ಲೋಕಸಭಾ ಚುನಾವಣೆಗೆ 4 ರಾಜ್ಯಗಳಲ್ಲಿ ಹೊಂದಾಣಿಕೆ ಸೀಟು ಅಂತಿಮಗೊಳಿಸಿದ ಕಾಂಗ್ರೆಸ್

ಬಿಜೆಪಿ ಸರ್ಕಾರವನ್ನು ಕೆಡವಲು ರಚಿಸಲಾಗಿರುವ ಇಂಡಿಯಾ ಕೂಟದ ಆಪ್‌ ಹಾಗೂ ಕಾಂಗ್ರೆಸ್‌ ನಾಲ್ಕು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಅಂತಿಮಗೊಳಿಸಿದೆ ಎಂದು ಹೇಳಲಾಗಿದೆ.

AAP Congress finalise seat-sharing formula for Lok Sabha election 2024 gow

ನವದೆಹಲಿ (ಫೆ.24): ಬಿಜೆಪಿ ಸರ್ಕಾರವನ್ನು ಕೆಡವಲು ರಚಿಸಲಾಗಿರುವ ಇಂಡಿಯಾ ಕೂಟದ ಆಪ್‌ ಹಾಗೂ ಕಾಂಗ್ರೆಸ್‌ ನಾಲ್ಕು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಅಂತಿಮಗೊಳಿಸಿದೆ ಎಂದು ಹೇಳಲಾಗಿದೆ.

ಈ ಪೈಕಿ ದೆಹಲಿಯ7 ಕ್ಷೇತ್ರಗಳಲ್ಲಿ ಆಪ್‌ 4, ಕಾಂಗ್ರೆಸ್‌ 3 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಇನ್ನು ಗೋವಾದಲ್ಲಿ ಒಂದು ಆಪ್‌ ಹಾಗೂ ಇನ್ನೊಂದರಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ.

ಗುಜರಾತ್‌ನಲ್ಲಿ 2 ಕ್ಷೇತ್ರದಲ್ಲಿ ಆಪ್‌ ಹಾಗೂ ಮಿಕ್ಕ 24 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧೆ ಮಾಡಲಿದೆ. ಹರ್ಯಾಣದಲ್ಲಿ ಆಪ್‌ 1 ಸೀಟು ಹಾಗೂ ಕಾಂಗ್ರೆಸ್‌ 9 ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಯಲಿದೆ. ಇದರೊಂದಿಗೆ ಚಂಡೀಗಢದ ಏಕೈಕ ಲೋಕಸಭೆ ಕ್ಷೇತ್ರದಲ್ಲಿ ಆಪ್‌ ಕಣಕ್ಕಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳ: ವೇಶ್ಯಾವಾಟಿಕೆ ಕೇಸಲ್ಲಿ ಬಿಜೆಪಿ ನಾಯಕ ಬಂಧನ, ಅಮಾಯಕರ ಮೇಲೆ ಟಿಎಂಸಿ ನಾಯಕರ ಅತ್ಯಾಚಾರ!

ಮಾ.13 ಬಳಿಕ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ: ಲೋಕಸಭೆಯ ಸಾರ್ವತ್ರಿಕ ಚುನಾವಣೆ ಏಪ್ರಿಲ್‌, ಮೇ ತಿಂಗಳಿನಲ್ಲಿ ನಡೆಯುವ ನಿರೀಕ್ಷೆ ಇದ್ದು, ಮಾ.13ರ ಬಳಿಕ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. 

ಚುನಾವಣೆ ಸಿದ್ಧತೆ ಪರಿಶೀಲನೆ ಸಲುವಾಗಿ ಆಯೋಗ ಈಗಾಗಲೇ ಹಲವಾರು ರಾಜ್ಯಗಳಿಗೆ ಭೇಟಿ ನೀಡುತ್ತಿದೆ. ಆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ದಿನಾಂಕ ಘೋಷಿಸಲಾಗುತ್ತದೆ.  ಸದ್ಯ ತಮಿಳುನಾಡಿನಲ್ಲಿ ಆಯೋಗ ಪರಿಶೀಲನೆ ಸಭೆ ನಡೆಸುತ್ತಿದೆ. ಬಳಿಕ ಉತ್ತರಪ್ರದೇಶ ಹಾಗೂ ಜಮ್ಮು-ಕಾಶ್ಮೀರಕ್ಕೆ ತೆರಳಲಿದೆ. 

ಸಂದೇಶ್‌ಖಾಲಿ ಸಾಮೂಹಿಕ ರೇಪ್‌ ಕೇಸ್‌, ಬಂಗಾಳದಲ್ಲಿ ಭುಗಿಲೆದ್ದ ಸಂಘರ್ಷ ಟಿಎಂಸಿ ನಾಯಕರ ಆಸ್ತಿಗಳಿಗೆ ಬೆಂಕಿ

ಈ ಭೇಟಿಗಳು ಮುಗಿದ ಬಳಿಕ ದಿನಾಂಕ ಪ್ರಕಟ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. 2014ರಲ್ಲಿ ಮಾ.5ಕ್ಕೆ ಚುನಾವಣೆ ಘೋಷಣೆಯಾಗಿತ್ತು.  2019ರಲ್ಲಿ ಮಾ.10ಕ್ಕೆ ಚುನಾವಣೆ ಘೋಷಣೆಯಾಗಿತ್ತು. 

ಪ್ರಧಾನಿ ನರೇಂದ್ರ ಮೋದಿಯವರು ಮಾ.3ರಂದು ಮಂತ್ರಿ ಪರಿಷತ್‌ ಸಭೆ ಕರೆದಿದ್ದು, ಅದರಲ್ಲಿ ಚುನಾವಣೆಯ ಬಗ್ಗೆ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ.

Latest Videos
Follow Us:
Download App:
  • android
  • ios