Asianet Suvarna News Asianet Suvarna News

ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಮತ್ತೆ ಭುಗಿಲೆದ್ದ ಅಸಮಾಧಾನ: ಟಿಕೆಟ್ ನೀಡದಂತೆ ಆಗ್ರಹಿಸಿದ ಕಾರ್ಯಕರ್ತರು

ಸೊರಬ ಬಿಜೆಪಿ ಪಾಳಯದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಮತ್ತೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ. 

Activists demanded not to give BJP ticket to MLA Kumar Bangarappa At Shivamogga gvd
Author
First Published Mar 26, 2023, 12:55 PM IST

ಶಿವಮೊಗ್ಗ (ಮಾ.26): ಸೊರಬ ಬಿಜೆಪಿ ಪಾಳಯದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಮತ್ತೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ಹಾಲಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಬಿಜೆಪಿಗೆ ನಾಯಕನಿಗೆ ನಮೋ ವೇದಿಕೆ ತಲೆನೋವಾಗಿ ಪರಿಣಮಿಸಿದೆ. ಸೊರಬ ತಾಲೂಕಿನ ಮೂಲ ಬಿಜೆಪಿಯ ಹಿರಿಯ ಮುಖಂಡರುಗಳು ಕುಮಾರ್ ಬಂಗಾರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ತಾಲೂಕಿನ ಆನವಟ್ಟಿಯಲ್ಲಿ ಬೈಕ್‌ ರ್ಯಾಲಿ ನಡೆಸಿದ್ದಾರೆ. 

ನಮೋ ವೇದಿಕೆಯಿಂದ  ಕೋಟಿಪುರ ವೃತ್ತದಿಂದ ಆನವಟ್ಟಿಯವರೆಗೂ ನಡೆದ ಬೃಹತ್ ಬೈಕ್ ರ್ಯಾಲಿಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿ ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಪದ್ಮನಾಭ ಭಟ್ ಹಾಗೂ ಸೊರಬ ನಮೋ ವೇದಿಕೆಯ ಪಾಣಿ ರಾಜಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಮೋ ವೇದಿಕೆ ಕಾರ್ಯಕರ್ತರು ಆನವಟ್ಟಿಯಲ್ಲಿ ಬಹಿರಂಗ ಸಭೆ ನಡೆಸಿದ್ದು, ಕುಮಾರ್ ಬಂಗಾರಪ್ಪಗೆ ಬಿಜೆಪಿ ಟಿಕೆಟ್ ನೀಡದಂತೆ ಆಗ್ರಹಿಸಿದ್ದಾರೆ.

ಮೀಸಲಾತಿ ಬಗ್ಗೆ ವಿಧಾನಸಭೆಯಲ್ಲಿ ಮೊದಲು ಧ್ವನಿ ಎತ್ತಿದ್ದೇ ನಾನು: ಬಸನಗೌಡ ಪಾಟೀಲ ಯತ್ನಾಳ್‌

ಸೊರ​ಬ​ದಲ್ಲಿ ಕುಮಾರ ಬಂಗಾರಪ್ಪ ಗೆಲ್ಲಿಸಿ: ಮಾಜಿ ಸಚಿವರು, ಹಾಲಿ ಜನಪ್ರಿಯ ಶಾಸಕರು ಮತ್ತು ಅಭಿವೃದ್ಧಿಯ ದೃಷ್ಠಿಯಿಂದ ಜನಮನ್ನಣೆ ಗಳಿಸಿರುವ ಕುಮಾರ್‌ ಬಂಗಾರಪ್ಪ ಅವರಿಗೆ ಮುಂದಿನ ದಿನಗಳಲ್ಲೂ ಬೆಂಬಲವನ್ನು ನೀಡಬೇಕು ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೊರಬ ವಿಧಾನಸಭಾ ಕ್ಷೇತ್ರದಿಂದ ಕುಮಾರ್‌ ಬಂಗಾರಪ್ಪನವರಿಗೆ ಬಿಜೆಪಿ ಟಿಕೆಟ್‌ ಖಚಿತ ಎನ್ನುವ ಸುಳಿವು ನೀಡಿದರು. 

ಪಟ್ಟಣದಲ್ಲಿ ಜಲ ಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮ ನಿಯಮಿತಿ ವತಿಯಿಂದ 285 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಮೂಡಿ ಏತ ನೀರಾವರಿ ಯೋಜನೆ ಮತ್ತು ಖಾಸಗಿ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ .2 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಎಸ್‌.ಬಂಗಾರಪ್ಪ ಮೆಮೋರಿಯಲ್‌ ಸ್ಪೋಟ್ಸ್‌ರ್‍ ಅಕಾಡೆಮಿ ಲೋಕಾರ್ಪಣೆಗೊಳಿಸಿ ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ .18 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಾರಾಯಣಗುರು ವಸತಿ ಶಾಲೆ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವ​ರು ಮಾತನಾಡಿದರು.

ಅಂಬೇಡ್ಕರ್‌ ಸೋಲಿಸಿದ ಕಾಂಗ್ರೆಸ್‌ ತಿರಸ್ಕರಿಸಿ: ಶಾಸಕ ರಮೇಶ್‌ ಜಾರಕಿಹೊಳಿ ಕರೆ

ಕುಮಾರ ಬಂಗಾರಪ್ಪ ಈಗಾಗಲೇ ತಾಲೂಕಿನ ಅಭಿವೃದ್ಧಿಗಾಗಿ ಏನೆಲ್ಲಾ ಕೆಲಸಗಳನ್ನು ಮಾಡಿ ತೋರಿಸಿದ್ದಾರೆ ಎನ್ನುವುದನ್ನು ತಿಳಿಸಿ ಹೇಳುವ ಅವಶ್ಯಕತೆ ಇಲ್ಲ. ಅವರು ಮಾಡಿರುವ ಅಭಿವೃದ್ಧಿ ಕಾರ್ಯಕ್ಕೆ ಮುಂದಿನ ದಿನಗಳಲ್ಲೂ ತಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕು. ಪ್ರತಿಯೊಬ್ಬರೂ ಒಂದಾಗಿ, ಒಟ್ಟಾಗಿ, ಸಂಘಟಿತರಾಗಿ ಪಕ್ಷವನ್ನು ಬಲಪಡಿಸಬೇಕು ಎಂದು ಕರೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ನೇತ್ವತ್ವದಲ್ಲಿ ರಾಷ್ಟ್ರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವುದರ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುತ್ತದೆ ಎನ್ನುವ ವಿಶ್ವಾಸ ತಮಗಿದೆ. ಹಾಗಾಗಿ ತಮ್ಮ ಆಶೀರ್ವಾದ ಮತ್ತು ಬೆಂಬಲ ಸದಾ ಇರಲಿ ಎಂದರು.

Follow Us:
Download App:
  • android
  • ios