Asianet Suvarna News Asianet Suvarna News

ಸರ್ಕಾರ ಬೀಳಿಸೋಕೆ ಶಾಸಕರಿಗೆ ಬಿಜೆಪಿಯವರಿಂದ ತಲಾ 50 ಕೋಟಿ ಆಮಿಷ: ಡಿಕೆಶಿ ಆರೋಪ

ಮೈತ್ರಿ ಸರ್ಕಾರವನ್ನು ಕೆಡವಿದ ಬಿಜೆಪಿಯವರು ಕಾಂಗ್ರೆಸ್‌ ಸರ್ಕಾರವನ್ನೂ ಬೀಳಿಸಲು ನಮ್ಮ ವಿವಿಧ ಶಾಸಕರಿಗೆ ತಲಾ 50 ಕೋಟಿ ರು. ಹಣದ ಆಮಿಷ ನೀಡಿ ಪ್ರಯತ್ನಿಸಿದ್ದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

50 crore each from BJP to lure MLAs to topple Congress Govt Says DK Shivakumar gvd
Author
First Published Mar 11, 2024, 8:23 AM IST

ಬೆಂಗಳೂರು (ಮಾ.11): ಮೈತ್ರಿ ಸರ್ಕಾರವನ್ನು ಕೆಡವಿದ ಬಿಜೆಪಿಯವರು ಕಾಂಗ್ರೆಸ್‌ ಸರ್ಕಾರವನ್ನೂ ಬೀಳಿಸಲು ನಮ್ಮ ವಿವಿಧ ಶಾಸಕರಿಗೆ ತಲಾ 50 ಕೋಟಿ ರು. ಹಣದ ಆಮಿಷ ನೀಡಿ ಪ್ರಯತ್ನಿಸಿದ್ದರು. ಆದರೆ, ಪ್ರಯೋಜನವಾಗಲಿಲ್ಲ. ಇತ್ತೀಚಿನ ರಾಜ್ಯಸಭಾ ಚುನಾವಣೆ ವೇಳೆಯೂ ಶಾಮನೂರು ಶಿವಶಂಕರಪ್ಪ ಅವರಿಗೂ ಕರೆ ಮಾಡಿ ಹಣದ ಆಮಿಷವೊಡ್ಡಿದ್ದರಂತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ. ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುಟ್ಟಣ್ಣ ಜಯಗಳಿದ ಹಿನ್ನೆಲೆಯಲ್ಲಿ ಕೆಂಗೇರಿಯ ಸೂಲಿಕೇರಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ‘ಶಿಕ್ಷಕರ ಕೃತಜ್ಞತಾ ಸಭೆ’ಯಲ್ಲಿ ಅವರು ಮಾತನಾಡಿದರು.

ಭಾಗವಹಿಸಿ ಮಾತನಾಡಿದ ಅವರು, ನಾವು ಹಾಗೂ ಸಿದ್ದರಾಮಯ್ಯ ಅವರು ಕೋಮುವಾದಿ ಪಕ್ಷ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಐದು ವರ್ಷಗಳ ಕಾಲ ಬೇಷರತ್ತಾಗಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಮಾಡಿದ್ದೆವು. ಈ ಮೈತ್ರಿ ಸರ್ಕಾರವನ್ನು ಕೆಡವಿದ ಯಡಿಯೂರಪ್ಪ, ಯೋಗೇಶ್ವರ್, ಮುನಿರತ್ನ ಅವರನ್ನೇ ಇವತ್ತು ಕುಮಾರಸ್ವಾಮಿ ಅಪ್ಪಿಕೊಂಡು ಅವರ ವಕ್ತಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಬಡವರ ವಿರೋಧಿ, ಹಸಿದವರ ಅನ್ನ ಕಸಿದ ಪಕ್ಷ: ಸಿಎಂ ಸಿದ್ದರಾಮಯ್ಯ

ನಮ್ಮ ಶಾಸಕರಿಗೆ ತಲಾ 50 ಕೋಟಿ ಕೊಟ್ಟು ಸರ್ಕಾರ ಬೀಳಿಸಲು ಬಿಲ್ಲು ಬಾಣ ತೆಗೆದುಕೊಂಡಿದ್ದರು. ರಾಜ್ಯ ಸಭೆ ಚುನಾವಣೆಯಲ್ಲಿ ನಮ್ಮ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ಬಿಜೆಪಿಗರು ಸಂಪರ್ಕ ಮಾಡಿದ್ದರು. ಆದರೆ ಇದ್ಯಾವುದೂ ಸಾಧ್ಯವಾಗಲಿಲ್ಲ. ಇಂತಹ ನೀತಿಗೆಟ್ಟ ರಾಜಕಾರಣ ಕಂಡು ನನಗೆ ಅಸಹ್ಯವಾಗುತ್ತದೆ. ನಿಮ್ಮ ಪಕ್ಷದ ನಾಯಕರು ಸರ್ಕಾರ ಬೀಳಿಸುವ ವಿಚಾರದಲ್ಲಿ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಯಡಿಯೂರಪ್ಪ ಅವರಿಗೆ ತಿಳಿಸಲು ಬಯಸುತ್ತೇನೆ. ನಿಮ್ಮ ಪಕ್ಷಗಳಲ್ಲಿ ಎಷ್ಟು ಶಾಸಕರು ಕಡಿಮೆ ಆಗುತ್ತಾರೆ ಎಂದು ನಾನು ಈಗ ಚರ್ಚೆ ಮಾಡುವುದಿಲ್ಲ. 

ಕಾಂಗ್ರೆಸ್ ಪಂಚ ಗ್ಯಾರಂಟಿಗಳು ನೈಜ ಜಾತ್ಯಾತೀತ ಕಾರ್ಯಕ್ರಮ: ಸಚಿವ ದಿನೇಶ್ ಗುಂಡೂರಾವ್

ನಾವು ಜನಾಶಿರ್ವಾದದಿಂದ 135 ಹಾಗೂ 3 ಪಕ್ಷೇತರರ ಬೆಂಬಲದೊಂದಿಗೆ ಬಹಳ ಬಲಿಷ್ಠವಾಗಿದ್ದೇವೆ. ಹೀಗಾಗಿ ನಮ್ಮ ಸರ್ಕಾರವನ್ನು ಬೀಳಿಸಲು ಆಗುವುದಿಲ್ಲ ಎಂದರು. ಎರಡು ಪಕ್ಷಗಳ ಅಪವಿತ್ರ ಮೈತ್ರಿಯನ್ನು ಧಿಕ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ಕೊಟ್ಟಿದ್ದೀರಿ. ಇದಕ್ಕಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ನಾವಿಲ್ಲಿಗೆ ಬಂದಿದ್ದೇವೆ. ನಿಮ್ಮ ಬೇಡಿಕೆಗಳನ್ನು ಪುಟ್ಟಣ್ಣ ಅವರು ನಮಗೆ ನೀಡಿದ್ದಾರೆ. ಶಿಕ್ಷಕರ ಬೇಡಿಕೆ, ಎನ್‌ಪಿಎಸ್ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದೇವೆ. ನಾವು ಈಗಾಗಲೇ ಜನರಿಗೆ ಕೊಟ್ಟಿರುವ ಭರವಸೆ ಈಡೆರಿಸುತ್ತಿದ್ದೇವೆ. ನಿಮ್ಮ ಬಗ್ಗೆಯೂ ನಮಗೆ ಸಹಾನುಭೂತಿ ಇದೆ. ನೀವು ತಾಳ್ಮೆ ಕಳೆದುಕೊಳ್ಳುವ ಅಗತ್ಯವಿಲ್ಲ. ನಿಮ್ಮನ್ನು ನಾವು ಕೈ ಬಿಡುವುದಿಲ್ಲ ಎಂದು ಭರವಸೆ ನೀಡಿದರು.

Follow Us:
Download App:
  • android
  • ios