ಕಾಂಗ್ರೆಸ್‌ನಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದರು. ಅವರ ನಾಮಪತ್ರಗಳು ಅಂಗೀಕೃತಗೊಂಡಿವೆ.
ಬೆಂಗಳೂರು(ಜೂ.22): ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪೈಕಿ ಪಕ್ಷೇತರ ಅಭ್ಯರ್ಥಿ ಡಾ.ಕೆ.ಪದ್ಮರಾಜನ್ ಉಮೇದುವಾರಿಕೆ ಸೂಚಕರಿಲ್ಲದ ಕಾರಣ ತಿರಸ್ಕೃತವಾಗಿದ್ದು, ಇನ್ನುಳಿದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಂಗೀಕಾರಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್‌ನಿಂದ ಯಾವುದೇ ಅಭ್ಯರ್ಥಿಗಳು ಕಣಕ್ಕಿಳಿಯದಿರುವ ಕಾರಣ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳು ಮೇಲ್ಮನೆಗೆ ಆಯ್ಕೆಯಾಗುವುದು ಖಚಿತವಾಗಿದೆ. ಶುಕ್ರವಾರ ನಾಮಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಅಂದು ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯ ಕುರಿತು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ನೇತೃತ್ವದಲ್ಲಿ ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಿತು. ಕಾಂಗ್ರೆಸ್‌ನಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದರು. ಅವರ ನಾಮಪತ್ರಗಳು ಅಂಗೀಕೃತಗೊಂಡಿವೆ.
ವಿಧಾನ ಪರಿಷತ್ ಚುನಾವಣೆಗೆ ಸಚಿವ ಬೋಸರಾಜು, ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಕೊಟ್ಟ ಕಾಂಗ್ರೆಸ್
ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಡಾ.ಕೆ.ಪದ್ಮರಾಜನ್ ನಾಮಪತ್ರವನ್ನು, ಸೂಚಕರಿಲ್ಲದ ಕಾರಣ ತಿರಸ್ಕರಿಸಲಾಗಿದೆ.
