Asianet Suvarna News Asianet Suvarna News

ಲೋಕಸಭಾ ಚುನಾವಣೆ ಬೆನ್ನಲ್ಲೇ ಕೆಪಿಸಿಸಿಗೆ 5 ಹೊಸ ಕಾರ್ಯಾಧ್ಯಕ್ಷರ ನೇಮಕ

ನರಸಿಂಹರಾಜ ಕ್ಷೇತ್ರದ ಶಾಸಕ ತನ್ವಿರ್ ಸೇರ್ (ಮೈಸೂರು ವಿಭಾಗ), ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ (ಬೆಳಗಾವಿ), ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ (ಆಡಳಿತ ಹಾಗೂ ಬೆಂಗಳೂರು ವಿಭಾಗ), ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ (ಕರಾವಳಿ) ಹಾಗೂ ರಾಯಚೂರು ಜಿಲ್ಲಾ ಕಾಂಗ್ರೆಸ್ ಮುಖಂಡ ವಸಂತಕುಮಾರ್ (ಕಲ್ಯಾಣ ಕರ್ನಾಟಕ) ಅವರನ್ನು ನೇಮಕ ಮಾಡಿ ಆದೇಶ ಮಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ 

5 New Working Presidents appointed for KPCC grg
Author
First Published Mar 24, 2024, 6:14 AM IST

ಬೆಂಗಳೂರು(ಮಾ.24):  ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಜಾತಿ ಸಮೀಕರಣದ ಲೆಕ್ಕಾಚಾರದಲ್ಲಿ ಕೆಪಿಸಿಸಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ.

ನರಸಿಂಹರಾಜ ಕ್ಷೇತ್ರದ ಶಾಸಕ ತನ್ವಿರ್ ಸೇರ್ (ಮೈಸೂರು ವಿಭಾಗ), ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ (ಬೆಳಗಾವಿ), ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ (ಆಡಳಿತ ಹಾಗೂ ಬೆಂಗಳೂರು ವಿಭಾಗ), ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ (ಕರಾವಳಿ) ಹಾಗೂ ರಾಯಚೂರು ಜಿಲ್ಲಾ ಕಾಂಗ್ರೆಸ್ ಮುಖಂಡ ವಸಂತಕುಮಾರ್ (ಕಲ್ಯಾಣ ಕರ್ನಾಟಕ) ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಶನಿವಾರ ಆದೇಶ ಮಾಡಿದ್ದಾರೆ. 

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 22 ಸ್ಥಾನ: ಸಚಿವ ಈಶ್ವರ ಖಂಡ್ರೆ

ಈ ಹಿಂದೆ ಕಾರ್ಯಾಧ್ಯಕ್ಷರಾಗಿದ್ದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ ಅವರು ಸಚಿವ ಸಂಪುಟ ಸೇರಿದ್ದಾರೆ. ಸಲೀಂ ಅಹಮದ್ ಅವರಿಗೆ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸ್ಥಾನ ನೀಡಲಾಗಿದೆ. ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಮತ್ತೆ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಗಳಿಗೆ ಸಮುದಾಯದ ಪ್ರಾತಿನಿಧ್ಯ ನೀಡಿ ಜಿ.ಸಿ.ಚಂದ್ರಶೇಖರ್ (ಒಕ್ಕಲಿಗ), ಮಂಜುನಾಥ್ ಭಂಡಾರಿ (ಈಡಿಗ-ಹಿಂದುಳಿದ ವರ್ಗ), ವಿನಯ್ ಕುಲಕರ್ಣಿ (ಲಿಂಗಾಯತ), ತನ್ನೀರ್ ಸೇರ್ (ಅಲ್ಪಸಂಖ್ಯಾತ), ವಸಂತಕುಮಾರ್ (ದಲಿತ) ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಲೋಕಸಭಾ ಚುನಾವಣೆ: ಗೆಲ್ಲುವ ಅಭ್ಯರ್ಥಿಗಳನ್ನ ಹುಡುಕುವುದು ಪಕ್ಷಕ್ಕೆ ದೊಡ್ಡ ಸವಾಲು -ಸತೀಶ್ ಜಾರಕಿಹೊಳಿ

ಕೆಪಿಸಿಸಿ ಪ್ರಚಾರ ಸಮಿತಿಗೆ ಸೊರಕೆ ನೂತನ ಅಧ್ಯಕ್ಷ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಗೆ ನೂತನ ಅಧ್ಯಕ್ಷರನ್ನಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಪ್ರಚಾರ ಸಮಿತಿಯ ಸಹ ಅಧ್ಯಕ್ಷರನ್ನಾಗಿ ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಮತ್ತು ಉಪಾಧ್ಯಕ್ಷರನ್ನಾಗಿ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಮಾಡಿದ್ದಾರೆ. 

ಕಳೆದ ವಿಧಾನಸಭೆ ಚುನಾವಣೆ ವೇಳೆ ಲಿಂಗಾಯತ ಸಮುದಾಯದ ಎಂ.ಬಿ.ಪಾಟೀಲ್ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈಗ ಲೋಕಸಭಾ ಚುನಾವಣೆಗೆ ಆ ಸ್ಥಾನಕ್ಕೆ ಹಿಂದುಳಿದ ವರ್ಗದ ಪ್ರಾತಿನಿಧ್ಯದಡಿ ಬಿಲ್ಲವ ಸಮುದಾಯದ ವಿನಯಕುಮಾ‌ರ್ ಸೊರಕೆ ಅವರನ್ನು ನೇಮಿಸಲಾಗಿದೆ. ಜೊತೆಗೆ ದಲಿತ ಸಮುದಾಯಕ್ಕೆ ಸಹ ಅಧ್ಯಕ್ಷ ಸ್ಥಾನ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಕೋಲಾರ ಲೋಕಸಭಾ ಕ್ಷೇತ್ರದಿಂದ ಎಲ್.ಹನುಮಂತಯ್ಯ ಅವರನ್ನು ಕಣಕ್ಕಿಳಿಸಬೇಕೆಂಬ ಒತ್ತಡ ಇದೆ. ಈ ಮಧ್ಯೆ, ಹನುಮಂತಯ್ಯ ಅವರನ್ನು ಪ್ರಚಾರ ಸಮಿತಿಗೆ ನೇಮಿಸಿರುವುದು ಅವರಿಗೆ ಟಿಕೆಟ್ ಕೈತಪ್ಪಲಿದೆಯಾ ಎಂಬ ಅನುಮಾನಕ್ಕೆ ಎಡೆಮಾಡಿದೆ.

Follow Us:
Download App:
  • android
  • ios