2019ರಲ್ಲಿ ಕಾಂಗ್ರೆಸ್ ಪಕ್ಷ ಸೇರಿ ಬಿಜೆಪಿ ಸೇರಿದ್ದ ಮಾಜಿ ಸಚಿವ ಎಬಿ ಮಾಲಕರೆಡ್ಡಿ, ಶನಿವಾರ ಬಿಜೆಪಿ ಪಕ್ಷಕ್ಕೂ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೆ ರಾಜೀನಾಮೆ ನೀಡಿರುವ ಅವರು ಜೆಡಿಎಸ್‌ ಪಕ್ಷ ಕೂಡಿಕೊಂಡಿದ್ದಾರೆ. 

ಯಾದಗಿರಿ (ಏ.15): ಆ ಪಕ್ಷದಿಂದ ಈ ಪಕ್ಷಕ್ಕೆ, ಈ ಪಕ್ಷದಿಂದ ಆ ಪಕ್ಷಕ್ಕೆ ಹಾರಾಟ ಮಾಡುತ್ತಲೇ ಸುದ್ದಿಯಲ್ಲಿದ್ದ ಮಾಜಿ ಶಾಸಕ ಹಾಗೂ ಸಚಿವ ಎಬಿ ಮಾಲಕರೆಡ್ಡಿ ಬಿಜೆಪಿಗೆ ಗುಡ್‌ಬೈ ಹೇಳಿದ್ದರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಮಾಲಕರೆಡ್ಡಿ ಸಲ್ಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ಗೆ ಮಾಲಕರೆಡ್ಡಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಅದರೊಂದಿಗೆ ಮಾಲಕರೆಡ್ಡಿ 'ಕಮಲ' ಬಿಟ್ಟು ತೆನೆ ಹೊತ್ತಿದ್ದು ಖಚಿತವಾಗಿದೆ. ಜೆಡಿಎಸ್‌ನಿಂದ ಅವರು ಯಾದಗಿರಿ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇದಕ್ಕಾಗಿ ದೇವೇಗೌಡರ ಕೈಯಿಂದ ಎಬಿ ಮಾಲಕರೆಡ್ಡಿ ಬಿ ಫಾರ್ಮ್‌ಅನ್ನು ಪಡೆದುಕೊಂಡಿದ್ದಾರೆ. ಶನಿವಾರ ಬೆಂಗಳೂರಿನ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಮಾಲಕರೆಡ್ಡಿ ಬಿ ಫಾರ್ಮ್‌ ಅನ್ನು ಸ್ವೀಕರಿಸಿದ್ದರು. ಶಹಾಪುರ ಕ್ಷೇತ್ರಕ್ಕೆ ಟಿಕೆಟ್ ಸಿಗದ ಕಾರಣಕ್ಕೆ ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದ ಮಾಜಿ ಶಾಸಕ ಗುರುಪಾಟೀಲ್ ಶಿರವಾಳ. ಶಿರವಾಳ ಬೆನ್ನಲ್ಲೇ ಇಂದು ಮಾಲಕರೆಡ್ಡಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ಕಾಂಗ್ರೆಸ್‌ಗೆ ಮತ್ತಷ್ಟು ಬಂಡಾಯ, ಪ್ರತಿಭಟನೆಯ ಬಿಸಿ: ಪಕ್ಷ ಬಿಡಲು ಮಾಲಕರೆಡ್ಡಿ ಪುತ್ರಿ ಸಿದ್ಧತೆ

ಕಾಂಗ್ರೆಸ್ ನಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಾಲಕರೆಡ್ಡಿ ಅವರು ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರನ್ನ ಸೋಲಿಸಿದ ರೂವಾರಿಗಳಲ್ಲಿ ಮಾಲಕರೆಡ್ಡಿ ಕೂಡ ಒಬ್ಬರಾಗಿದ್ದರು. ಈಗ ಟಿಕೆಟ್‌ ಸಿಗದ ಹಿನ್ನಲೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್‌ ಸೇರಿದ್ದಾರೆ.

ಯಾದಗಿರಿ: ಮಾಲಕರೆಡ್ಡಿಗೆ ಕೈ ಕೊಟ್ಟ ಕಾಂಗ್ರೆಸ್‌..!