ಉಪಚುನಾವಣೆ, ಪರಿಷತ್ ಜಿದ್ದಾಜಿದ್ದಿ, ಸ್ಥಳೀಯ ಸಂಸ್ಥೆಗಳ ಮತಸಮರದ ಬಳಿಕ ಬಹು ನಿರೀಕ್ಷಿತ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಇದರ ಮಧ್ಯೆ ಸಾಹುಕಾರ ಕಾರ್ಯಕರ್ತರಿಗೆ ಕರೆಯೊಂದನ್ನ ಕೊಟ್ಟಿದ್ದಾರೆ.
ಬೆಂಗಳೂರು, (ಡಿ.02): ಇದೇ ಡಿಸೆಂಬರ್ 22 ಹಾಗೂ 27ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟವಾಗಲಿದೆ.
ಗ್ರಾಮ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಘೋಷಣೆ ಆಗುತ್ತಿದ್ದಂತೆ ಹಳ್ಳಿ ಫೈಟ್ ಅಖಾಡದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ. ಈಗಾಗಲೇ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸಿದ್ಧತೆಗಳು ನಡೆಸಿವೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನು ಮಾಡುತ್ತಿದ್ದು, ರಾಜ್ಯದ ಎಲ್ಲಾ ಕಡೆ ಭರ್ಜರಿ ತಯಾರಿ ನಡೆಸಿದೆ.
ಅದರಂತೆ ಬೆಳಗಾವಿಯ ಧರ್ಮನಾಥ್ ಭವನದಲ್ಲಿ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಬೆಳಗಾವಿ ಜಿಪಂ ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ 85 ಸ್ಥಾನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಇದರಿಂದ ಕಾರ್ಯಕರ್ತರು ಗ್ರಾಪಂ ಎಲೆಕ್ಷನ್ ಜತೆಗೆ ಜಿಪಂ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ: ಬಿಜೆಪಿ ಸೇರುವುದಾಗಿ ಘೋಷಿಸಿದ ಕೈ ನಾಯಕ
ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಿಬೇಕು. ಅತೀ ಹೆಚ್ಚು ಗ್ರಾಪಂ. ಬಿಜೆಪಿಗೆ ತೆಕ್ಕೆಗೆ ತೆಗೆದುಕೊಳ್ಳಬೇಕಿದೆ ಎಂದರು.
ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಜಿಲ್ಲಾ ಎಲ್ಲ ಗ್ರಾಮದಲ್ಲಿಯೂ ಸಂಚಾರ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಾತಿ, ಭಾಷೆಯನ್ನು ಬದಿಗಿಟ್ಟು ಕೆಲಸ ಮಾಡಬೇಕು. ಈ ಚುನಾವಣೆ ಮಹತ್ವದ್ದಾಗಿದ್ದು, ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಹೇಳಿದರು.
ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾರೇ ಆಗಿದ್ದರು ಸಹ ಅವರನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಬಿಜೆಪಿ ಪಕ್ಷ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದೆ . ಆದ್ದರಿಂದಲೇ ದೊಡ್ಡ ಪಕ್ಷವಾಗಿದೆ. ಒಗ್ಗಟ್ಟಿನಿಂದ ಏನಾದರು ಮಾಡಬಹುದು ಎನ್ನುವುದಕ್ಕೆ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಾಕ್ಷಿ ಎಂದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 2, 2020, 7:55 PM IST