kpcc ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಸ್ಯಾಂಡಲ್‌ವುಡ್ ನಟ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿದರು. ರಾಜಕೀಯ ಬದಲಾವಣೆ ಬೆನ್ನಲ್ಲೇ ಈ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು (ಮಾ.16): ಗೀತಾ ಶಿವರಾಜ್‌ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆಗಳು ಆರಂಭವಾದ ಬೆನ್ನಲ್ಲೇ ಅವರ ಪತಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಇತ್ತೀಚೆಗೆ ಗೀತಾ ಅವರ ಸಹೋದರ ಹಾಗೂ ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಗೀತಾ ಸಹ ಕಾಂಗ್ರೆಸ್ ಸೇರ್ಪಡೆಯಾಗುವ ಆಸಕ್ತಿ ಹೊಂದಿದ್ದಾರೆ ಎಂದಿದ್ದರು.
ಇದರ ಬೆನ್ನಲ್ಲೇ ಸದಾಶಿವನಗರದ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿರುವ ಶಿವರಾಜ್‌ಕುಮಾರ್, ಇದೊಂದು ಖಾಸಗಿ ಭೇಟಿ. ವೈಯಕ್ತಿಕ ವಿಚಾರಗಳನ್ನು ಮಾತ್ರವೇ ಚರ್ಚಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್ ಸೇರ್ತಾರೆ? ಸುಳಿವು ಕೊಟ್ಟ ಡಿಕೆಶಿ!
ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ: ಶಿವರಾಜ್‌ಕುಮಾರ್ ಭೇಟಿ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ’ ಎಂದರು.
ಮಧು ಬಂಗಾರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಆ ಬಗ್ಗೆ ಹೆಚ್ಚು ಹೇಳುವುದಿಲ್ಲ. ಮಧು ಬಂಗಾರಪ್ಪ ಅವರಿಗೆ ಆ ಬಗ್ಗೆ ಮಾತನಾಡುವ ಹಕ್ಕಿರುವುದರಿಂದ ಮಾತನಾಡಿದ್ದಾರೆ. ಸಂದರ್ಭ ಬಂದಾಗ ಗೀತಾ ಅವರೇ ಮಾತನಾಡುತ್ತಾರೆ. ಅವರು ಕಾಂಗ್ರೆಸ್ ಸೇರುವ ಕುರಿತು ಕಾದು ನೋಡಿ ಎಂದು ಹೇಳಿದರು.
ಶಿವರಾಜ್ ಕುಮಾರ್ ಅವರು ನಮ್ಮ ಆತ್ಮೀಯರು. ಅವರ ಕುಟುಂಬ ಇಡೀ ದೇಶ ಹಾಗೂ ರಾಜ್ಯದ ಆಸ್ತಿ. ಆ ಕುಟುಂಬದ ಮೇಲೆ ನಮಗೆ ಅಪಾರ ಗೌರವವಿದೆ. ನಮಗೂ ಅವರ ಜತೆ ವೈಯಕ್ತಿಕ ಸಂಬಂಧಗಳಿವೆ ಎಂದರು.
