರ್ತ: ಕಾಂಗ್ರೆಸ್‌

8 ಮತ್ತು 9ನೇ ತರಗತಿ ಮಕ್ಕಳವರೆಗೆ ಡ್ರಗ್ಸ್ ಪ್ರವೇಶ ಮಾಡಿದೆ. ಮೈಸೂರಿನ ಶಾಲೆಯಲ್ಲಿ ಒಬ್ಬ ಹುಡುಗ ಪೆನ್ ಮೂಸಿ ನೋಡುತ್ತಿದ್ದ. ಅದರೊಳಗೆ ಡ್ರಗ್ಸ್ ಇತ್ತು. ತನಿಖೆ ಮಾಡಿದ್ರೆ 10 ಜನ ವಿದ್ಯಾರ್ಥಿ ಆ ಜಾಲದಲ್ಲಿ ಇರುವುದು ಗೊತ್ತಾಯಿತು ಎಂದು ಹೇಳಿದರು.

"

ಸದ್ಯ ಸಿಸಿಬಿ ಅಧಿಕಾರಿಗಳು ಸ್ಯಾಂಡಲ್‌ವುಡ್‌ನ್ನು ಜಾಲಾಡುತ್ತಿದ್ದಾರೆ. ಆದ್ರೆ, ಈ ಪ್ರಕರಣದಲ್ಲಿ ರಾಜಕೀಯ ನಾಯಕ ಮೇಲೆ ಆರೋಪಗಳು ಕೇಳಿಬರುತ್ತಿವೆಯಾದರೂ ಇದರುವರೆಗೂ ಒಬ್ಬರಿಗೂ ನೋಟಿಸ್ ನೀಡಿಲ್ಲ. ಇದು ಮುಂದಿನ ದಿನಗಳಲ್ಲಿ ಯಾವ ರೀತಿಯಾಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

Follow Us:
Download App:
  • android
  • ios