ಬಿಜೆಪಿ- ಜೆಡಿಎಸ್ ಮೈತ್ರಿಗೆ ಠಕ್ಕರ್‌ ನೀಡಲು ಸಂಸದ ಡಿಕೆಸು ಮನೆಯಲ್ಲಿ ಸಭೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿರುವಂತೆ, ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಠಕ್ಕರ್‌ ಕೊಡಲು ಕಾಂಗ್ರೆಸ್‌ ಮುಂದಾಗಿದೆ. 

A meeting was held at MP DK Suresh house to challenge the BJP JDS alliance gvd

ನವದೆಹಲಿ (ಸೆ.21): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿರುವಂತೆ, ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಠಕ್ಕರ್‌ ಕೊಡಲು ಕಾಂಗ್ರೆಸ್‌ ಮುಂದಾಗಿದೆ. ಒಕ್ಕಲಿಗ ಪ್ರಾಬಲ್ಯದ 8 ಜಿಲ್ಲೆಗಳು ಸೇರಿದಂತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿಗೆ ಠಕ್ಕರ್‌ ಕೊಟ್ಟು ಹೆಚ್ಚಿನ ಸ್ಥಾನಗಳನ್ನು ಪಡೆಯಲು ರಣತಂತ್ರ ರೂಪಿಸುತ್ತಿದೆ. ದೆಹಲಿಯಲ್ಲಿ ಬುಧವಾರ ಸಂಸದ ಡಿ.ಕೆ.ಸುರೇಶ್ ಮನೆಯಲ್ಲಿ ಸಭೆ ಸೇರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. 

ಒಕ್ಕಲಿಗ ಪ್ರಾಬಲ್ಯದ 8 ಜಿಲ್ಲೆಗಳು ಸೇರಿದಂತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವಿಗೆ ಅನುಸರಿಸಬೇಕಾದ ತಂತ್ರಗಳ ಕುರಿತು ಚರ್ಚೆ ನಡೆಸಿದರು. ಮಂಡ್ಯ, ಹಾಸನ ಸೇರಿ ಮೈಸೂರು ಪ್ರಾಂತ್ಯದಲ್ಲಿ ಒಕ್ಕಲಿಗ ಮತಗಳು ಚದುರದಂತೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು?. ಉಳಿದ ಕಡೆ ಇತರ ಪ್ರಬಲ ಸಮುದಾಯದ ಮತಗಳನ್ನು ಸೆಳೆಯಲು ಯಾವ ತಂತ್ರ ರೂಪಿಸಬೇಕು. ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಬಿಜೆಪಿಯಲ್ಲಿ ಯಾರು ಅಸಮಾಧಾನಗೊಂಡಿದ್ದಾರೆ?. ಜೆಡಿಎಸ್‌ ನಲ್ಲಿ ಯಾರು ಅಸಮಾಧಾನಗೊಂಡಿದ್ದಾರೆ? ಎಂದು ಪತ್ತೆ ಹಚ್ಚಲು ಯಾರಿಗೆ ಹೊಣೆ ವಹಿಸಬೇಕು?. 

ಅನುದಾನ ಇಲ್ಲದೆ ಆಟ ನಿಲ್ಲಿಸಿದ ಧಾರವಾಡ ರಂಗಾಯಣ: ಸಿಬ್ಬಂದಿಗೆ ಸಂಬಳವೂ ಇಲ್ಲ!

ಅತೃಪ್ತರನ್ನು ಕಾಂಗ್ರೆಸ್ ಗೆ ಕರೆ ತರಲು ಅಥವಾ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿ ಒಳೇಟು ಕೊಡಲು ಯಾವ ರೀತಿಯ ತಂತ್ರಗಾರಿಕೆ ಅಳವಡಿಸಬೇಕು. ಕಾಂಗ್ರೆಸ್ ನಲ್ಲಿ ಅಸಮಾಧಾನಗೊಂಡಿರುವವರನ್ನು ಸಮಾಧಾನಪಡಿಸುವುದು ಹೇಗೆ? ಎಂಬುದು ಸೇರಿದಂತೆ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅಲ್ಲದೆ, ಈ ಚುನಾವಣಾ ತಂತ್ರಗಾರಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಬಳಿಯೂ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ತಿಳಿದು ಬಂದಿದೆ.

Latest Videos
Follow Us:
Download App:
  • android
  • ios