ಬೆಂಗಳೂರು, (ಜ.21): ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳು ಸೇರಿ ನಾಲ್ಕು ವಿಧಾನಪರಿಷತ್ ಸ್ಥಾನಗಳ ಅವಧಿ ಇದೇ ಜೂನ್ 30ಕ್ಕೆ ಮುಗಿಯಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು (ಮಂಗಳವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಜೀವ್ ಕುಮಾರ್ ಅವರು, ಅವಧಿ ಮುಕ್ತಾಯಗೊಳ್ಳುವ ಈ 4 ಕ್ಷೇತ್ರಗಳಿಗೆ ಸದ್ಯದಲ್ಲೇ ಚುನಾವಣಾ ದಿನಾಂಕ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದರು. 

ಸವದಿ, ಶಂಕರ್‌ಗೆ ಎಂಎಲ್‌ಸಿ ಆತಂಕ! ಒಂದೇ ಸ್ಥಾನಕ್ಕೆ ಇಬ್ಬರ ಕಣ್ಣು

ಮತದಾರರ ನೋಂದಣಿಗೆ ಇನ್ನೂ ಸಾಕಷ್ಟು ಕಾಲಾವಕಾಶ ಇದ್ದು, ಮತದಾರರಾಗದವರು ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.

ಸದ್ಯ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಒಟ್ಟು 68,049 ಮತದಾರರಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 10,2287 ಮತದಾರರು ನೋಂದಣಿ‌ ಮಾಡಿಕೊಂಡಿದ್ದಾರೆ.  ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 24,941 ಮತದಾರರು ನೋಂದಣಿಯಾಗಿದ್ದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 17,610 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.