Asianet Suvarna News Asianet Suvarna News

16 ದಿನದಲ್ಲಿ 40 ಲಕ್ಷ ಹೊಸ ಸದಸ್ಯರು ಬಿಜೆಪಿಗೆ ಸೇರ್ಪಡೆ: ಸಚಿವ ಅಶ್ವತ್ಥನಾರಾಯಣ

ಕಳೆದ ಜ.21ರಿಂದ ಫೆ.5ರವರೆಗೆ ನಡೆದ ವಿಜಯ ಸಂಕಲ್ಪ ಅಭಿಯಾನವು ಪೂರ್ಣಗೊಂಡಿದೆ. ಈ ಅಭಿಯಾನದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮನೆ-ಮನೆಗೆ ತಿಳಿಸುವುದು, ಗೋಡೆ ಬರಹ ಪ್ರಕಟಿಸುವುದು, ಕರಪತ್ರ ಹಂಚುವುದರ ಜತೆಗೆ ಪಕ್ಷದ ಸದಸ್ಯತ್ವ ನೋಂದಣಿ ನಡೆದಿದೆ. 2 ಕೋಟಿ ಮನೆಗಳಿಗೆ ಭೇಟಿ, 1 ಕೋಟಿ ಸದಸ್ಯತ್ವ ನೋಂದಣಿ ಗುರಿ ಹೊಂದಲಾಗಿತ್ತು

40 Lakh New Members Joined BJP in 16 days in Karnataka says Minister CN Ashwath Narayan grg
Author
First Published Feb 8, 2023, 6:22 AM IST

ಬೆಂಗಳೂರು(ಫೆ.08):  ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಭರ್ಜರಿ ಪ್ರತಿಕ್ರಿಯೆ ಲಭಿಸಿದ್ದು, 40 ಲಕ್ಷ (40,50,351) ಸದಸ್ಯತ್ವ ನೋಂದಣಿ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವ ಹಾಗೂ ಅಭಿಯಾನದ ಸಂಚಾಲಕ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಈ ಮಾಹಿತಿ ಬಹಿರಂಗಪಡಿಸಿದ್ದಾರೆ.

ಮಂಗಳವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಜ.21ರಿಂದ ಫೆ.5ರವರೆಗೆ ನಡೆದ ವಿಜಯ ಸಂಕಲ್ಪ ಅಭಿಯಾನವು ಪೂರ್ಣಗೊಂಡಿದೆ. ಈ ಅಭಿಯಾನದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮನೆ-ಮನೆಗೆ ತಿಳಿಸುವುದು, ಗೋಡೆ ಬರಹ ಪ್ರಕಟಿಸುವುದು, ಕರಪತ್ರ ಹಂಚುವುದರ ಜತೆಗೆ ಪಕ್ಷದ ಸದಸ್ಯತ್ವ ನೋಂದಣಿ ನಡೆದಿದೆ. 2 ಕೋಟಿ ಮನೆಗಳಿಗೆ ಭೇಟಿ, 1 ಕೋಟಿ ಸದಸ್ಯತ್ವ ನೋಂದಣಿ ಗುರಿ ಹೊಂದಲಾಗಿತ್ತು’ ಎಂದರು.

ಕಾಂಗ್ರೆಸ್‌ ಬಸ್‌ಯಾತ್ರೆಗೆ 52 ಸ್ಥಾನ ಮಾತ್ರ: ಸಚಿವ ಅಶ್ವತ್ಥ ನಾರಾಯಣ್‌

ರಾಜ್ಯದ 58,186 ಬೂತ್‌ ಪೈಕಿ 39,572 ಬೂತ್‌ಗಳನ್ನು ಸಂಪರ್ಕಿಸಲಾಗಿದೆ. 22,55,562 (22 ಲಕ್ಷ) ಮನೆಗಳ ಸಂಪರ್ಕ ಮಾಡಿದ್ದು, 13,35,254 (13 ಲಕ್ಷ) ಮನೆಗಳು ಹಾಗೂ 4,91,067 (4.91 ಲಕ್ಷ) ವಾಹನಗಳ ಮೇಲೆ ಸ್ಟಿಕ್ಕರ್‌ ಅಂಟಿಸಲಾಗಿದೆ. 1.94 ಲಕ್ಷ ಗೋಡೆ ಬರಹ ಹಾಗೂ 32,489 ಡಿಜಿಟಲ್‌ ವಾಲ್‌ ಪೇಂಟಿಂಗ್‌ ಮಾಡಲಾಗಿದೆ. 31,260 ಬೂತ್‌ಗಳಲ್ಲಿ 5 ಲಕ್ಷ ಜನರು ಮನ್‌ ಕಿ ಬಾತ್‌ ಆಲಿಸಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಗೆಲ್ಲಲು ಪೂರಕ:

‘ಈ ಅಭಿಯಾನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕನಿಷ್ಠ 150 ಶಾಸಕರು ಗೆಲ್ಲಲು ಪೂರಕವಾಗಿದೆ. ಮಂಗಳೂರು- ಉಡುಪಿಯಲ್ಲಿ ಶೇ.100ರಷ್ಟು ಮನೆಗಳ ಸಂಪರ್ಕ ಆಗಿದೆ. ದ್ವೀಪವಾಸಿಗಳನ್ನೂ ಸಂಪರ್ಕಿಸಲಾಗಿದೆ. ಕೊಡಗು, ಶಿವಮೊಗ್ಗ, ಮೈಸೂರಿನಲ್ಲಿ ಶೇ.100ರಷ್ಟು ಮನೆ ಸಂಪರ್ಕ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾಡುಗಳಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರನ್ನೂ ಸಂಪರ್ಕಿಸಲಾಗಿದೆ. ಈ ಅಭಿಯಾನದ ಮುಖಾಂತರ ಜನರ ಸಹಕಾರ, ಬೆಂಬಲ ಕೋರಿದ್ದೇವೆ’ ಎಂದು ಡಾ. ಅಶ್ವತ್ಥ ಹೇಳಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಉಪಾಧ್ಯಕ್ಷ ನಂದೀಶ್‌, ರಾಜ್ಯ ಕಾರ್ಯದರ್ಶಿ ಜಗದೀಶ್‌ ಹಿರೇಮನಿ ಉಪಸ್ಥಿತರಿದ್ದರು.

Follow Us:
Download App:
  • android
  • ios