ನವದೆಹಲಿ, [ಜ.10]: ನಟ ಪ್ರಕಾಶ್ ರೈ ವರು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರನ್ನ ಭೇಟಿ ಮಾಡಿದ್ದಾರೆ.

ಇಂದು [ಗುರುವಾರ]  ಪ್ರಕಾಶ್ ರೈ ಅವರು ದೆಹಲಿಯಲ್ಲಿರುವ ಅರವಿಂದ್ ಕೇಜ್ರಿವಾಲ್​ ಅವರ  ನಿವಾಸಕ್ಕೆ ಭೇಟಿ ನೀಡಿ ಕೆಲ ಕಾಲ ಮಾತುಕತೆ ನಡೆಸಿದರು. 

ಪಕ್ಷೇತರ ಅಭ್ಯರ್ಥಿಯಾಗಿ ಪ್ರಕಾಶ್ ರೈ ಸ್ಪರ್ಧೆ : ಕ್ಷೇತ್ರವೂ ಬಹಿರಂಗ..!

ಈ ಬಗ್ಗೆ ಆಪ್,​ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ನಟ ಪ್ರಕಾಶ್ ರೈ, ದೆಹಲಿ ಸಿಎಂ ಹಾಗೂ ಆಪ್ ವರಿಷ್ಠ ಅರವಿಂದ್ ಕೇಜ್ರಿವಾಲ್​ ಅವರನ್ನ ಭೇಟಿ ಆದರು. ಈ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು ಎಂದು ತಿಳಿಸಿದೆ. 

ಸದ್ಯ ಪ್ರಕಾಶ್ ರೈ ಯಾಕೆ ಅರವಿಂದ್ ಕೇಜ್ರಿವಾಲ್​ರನ್ನು ಭೇಟಿಯಾದರು?  ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ? ಅನ್ನೋದರ ಬಗ್ಗೆ ಅಚ್ಚರಿ ಮೂಡಿಸಿದೆ.

ಲೋಕಸಭಾ ಚುನಾವಣೆಗೆ ಪ್ರಕಾಶ್ ರೈ ಸ್ಪರ್ಧೆ!: ಯಾವ ಪಕ್ಷ, ಕ್ಷೇತ್ರದಿಂದ ಸ್ಪರ್ಧಿಸ್ತಾರೆ?

ಈಗಾಗಲೇ ಬೆಂಗಳೂರು ಕೇಂದ್ರದಿಂದ ಲೋಕಸಭೆ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಪ್ರಕಾಶ್ ರೈ ಘೋಷಿಸಿದ್ದಾರೆ. 

ಇನ್ನು ಲೋಕಸಭಾ ಚುನಾವಣೆಯಲ್ಲಿ ಪ್ರಕಾಶ್ ರೈಗೆ ಬೆಂಬಲ ನೀಡುತ್ತೇವೆಂದು ಈಗಾಗಲೇ ಕರ್ನಾಟಕ ರಾಜ್ಯ ಆಪ್ ಘೋಷಿಸಿದೆ.

ಈ ಬಗ್ಗೆ ಏನಾದ್ರೂ ಚರ್ಚೆ ಮಾಡಿರುವ ಸಾಧ್ಯತೆಗಳಿವೆ. ಒಟ್ಟಿನಲ್ಲಿ ಲೋಕಸಭಾ ಎಲೆಕ್ಷನ್ ಹತ್ತಿರವಾಗುತ್ತಿದ್ದಂತೆ ರೈ ತ್ತ-ಇತ್ತ ಓಡಾಡುತ್ತಿದ್ದು, ಇದೀಗ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿರುವುದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ.