ಮುಡಾದಿಂದ ಎಚ್.ಡಿ.ಕುಮಾರಸ್ವಾಮಿಗೆ 32,800 ಚದರಡಿ ಬದಲಿ ನಿವೇಶನ: ಕಾಂಗ್ರೆಸ್‌ ಆರೋಪ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೇ ಸ್ವತಃ ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಬರೋಬ್ಬರಿ 32,800 ಚದರಡಿ ನಿವೇಶನ ನೀಡಲು ಮುಡಾ ನಿರ್ಣಯ ತೆಗೆದುಕೊಂಡಿದೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ.

32800 sq d replacement plot from Muda to HD Kumaraswamy Says Congress gvd

ಬೆಂಗಳೂರು (ಜು.27): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೇ ಸ್ವತಃ ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಬರೋಬ್ಬರಿ 32,800 ಚದರಡಿ ನಿವೇಶನ ನೀಡಲು ಮುಡಾ ನಿರ್ಣಯ ತೆಗೆದುಕೊಂಡಿದೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. 1985ರಲ್ಲಿ ಮೈಸೂರು ನಗರದ ಕಿಲ್ಲೆ ಮೊಹಲ್ಲ ಕೈಗಾರಿಕಾ ಉಪನಗರದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಅವರು 17-ಬಿ1 ನಿವೇಶನ ಸಂಖ್ಯೆಯ 21,000 (75*280) ಚದರಡಿ ಕೈಗಾರಿಕಾ ನಿವೇಶನ ಪಡೆದಿದ್ದರು.

ಈ ಸಂಬಂಧ ಬರೋಬ್ಬರಿ 32 ವರ್ಷಗಳ ಬಳಿಕ 2017ರ ಫೆಬ್ರುವರಿಯಲ್ಲಿ ಮೂಡಗೆ ಮನವಿ ಸಲ್ಲಿಸಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ತಮಗೆ ಹಂಚಿಕೆಯಾಗಿರುವ ನಿವೇಶನವು 21,000 ಚದರಡಿಗೆ ಬದಲಿಗೆ 13,064 (46/284) ಚದರಡಿ ಮಾತ್ರ ಇದೆ. ಹೀಗಾಗಿ ಬದಲಿ ನಿವೇಶನ ಮಂಜೂರು ಮಾಡಿ ಎಂದು ಕೋರಿದ್ದು, ಮುಡಾ ವತಿಯಿಂದ ಬದಲಿ ನಿವೇಶನವಾಗಿ 2023ರ ಜ.1 ನಡೆದ ಪ್ರಾಧಿಕಾರದ ಸಭೆಯಲ್ಲಿ ಇಂಡಸ್ಟ್ರಿಯಲ್‌ ಸಬರ್ಬ್‌ 3ನೇ ಹಂತದ ಬಡಾವಣೆಯ 23-ಇ ನಿವೇಶನ ಸಂಖ್ಯೆಯ 32,800 (82*400) ಚದರಡಿ ವಿಸ್ತೀರ್ಣದ ನಿವೇಶನ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಿಸುವಲ್ಲಿ ಕುಮಾರಸ್ವಾಮಿ ವಿಫಲ: ಬಿಹಾರ ಮತ್ತು ಆಂಧ್ರಪ್ರದೇಶ ರಾಜ್ಯದ ಎನ್ ಡಿಎ ಮೈತ್ರಿಕೂಟದ ಪ್ರಾದೇಶಿಕ ಪಕ್ಷಗಳು ತಮ್ಮ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಿಸುವಲ್ಲಿ ಸಫಲರಾಗಿದ್ದಾರೆ, ಆದರೆ, ನಮ್ಮ ರಾಜ್ಯದ ಜೆಡಿಎಸ್ ಪ್ರಾದೇಶಿಕ ಪಕ್ಷದ ಎಚ್.ಡಿ. ಕುಮಾರಸ್ವಾಮಿಯವರು ವಿಫಲರಾಗಿದ್ದಾರೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್ .ಸಿ.ಬಾಲಕೃಷ್ಣ ಟೀಕಿಸಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ಕುರಿತು ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬಾಲಕೃಷ್ಣರವರು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ನಮ್ಮ ರಾಜ್ಯಕ್ಕೆ ನಿರಾಸೆ ಮೂಡಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರಲ್ಲದೇ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಟೀಕಿಸಿ ಕಾಲೆಳೆದಿದ್ದಾರೆ.

ಮುಡಾ ಅಕ್ರಮ: ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಕೋರಿ ರಾಜ್ಯಪಾಲರಿಗೆ ಅರ್ಜಿ

ಅತಿ ಹೆಚ್ಚು ಸಂಸದರನ್ನು ರಾಜ್ಯದಿಂದ ಎನ್ ಡಿಎಗೆ ಜನತೆ ಆಯ್ಕೆ ಮಾಡಿದ್ದರು, ಆದರ ಜೊತೆಗೆ ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿ, ನಮ್ಮ ರಾಜ್ಯಕ್ಕೆ ಬಂಪರ್ ಕೊಡುಗೆ ಕೊಡಿಸಲು ಪ್ರಯತ್ನ ಮಾಡುತ್ತಾರೆ ಎಂದು ನಿರೀಕ್ಷೆ ಇತ್ತು. ಅದರಲ್ಲೂ ಬೆಂಗಳೂರು ಮಹಾನಗರ ಅಭಿವೃದ್ಧಿಗೆ ವಿಶೇಷ ಗಮನ ನೀಡುತ್ತಾರೆ, ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ‘ಮೇಕೆದಾಟು’ ಜಾರಿಗೆ ಅನುಮತಿ ಸಿಗುತ್ತದೆ ಎಂದು ಆಸೆ ಇತ್ತು. ಈ ಎಲ್ಲಾ ವಿಚಾರದಲ್ಲೂ ನಿರಾಸೆ ಮೂಡಿಸಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ನೋವಾಗಿದೆ ಎಂದಿದ್ದಾರೆ.

Latest Videos
Follow Us:
Download App:
  • android
  • ios