ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಸರ್ಕಾರ ರಚನೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, ಜನರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. 

ಬೆಂಗಳೂರು (ಮೇ.03): ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಸರ್ಕಾರ ರಚನೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, ಜನರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ನೆರವಾಗಲು ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರರಹಿತ ಸರ್ಕಾರ ರಚನೆ ಮಾಡುವುದು ನಮ್ಮ ಗುರಿಯಾಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಕಾಂಗ್ರೆಸ್‌ ಪ್ರಣಾಳಿಕೆ ಪೂರಕವಾಗಿದೆ. 

ಗ್ಲೋಬಲ್‌ ಕರ್ನಾಟಕ ನಿರ್ಮಾಣಕ್ಕೆ ಪ್ರಣಾಳಿಕೆ ಅಡಿಪಾಯವಾಗಿದೆ ಎಂದರು. ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ರೈತರು, ಹಿಂದುಳಿದವರ ಬದುಕಿನಲ್ಲಿ ಬದಲಾವಣೆ ತರಲು ಪ್ರಣಾಳಿಕೆ ಪೂರಕವಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳ ಸಮಗ್ರ ಅಭಿವೃದ್ಧಿ ಸಾಧ್ಯ. ಹೀಗಾಗಿ ರಾಜ್ಯದ ಜನರು ನಮಗೆ ಅವಕಾಶ ನೀಡಬೇಕು ಎಂದು ಹೇಳಿದರು.

ಗೌಡ್ರ ಹುಡ್ಗ ಸಿಕ್ರೆ ನೋಡಿ, ಮದುವೆ ಆಗುವೆ: ರಮ್ಯಾ

ಕುಸುಮಾ ಪರ ಡಿ.ಕೆ.ಶಿವಕುಮಾರ್‌ ಪ್ರಚಾರ: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌. ಕುಸುಮಾ ಗೆಲುವು ಸಾಧಿಸಿದರೆ ಕ್ಷೇತ್ರದಲ್ಲಿನ ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು. ಮತ್ತಿಕೆರೆಯಲ್ಲಿ ಆಯೋಜಿಸಲಾಗಿದ್ದ ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಚ್‌. ಕುಸುಮಾ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದ ನಂತರದಿಂದ ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌ ಸೇರಿ ದಿನ ಬಳಕೆ ವಸ್ತುಗಳ ಬೆಲೆ ಮೂರು ಪಟ್ಟು ಹೆಚ್ಚಾಗಿದೆ. ಬೆಲೆ ಏರಿಕೆ ನಿಯಂತ್ರಣಕ್ಕೆ ಬರಬೇಕೆಂದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕಿದೆ. 

ಕ್ಷೇತ್ರದ ಮಹಿಳೆಯರು ಮೇ 10ರಂದು ಅಡುಗೆ ಅನಿಲ ಸಿಲಿಂಡರ್‌ಗಳಿಗೆ ಪೂಜೆ ಮಾಡಿ ನಂತರ ಪ್ರಜಾಪ್ರಭುತ್ವ ಸಂವಿಧಾನ ರಕ್ಷಣೆ ಮಾಡಲು ಮತ ಚಲಾಯಿಸಬೇಕು. ಜನ ವಿರೋಧಿ, ಜಾತಿವಾದಿ ಬಿಜೆಪಿಯನ್ನು ಸೋಲಿಸಬೇಕು ಎಂದು ಹೇಳಿದರು. ಎಚ್‌. ಕುಸುಮಾ ಗೆಲುವು ಸಾಧಿಸಿದರೆ ಕ್ಷೇತ್ರದಲ್ಲಿ ಅಕ್ರಮವಿಲ್ಲದ, ಕಾಮಗಾರಿಗಳಿಗೆ ಕಮಿಷನ್‌ ಪಡೆಯದೆ ಉತ್ತಮ ಆಡಳಿತ ನೀಡಲು ಸಹಕಾರಿಯಾಗಲಿದೆ. ಜನರ ಸಮಸ್ಯೆಗಳನ್ನು ಆಲಿಸಿ ಕೂಡಲೆ ಪರಿಹಾರ ನೀಡಲಾಗುತ್ತದೆ ಎಂದರು. 

ಕಾಂಗ್ರೆಸ್‌ನದ್ದು ಬೋಗಸ್‌ ಪ್ರಣಾಳಿಕೆ: ಸಿಎಂ ಬೊಮ್ಮಾಯಿ ಲೇವಡಿ

ಸಂಸದ ಡಿ.ಕೆ. ಸುರೇಶ್‌, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ. ರಾಜಕುಮಾರ್‌, ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಬಿ.ಆರ್‌. ನಂಜುಂಡಪ್ಪ, ನಗರಸಭೆ ಮಾಜಿ ಅಧ್ಯಕ್ಷ ಹನುಂತರಾಯಪ್ಪ ಮೊದಲಾದವರು ಇದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.