Asianet Suvarna News Asianet Suvarna News

ಚಾಮರಾಜನಗರಕ್ಕೆ ಭೇಟಿ ನೀಡಿದಷ್ಟು ಅಧಿಕಾರ ಗಟ್ಟಿ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಚಾಮರಾಜನಗರಕ್ಕೆ ಭೇಟಿ ಕೊಡುವ ಮೂಲಕ ಗಮನ ಸೆಳೆದಿದ್ದಾರೆ. 

A visit to Chamarajanagar will strengthen the authority Says CM Siddaramaiah gvd
Author
First Published Sep 27, 2023, 10:43 PM IST

ದೇವರಾಜು ಕಪ್ಪಸೋಗೆ

ಚಾಮರಾಜನಗರ (ಸೆ.27): ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಚಾಮರಾಜನಗರಕ್ಕೆ ಭೇಟಿ ಕೊಡುವ ಮೂಲಕ ಗಮನ ಸೆಳೆದಿದ್ದಾರೆ. ಚಾಮರಾಜನಗರಕ್ಕೆ ಮುಖ್ಯಮಂತ್ರಿಯಾದವರು ಬಂದರೇ ಅಧಿಕಾರ ಹೋಗಲಿದೆ ಎಂಬ ಮೌಢ್ಯಕ್ಕೆ ಸಡ್ಡು ಹೊಡೆದು ಹತ್ತಾರು ಬಾರಿ ಭೇಟಿ ಕೊಟ್ಟು ಅನುದಾನದ ಹೊಳೆಯನ್ನೇ ಹರಿಸಿದ್ದರು‌. ಮನಸ್ವಿನಿ ಎಂಬ ಯೋಜನೆಯನ್ನು ಚಾಮರಾಜನಗರ ಜಿಲ್ಲಾಕೇಂದ್ರದಲ್ಲಿ ಚಾಲನೆ ನೀಡಿ ಗಮನ ಸೆಳೆದಿದ್ದರು. ಈಗ ಮತ್ತೆ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಬುಧವಾರ ಭೇಟಿ ಕೊಡುತ್ತಿದ್ದು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಚಾಮರಾಜನಗರ ಜಿಲ್ಲೆಯ ಕೆಡಿಪಿ ಸಭೆ ನಡೆಯುತ್ತಿರುವುದು ಕೂಡ ಇದೇ ಮೊದಲ ಬಾರಿಯಾಗಿದೆ.

ಆಗ 6 ತಿಂಗಳಿಗೆ- ಈಗ 4 ತಿಂಗಳಲ್ಲೇ ಭೇಟಿ: ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ವೇಳೆ 6 ತಿಂಗಳಲ್ಲಿ ಚಾಮರಾಜನಗರ ಜಿಲ್ಲಾಕೇಂದ್ರಕ್ಕೆ ಭೇಟಿ ನೀಡಿದ್ದರು. ಈಗ ಎರಡನೇ ಅವಧಿಯಲ್ಲಿ 4 ತಿಂಗಳಲ್ಲೇ ಚಾಮರಾಜನಗರ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಮೊದಲ ಬಾರಿ ಮಖ್ಯಮಂತ್ರಿಯಾಗಿದ್ದ ವೇಳೆಚಾಮರಾಜನಗರಕ್ಕೆ ಭೇಟಿ ನೀಡಿದ ವೇಳೆ ವಿದ್ಯಾರ್ಥಿಗಳ ಹಾಸ್ಟೆಲ್, ಉಗ್ರಾಣದ ಗೋದಾಮುಗಳು, ಆರ್‌ಟಿಒ ಕಟ್ಟಡ ನಿರ್ಮಾಣ ಸೇರಿದಂತೆ ಹತ್ತಾರು ಯೋಜನೆಗಳಿಗೆ ನೂರಾರು ಕೋಟಿ ರು. ಅನುದಾನ ನೀಡಿ ಚಾಮರಾಜನಗರ ಅಭಿವೃದ್ಧಿಗೆ ನಾಂದಿ ಹಾಡಿದ್ದರು. 

ಲವ್ ಜಿಹಾದ್‌ಗೆ ಹೆಣ್ಣು ಮಕ್ಕಳು ಬಲಿಯಾಗದಂತೆ ನೋಡಿಕೊಳ್ಳಿ: ಪೇಜಾವರ ಶ್ರೀ

ಈಗ ಚಾಮರಾಜನಗರದಲ್ಲೇ ಕೆಡಿಪಿ ಸಭೆ ನಡೆಸಲಿದ್ದು ಚಾಮರಾಜನಗರದ ಅಭಿವೃದ್ಧಿ ಸಂಬಂಧ ನಿರೀಕ್ಷೆ ಗರಿಗೆದರಿದೆ. ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತೆ ಅನ್ನೋ‌ ವಿಚಾರ ಸುಳ್ಳು. ನಾನು ಯಾವಾಗಲೂ ಗಟ್ಟಿಯಾಗಿಯೆ ಇದ್ದೇನೆ. ಗಟ್ಟಿಯಾಗೇ ಇರುತ್ತೇನೆ. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತೆ ಅನ್ನೊ ಅಪವಾದ ಇಲ್ಲ. ಚಾಮರಾಜನಗರಕ್ಕೆ ಸಿಎಂ ಹೋಗುತ್ತಿರುವುದೇ ಗಟ್ಟಿಯಾಗಿ ಇರುವುದಕ್ಕೆ.

ಜಿಲ್ಲೆಯ ಜನರಲ್ಲಿ ಗರಿಗೆದರಿದ ನಿರೀಕ್ಷೆ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೌಢ್ಯವನ್ನು ಕಿತ್ತೆಸೆದು ಈಗಾಗಲೇ ಮೊದಲ ಅವಧಿಯಲ್ಲಿ 12 ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬುಧವಾರ ಪುನಃ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ. 2ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸದ ನಂತರ ಸಿದ್ಧರಾಮಯ್ಯ ಅವರು ಮೊದಲ ಬಾರಿಗೆ ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ಸ್ವಾಗತಕ್ಕೆ ಜಿಲ್ಲಾಡಳಿತವು ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ಬುಧವಾರ ಶ್ರೀ ಮಲೈ ಮಹದೇಶ್ವರಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ನಾಳೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಹಮ್ಮಿಕೊಂಡಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಂತರ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುವುದಲ್ಲದೇ ಜಿಲ್ಲಾ ಕೇಂದ್ರದಲ್ಲಿಯೇ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಯೊಬ್ಬರು ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕೆಡಿಪಿ ಸಭೆ ನಡೆಸುತ್ತಿರುವುದು ವಿಶೇಷ. ಇದೇ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುತ್ತಾರೆಯೇ ಎಂದು ಜನರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಕಾವೇರಿಗಾಗಿ ಹೋರಾಟ ಬರೀ ನಾಟಕ: ಮೊದಲು ಕೊಡಗಿನ ಪರಿಸರ ಉಳಿಸಿ ಎಂದ ಮುತ್ತಣ್ಣ

ಬರಗಾಲಪೀಡಿತ ಜಿಲ್ಲೆ ಘೋಷಣೆಯಾಗುವುದೇ: ರಾಜ್ಯದಲ್ಲಿ ಬರದ ಛಾಯೆ ಇದ್ದು ಈಗಾಗಲೇ ಹಲವಾರು ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆ ಎಂದು ಸರ್ಕಾರ ಘೋಷಣೆ ಮಾಡಲಾಗಿದೆ. ಆದರೆ ಚಾಮರಾಜನಗರದಲ್ಲಿ ಈಬಾರಿ ಮಳೆ ಸಂಪೂರ್ಣ ಕೈಕೊಟ್ಟಿದ್ದು, ಬರ ಎದ್ದುಕಾಣುತ್ತಿದೆ. ಆದರೂ ಸಹ ಸಂಪೂರ್ಣ ಚಾಮರಾಜನಗರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿರುವುದಿಲ್ಲ. ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿರುವುದರಿಂದ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವರೇ ಎಂದು ಕಾದು ನೋಡಬೇಕಿದೆ.

Follow Us:
Download App:
  • android
  • ios