ಕಳೆದ ಬಿಜೆಪಿ ಸರ್ಕಾರದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ಮುಳುಗಿದ್ದರೋ ಅವರ ವಿರುದ್ಧ ಕಾನೂನು ಬದ್ಧವಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ: ಪ್ರಿಯಾಂಕ್‌ ಖರ್ಗೆ  

ಕಲಬುರಗಿ(ಮೇ.31): ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದರೋ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ನಾನು ಆರನೇ ಗ್ಯಾರಂಟಿ ನೀಡಿದ್ದೆ. ಅದರಂತೆ ಕಳೆದ ಬಿಜೆಪಿ ಸರ್ಕಾರದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ಮುಳುಗಿದ್ದರೋ ಅವರ ವಿರುದ್ಧ ಕಾನೂನು ಬದ್ಧವಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. 

ಈ ಕುರಿತು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ಕೆಕೆಆರ್‌ಡಿಬಿ ಅನುದಾನದಲ್ಲಿ ಖಾಸಗಿ ಪ್ರವಾಸ ಕೈಗೊಂಡವರ ಬಗ್ಗೆ ತನಿಖೆಗೆ ಹಿಂದಿನ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ .431 ಕೋಟಿ ಅವ್ಯವಹಾರದ ಬಗ್ಗೆ ಪತ್ರ ಬರೆಯಲಾಗಿತ್ತು ಅಂತ ತಿಳಿಸಿದ್ದಾರೆ. 

ಕಾಂಗ್ರೆಸ್‌ಗೆ ಈಗಲೇ ಅಧಿಕಾರದ ಮದ: ಶಾಸಕ ಎಸ್‌.ಆರ್‌.ವಿಶ್ವನಾಥ್‌ ವಾಗ್ದಾಳಿ

ಹಿಂದಿನ ಮುಖ್ಯಮಂತ್ರಿಗಳಿಗೆ ಬರೆದಿದ್ದ ಪತ್ರಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದ್ದು ಅವರು ತಕ್ಷಣ ಈ ಬಗ್ಗೆ ತನಿಖೆಗೆ ಆದೇಶ ನೀಡಿರುವುದು ಸ್ವಾಗತಾರ್ಹ ಎಂದರು.