‘ವರ್ಡ್ ಪವರ್‌ ಈಸ್‌ ಅ ವರ್ಲ್ಡ್ ಪವರ್‌. ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ನುಡಿದಂತೆ ನಡೆದರೆ ಮಾತ್ರ ನಾಯಕ. ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳಬೇಕು. ಅದೇ ಜಗತ್ತಿನ ದೊಡ್ಡ ಶಕ್ತಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹಾವೇರಿ : ‘ವರ್ಡ್ ಪವರ್‌ ಈಸ್‌ ಅ ವರ್ಲ್ಡ್ ಪವರ್‌. ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ನುಡಿದಂತೆ ನಡೆದರೆ ಮಾತ್ರ ನಾಯಕ. ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳಬೇಕು. ಅದೇ ಜಗತ್ತಿನ ದೊಡ್ಡ ಶಕ್ತಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವೈದ್ಯಕೀಯ ಕಾಲೇಜು ಉದ್ಘಾಟನೆ

ಹಾವೇರಿಯಲ್ಲಿ ಬುಧವಾರ ನಡೆದ ನೂತನ ವೈದ್ಯಕೀಯ ಕಾಲೇಜು ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಡಿಕೆಶಿ, ಅಧಿಕಾರ ಹಸ್ತಾಂತರ ಚರ್ಚೆ ನಡುವೆ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಈ ರೀತಿ ಹೇಳಿದ್ದು ಸಾಕಷ್ಟು ಗಮನ ಸೆಳೆಯಿದೆ.

ನಾಯಕರಾದವರು ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು

ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಭದ್ರಾ ಮೇಲ್ದಂಡೆ ಯೋಜನೆಯನ್ನು ಪ್ರಸ್ತಾಪಿಸಿದರು. ‘ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ₹5,300 ಕೋಟಿ ಘೋಷಣೆ ಮಾಡಿದ್ದರು. ಆದರೆ, ಇದುವರೆಗೂ ಕೊಟ್ಟಿಲ್ಲ, ನಾಯಕರಾದವರು ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು’ ಎಂದು ಮಾರ್ಮಿಕವಾಗಿ ಹೇಳಿದರು.

ರಾಜ್ಯದಲ್ಲಿ ಸಿಎಂ ಹುದ್ದೆ ಕುರಿತಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಒಪ್ಪಂದವಾಗಿದೆ, ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕೆಂಬ ವಿಚಾರ ಬಹು ಚರ್ಚೆಯಲ್ಲಿರುವ ಸಂದರ್ಭದಲ್ಲೇ ಡಿಕೆಶಿ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.