ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಟಿಕೆಟ್ ಅರ್ಜಿಗೆ ಕಡೇ ಕ್ಷಣದ ಕಸರತ್ತು
ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸುವುದಕ್ಕೆ ಸೋಮವಾರ ಆಕಾಂಕ್ಷಿಗಳು ಮುಗಿಬಿದ್ದರು. ಅರ್ಜಿ ಸಲ್ಲಿಸಲು ಮಂಗಳವಾರ (ನ.15) ಕಡೆ ದಿನ ಎಂಬ ಕಾರಣಕ್ಕೆ ಈ ಬೆಳವಣಿಗೆ ನಡೆದಿದೆ.
ಬೆಂಗಳೂರು (ನ.15): ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸುವುದಕ್ಕೆ ಸೋಮವಾರ ಆಕಾಂಕ್ಷಿಗಳು ಮುಗಿಬಿದ್ದರು. ಅರ್ಜಿ ಸಲ್ಲಿಸಲು ಮಂಗಳವಾರ (ನ.15) ಕಡೆ ದಿನ ಎಂಬ ಕಾರಣಕ್ಕೆ ಈ ಬೆಳವಣಿಗೆ ನಡೆದಿದ್ದು, ಆಕಾಂಕ್ಷಿಗಳಿಂದ ಒತ್ತಡವಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಮತ್ತೆ 10 ದಿನ ಮುಂದೂಡುವ ಸಾಧ್ಯತೆಯಿದೆ. ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಉಂಟಾಗಿದ್ದು, ಈಗಾಗಲೇ 1,050 ಮಂದಿ ಅರ್ಜಿ ಪಡೆದಿದ್ದಾರೆ. ಈ ಪೈಕಿ ಸೋಮವಾರದ ವೇಳೆಗೆ 450 ಅರ್ಜಿ ಮಾತ್ರ ಸಲ್ಲಿಕೆಯಾಗಿರುವುದರಿಂದ ಅಂತಿಮ ಗಡುವು ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸೋಮವಾರ ಮಾಜಿ ಸಚಿವ ಕೆ.ಜೆ.ಜಾರ್ಜ್, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಸೇರಿದಂತೆ ಹಲವರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದರು. ಬಸನಗೌಡ ಬಾದರ್ಲಿ ಪರವಾಗಿ ಅವರ ಅಭಿಮಾನಿಗಳು ಅರ್ಜಿ ಸಲ್ಲಿಸಿದರು. ಇನ್ನು ಹಿಂದಿನ ದಿನವೇ ನಿರ್ಮಾಪಕ ಉಮಾಪತಿ ಗೌಡ ಬೊಮ್ಮನಹಳ್ಳಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಧ್ರುವನಾರಾಯಣ, ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಹಿರಿಯ ನಾಯಕರು ಅರ್ಜಿ ಈಗಾಗಲೇ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್ ಸಹ ಅರ್ಜಿ ಪಡೆದಿದ್ದು, ಇನ್ನೂ ಸಲ್ಲಿಕೆ ಮಾಡಿಲ್ಲ. ಸಿದ್ದರಾಮಯ್ಯ ಅರ್ಜಿಯನ್ನೇ ಪಡೆದಿಲ್ಲ ಎಂದು ಹೇಳಲಾಗಿದೆ.
ನಾನು ಸಿಎಂ ಆಗ್ಬೇಕಾದ್ರೆ ಕಾಂಗ್ರೆಸ್‌ಗೆ ಮತ ಹಾಕಿ: ಸಿದ್ದರಾಮಯ್ಯ
ಹೀಗಾಗಿ ಅರ್ಜಿ ಸಲ್ಲಿಕೆಗೆ ನೀಡಿರುವ ಗಡುವು ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ ಹಾಗೂ ಎಚ್.ಸಿ.ಮಹದೇವಪ್ಪ ಇಬ್ಬರೂ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಶಿವಮೊಗ್ಗ ಕ್ಷೇತ್ರಕ್ಕೆ ಎಂಟು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಬಳ್ಳಾರಿಯಿಂದ ಸ್ಪರ್ಧಿಸಲು 10, ದೇವನಹಳ್ಳಿ 10, ಮಂಡ್ಯ ಕ್ಷೇತ್ರದ ಹೆಸರಿನಲ್ಲಿ 10 ಮಂದಿ ಅರ್ಜಿಗಳನ್ನು ಪಡೆದಿದ್ದಾರೆ.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸಿದ ಡಾ.ಬಿ.ಯೋಗೇಶ್‌ಬಾಬು: 2018ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸೋತಿದ್ದ ಡಾ.ಬಿ.ಯೋಗೇಶ್ ಬಾಬು ಮತ್ತೊಮ್ಮೆ 2023ರ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರಿನಿಂದ ಸ್ಪರ್ಧಿಸಲು ಬೆಂಗಳೂರಿನ ಕೆಪಿಸಿಸಿ ಕಚೇರಿ ಕಾರ್ಯದರ್ಶಿ ನಾರಾಯಣ್‌ರವರಿಗೆ ಅರ್ಜಿ ಸಲ್ಲಿಸಿದರು. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿ, 2023ರ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಚುನಾವಣೆಯಾಗಿದ್ದು, ರಾಜ್ಯದೆಲ್ಲೆಡೆ ಪಕ್ಷದ ಪರವಾಗಿ ಮತದಾರರ ಒಲವಿದೆ.
Viveka Scheme Politics: ವಿವೇಕ ಯೋಜನೆ ಅವಿವೇಕದ ಪರಮಾವಧಿ: ಕಾಂಗ್ರೆಸ್
ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಪಕ್ಷದ ಸಂಘಟನೆಗೆ ಹೆಚ್ಚು ಶಕ್ತಿ ತುಂಬಿದೆ ಎಂದರು. ಮೊಳಕಾಲ್ಮೂರು ಕ್ಷೇತ್ರದಲ್ಲಿ ಮತದಾರ ಶಾಸಕ ಬಿ.ಶ್ರೀರಾಮುಲುರವರ ಆಡಳಿತಕ್ಕೆ ಬೇಸತ್ತಿದ್ದಾರೆ. ಅಧಿಕಾರದ ಅವಧಿಯಲ್ಲಿ ಸಚಿವರಾಗಿಯೂ ಅವರು ಮತದಾರರ ಬೇಡಿಕೆಗಳಿಗೆ ಸ್ಪಂದಿಸಲಿಲ್ಲ. ಒಮ್ಮೆಯಾದರೂ ಕ್ಷೇತ್ರ ಪ್ರವಾಸ ಮಾಡಿಲ್ಲ. ಜನರ ಸಂಕಷ್ಟಗಳಿಗೆ ನೆರವಾಗಿಲ್ಲ, ವರ್ಷದಲ್ಲಿ ಎರಡ್ಮೂರು ಸಲ ಮಾತ್ರ ಉದ್ಘಾಟನೆ ನೆಪದಲ್ಲಿ ಜನರಿಗೆ ಮುಖ ತೋರಿಸಿ ಹೋಗುವ ಶ್ರೀರಾಮುಲು ಮತದಾರರ ನಂಬಿಕೆಯನ್ನು ಹುಸಿಗೊಳಿಸಿದ್ದಾರೆ ಎಂದಿದ್ದಾರೆ.