ಮುಂಬರುವ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸಲು ಕಾರ್ಯಕ್ರಮ ಡಿ.ಕೆ.ಶಿವಕುಮಾರ್ ಅವರಿಗೆ ಹೊಸ ತಂಡ ನೀಡುವ ಪ್ರಕ್ರಿಯೆ ಆರಂಭಿಸಿರುವ ಹೈಕಮಾಂಡ್
ಬೆಂಗಳೂರು (ಅ.03): ಮುಂಬರುವ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಹೊಸ ತಂಡ ನೀಡುವ ಪ್ರಕ್ರಿಯೆ ಆರಂಭಿಸಿರುವ ಹೈಕಮಾಂಡ್ ಮೊದಲ ಹಂತವಾಗಿ ಕೆ.ಅಬ್ದುಲ್ ಜಬ್ಬಾರ್ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರನ್ನಾಗಿ ನೇಮಿಸಿದೆ.
ಪ್ರಮುಖ ಅಲ್ಪಸಂಖ್ಯಾತ ಮುಖಂಡ, ವಿಧಾನ ಪರಿಷತ್‌ನ ಮಾಜಿ ಸದಸ್ಯ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದ ಅಬ್ದುಲ್ ಜಬ್ಬಾರ್ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಡಿ.ಕೆ.ಶಿವಕುಮಾರ್ ಅವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನುಮೋದಿಸಿದ್ದು ಅದರಂತೆ ಪಕ್ಷ ಶುಕ್ರವಾರ ಈ ನೇಮಕ ಮಾಡಿ ಆದೇಶಿಸಿದೆ.
ಕಾಂಗ್ರೆಸ್ ನಲ್ಲಿ ಮಾತ್ರ ಗಾಂಧಿಯಂಥ ಆದರ್ಶ ವ್ಯಕ್ತಿಗಳು ಸಿಗುತ್ತಾರೆ : ಡಿಕೆಶಿ
ಕೆಪಿಸಿಸಿಯ ಎಲ್ಲಾ ಮುಂಚೂಣಿ ಘಟಕಗಳು, ವಿವಿಧ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಬದಲಾವಣೆಗೆ ಕೆಪಿಸಿಸಿ ಅಧ್ಯಕ್ಷರು ಇತ್ತೀಚೆಗೆ ದೆಹಲಿಗೆ ತೆರಳಿ ಹೈಕಮಾಂಡ್‌ಗೆ ಪ್ರಸ್ತಾವನೆ ಸಲ್ಲಿಸಿದ್ದರು. ಆ ಎಲ್ಲಾ ಪ್ರಸ್ತಾವನೆಗಳನ್ನೂ ಒಟ್ಟಿಗೇ ಪರಿಗಣಿಸಿ ಆದೇಶ ಮಾಡಿದರೆ ಪಕ್ಷದಲ್ಲಿ ಅಸಮಾಧಾನ, ಸಮಸ್ಯೆಯಾಗಬಹುದು ಎಂಬ ಕಾರಣಕ್ಕೆ ಒಂದೊಂದೇ ಘಟಕಕ್ಕೆ ಹೈಕಮಾಂಡ್ ಹೊಸ ನೇಮಕಾತಿ ಆದೇಶ ಮಾಡಲಾರಂಭಿಸಿದೆ. ಮೊದಲ ಹಂತವಾಗಿ ಈಗ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ಅಬ್ದುಲ್ ಜಬ್ಬಾರ್ ಅವರನ್ನು ನೇಮಕ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ದಿಲ್ಲಿ ಟೂರ್ : ಕೆಪಿಸಿಸಿ ಅಧ್ಯಕ್ಷ ಕನಕಪುರ ಬಂಡೆ ಡಿಕೆ ಶಿವಕುಮಾರ್ ದೆಹಲಿಯಲ್ಲಿ ತೆರಳಿ ಮಾತುಕತೆ ನಡೆಸಿದ್ದಾರೆ. ಡಿಕೆಶಿ ದಿಢೀರ್ ದೆಹಲಿ ಭೇಟಿ ಅಚ್ಚರಿ ಮತ್ತು ಕುತೂಹಲಕ್ಕೆ ಕಾರಣವಾಗಿತ್ತು.
ಡಿಕೆಶಿ ದಿಢೀರ್ ದೆಹಲಿಗೆ: ಸೋನಿಯಾ, ರಾಹುಲ್ ಭೇಟಿಗೆ ಕೆಪಿಸಿಸಿ ಅಧ್ಯಕ್ಷ ಯತ್ನ!
ಕಾಂಗ್ರೆಸ್‌ಗೆ ಬರುವವರ ಆಪರೇಷನ್ ಲಿಸ್ಟ್ ಹಿಡಿದು ದೆಹಲಿ ಹೋದರಾ ಡಿಕೆಶಿ ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೆ ಹಲವರು ಬಿಜೆಪಿ, ಜೆಡಿಎಸ್‌ನಿಂದ ಕಾಂಗ್ರೆಸ್ ಸೇರುತ್ತಿದ್ದಾರೆ ಎನ್ನುವ ಚರ್ಚೆಯೂ ಜೋರಾಗಿದೆ.
ಈಗಾಗಲೆ ಜಿಡಿ ದೇವೆಗೌಡ, ಶ್ರೀನಿವಾಸ್ ಸೇರಿದಂತೆ ಅನೇಕ ಹೆಸರುಗಳು ಕನ್ಫರ್ಮ್ ಲಿಸ್ಟ್‌ನಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಕೆಪಿಸಿಸಿಯಲ್ಲಿ ಚುನಾವನಾ ತಯಾರಿಯೂ ಜೊರಾಗಿಯೇ ನಡೆಯುತ್ತಿದೆ.
